ವರ್ಷದ ವಿಶೇಷ : 2017ರ ಕರ್ನಾಟಕದ 10 ಪ್ರಮುಖ ಸುದ್ದಿಗಳು
ಬೆಂಗಳೂರು, ಡಿಸೆಂಬರ್ 28 : 2017 ಮುಗಿಯುತ್ತಾ ಬಂದಿದೆ, ಹೊಸ ಕನಸುಗಳು, ಹೊಸ ನಿರೀಕ್ಷೆಗಳ ಜೊತೆ ಹೊಸ ವರ್ಷವನ್ನು ನಾವು ಸ್ವಾಗತಿಸಬೇಕಿದೆ. ಕರ್ನಾಟಕದಲ್ಲಿ ಈ ವರ್ಷ ನಡೆದ ಪ್ರಮುಖ ಘಟನೆಗಳ ಚಿತ್ರಣವನ್ನು ಒಮ್ಮೆ ಅವಲೋಕಿಸೋಣ.
2017ರ ಜನವರಿ 1ರಂದು ರಾಜ್ಯ, ದೇಶ ಮಟ್ಟದಲ್ಲಿ ಸುದ್ದು ಮಾಡಿದ ನಗರ ಬೆಂಗಳೂರು. ಹೊಸ ವರ್ಷಾಚರಣೆ ವೇಳೆ ನಗರದ ಬ್ರಿಗೇಡ್ ರಸ್ತೆಯಲ್ಲಿ ಯುವತಿಗೆ ಕಿರುಕುಳ ನೀಡಿದ್ದು ದೊಡ್ಡ ಸುದ್ದಿಯಾಯಿತು. ಭಾರೀ ಚರ್ಚೆ ನಡೆಯಿತು.
ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಡೈರಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ, ಗುಜರಾತ್ ರಾಜ್ಯಸಭೆ ಚುನಾವಣೆ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ, ಬೆಂಗಳೂರು ಸ್ಟೀಲ್ ಬ್ರಿಡ್ಜ್ ವಿವಾದಗಳು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದವು.
ರಾಜಕೀಯವಾಗಿಯೂ ಕರ್ನಾಟಕ ಈ ವರ್ಷದಲ್ಲಿ ಹಲವು ಏಳು-ಬೀಳು ಕಂಡಿತು. ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಬಿಜೆಪಿ ಸೇರಿದರು. ರಾಜ್ಯದ ಹಲವು ನಾಯಕರು ಪಕ್ಷಾಂತರ ಮಾಡಿದರು. ಹೊಸ ವರ್ಷ ರಾಜ್ಯದ ಪಾಲಿಗೆ ಚುನಾವಣಾ ವರ್ಷ. (ಮಾಹಿತಿ : ಪಿಟಿಐ)

ಡೈರಿಯ ವಿವರ ಬಹಿರಂಗ
ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರ ಡೈರಿ ಪ್ರಕರಣ ದೇಶಾದ್ಯಂತ ಸದ್ದು ಮಾಡಿತು. ಗೋವಿಂದರಾಜು ಮನೆಯಲ್ಲಿ ಐಟಿ ದಾಳಿ ನಡೆದಾಗ ಸಿಕ್ಕ ಡೈರಿಯಲ್ಲಿನ ಮಾಹಿತಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಡೈರಿಯಲ್ಲಿ ಹಲವರಿಗೆ ಹಣ ಕೊಟ್ಟ ಬಗ್ಗೆ ಮಾಹಿತಿ ಇತ್ತು ಎಂಬುದು ಚರ್ಚೆಗೆ ಗ್ರಾಸ ವಾಯಿತು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ
ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿನ ನಿವಾಸದ ಮುಂದೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆಯಿತು. ಹತ್ಯೆ ನಡೆದು ನಾಲ್ಕು ತಿಂಗಳು ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಈ ಹತ್ಯೆ ದೇಶದ ತುಂಬಾ ಸುದ್ದಿ ಮಾಡಿತು.

ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ
ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಯಾಗಬೇಕು ಎಂದು ಕರ್ನಾಟಕದಲ್ಲಿ ಹೋರಾಟ ಆರಂಭವಾಯಿತು. ಸಿದ್ದರಾಮಯ್ಯ ಸಂಪುಟದ ಸಚಿವರು ಹೋರಾಟದ ಮುಂಚೂಣಿಯಲ್ಲಿದ್ದಾರೆ. ಪರ-ವಿರೋಧ ಚರ್ಚೆ ಇನ್ನೂ ನಡೆಯುತ್ತಿದೆ. ಚುನಾವಣೆ ಬರುವ ತನಕ ಹೋರಾಟಕ್ಕೆ ಅಂತಿಮ ಸ್ವರೂಪ ಸಿಗುವುದು ಕಷ್ಟ.

ಪರಪ್ಪನ ಅಗ್ರಹಾರಕ್ಕೆ ವಿ.ಕೆ.ಶಶಿಕಲಾ
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ವಿ.ಕೆ.ಶಶಿಕಲಾ ಅಪರಾಧಿ ಎಂಬ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯಿತು. ಆದ್ದರಿಂದ, ಫೆಬ್ರವರಿಯಲ್ಲಿ ವಿ.ಕೆ.ಶಶಿಕಲಾ, ಇ.ಇಳವರಸಿ ಮತ್ತು ಸುಧಾಕರನ್ ಪರಪ್ಪನ ಅಗ್ರಹಾರ ಜೈಲು ಸೇರಿದರು. ಎಲ್ಲಾ ಅಪರಾಧಿಗಳಿಗೆ 4 ವರ್ಷ ಜೈಲು ಶಿಕ್ಷೆ, 10 ಕೋಟಿ ರೂ. ದಂಡ ವಿಧಿಸಲಾಗಿದೆ.

ಚುನಾವಣೆಗೆ ಮೂರು ಪಕ್ಷಗಳ ತಯಾರಿ
2018 ಕರ್ನಾಟಕದ ಪಾಲಿಗೆ ಚುನಾವಣಾ ವರ್ಷ. ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ, ಕಾಂಗ್ರೆಸ್ ನವ ಕರ್ನಾಟಕ ನಿರ್ಮಾಣ, ಮನೆ-ಮನೆಗೆ ಕಾಂಗ್ರೆಸ್, ಜೆಡಿಎಸ್ ಕುಮಾರಪರ್ವ ಹೆಸರಿನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದವು.

ಗುಜರಾತ್ ರಾಜ್ಯಸಭೆ ಚುನಾವಣೆ ಇಲ್ಲಿ ಚರ್ಚೆ
ಗುಜರಾತ್‌ನ ಕಾಂಗ್ರೆಸ್ ಶಾಸಕರು ಬೆಂಗಳೂರು ಹೊರವಲಯದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಭಾರೀ ಚರ್ಚೆಗೆ ಕಾರಣವಾಯಿತು. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಶಾಸಕರ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ಸಂದರ್ಭದಲ್ಲಿ ಅವರ ಮನೆ ಮೇಲೆ ಐಟಿ ದಾಳಿ ನಡೆಯಿತು. ಕೊನೆಗೆ ರಾಜ್ಯಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಜಯಗಳಿಸಿದರು.

ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ
ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಯಿತು. ರಾಜ್ಯದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಯಿತು. ರಾಜ್ಯ ಸರ್ಕಾರ ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಹಲವು ಆರೋಪ ಮಾಡಿತು.

ವಿಶಾಲ್ ಸಿಕ್ಕ ರಾಜೀನಾಮೆ
ದೇಶದ ಪ್ರತಿಷ್ಠಿತ ಐಟಿ ಸೇವಾ ಕಂಪನಿ ಬೆಂಗಳೂರು ಮೂಲದ ಇನ್ಪೋಸಿಸ್ ನಲ್ಲಿ ಭಾರೀ ಬದಲಾವಣೆ ನಡೆಯಿತು. ಕಂಪನಿಯ ಸಿಇಓ ಹುದ್ದೆಗೆ ವಿಶಾಲ್ ಸಿಕ್ಕ ರಾಜೀನಾಮೆ ನೀಡಿದರು.

ಎಸ್.ಎಂ.ಕೃಷ್ಣ ಬಿಜೆಪಿಗೆ
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದರು. ಇದು ರಾಜ್ಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿತು. ನಂತರ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಉಪ ಚುನಾವಣೆ, ಸಾವು, ಸಂಪುಟ ವಿಸ್ತರಣೆ
* ಮಾಜಿ ಸಿಎಂ ಧರಂಸಿಂಗ್, ಸಚಿವ ಎಚ್.ಎಸ್.ಮಹದೇವ ಪ್ರಸಾದ್, ಮಾಜಿ ಸಚಿವ ಖಮರುಲ್ಲಾ ಇಸ್ಲಾಂ ನಿಧನ ರಾಜಕೀಯ ಕ್ಷೇತ್ರದ ನೋವಿನ ಸುದ್ದಿಗಳು.
* ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಉಪ ಚುನಾವಣೆ ನಡೆಯಿತು. ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಯಿತು.
* ಗೀತಾ ಮಹದೇವ ಪ್ರಸಾದ್, ಎಚ್.ಎಂ.ರೇವಣ್ಣ, ಆರ್.ಬಿ.ತಿಮ್ಮಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸೇರಿದರು.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications