Get Updates
Get notified of breaking news, exclusive insights, and must-see stories!

Year Ender 2022 : ಕರ್ನಾಟಕದಲ್ಲಿ ಈ ವರ್ಷ ನಡೆದ ರಾಜಕೀಯ ಬೆಳವಣೆಗೆಗಳು

ಬೆಂಗಳೂರು,ಡಿಸೆಂಬರ್20: 2023 ರ ವಿಧಾನಸಭಾ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ಮೂರು ಪಕ್ಷಗಳು ಸಹ ಭರ್ಜರಿ ತಯಾರಿ ನಡೆಸಿವೆ. ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರ್ಬೇಕು ಎನ್ನುವ ನಿಟ್ಟಿನಲ್ಲಿ ಮೂರು ಪಕ್ಷಗಳು ಸಾಕಷ್ಟು ತಂತ್ರಗಾರಿಕೆಗೆ ಸಜ್ಜಾಗಿದ್ದು, ಹಲವು ಕಾರ್ಯಕ್ರಮಗಳ ಮೂಲಕ ಜನರನ್ನ ಸೆಳೆಯಲು ಪ್ಲ್ಯಾನ್ ನಡೆಸಿದ್ದು, ಮೇಕೆದಾಟು ಪಾದಯಾತ್ರೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನದವರೆಗೆ ಕರ್ನಾಟಕದಲ್ಲಿ 2022ರಲ್ಲಿ ಆದ ಪ್ರಮುಖ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ ಈ ಕೆಳಗಿನಂತಿವೆ.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅಧಿಕಾರ ಸ್ವೀಕಾರ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಜನವರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇದಾದ ಬಳಿಕ ಕಾಂಗ್ರೆಸ್ ಹಿರಿಯ ಮುಖಂಡರು ಸಂಧಾನ ನಡೆಸಿ, ರಕ್ಷಾ ರಾಮಯ್ಯ ಅವರ ಅಧಿಕಾರ ಅವಧಿ ಮುಗಿದ ಬಳಿಕ ಮೊಹಮ್ಮದ್ ನಲಪಾಡ್ ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ರಕ್ಷಾ ರಾಮಯ್ಯ ಅವರ ಅಧಿಕಾರವಧಿ ಕೊನೆಗೊಂಡು, ಮೊಹಮ್ಮದ್ ನಲಪಾಡ್ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಂಡರು.

ಎಂ.ಬಿ.ಪಾಟೀಲ್'ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ

2023 ರ ವಿಧಾನಸಭೆ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯಲಿರುವ ಸರಣಿ ಚುನಾವಣೆಗೆ ತಂತ್ರ ರೂಪಿಸಲು ಮುಂದಾಗಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯು, ಲಿಂಗಾಯತ ಸಮುದಾಯದ ಪ್ರಬಲ ಮತದಾರರನ್ನು ಸೆಳೆಯುವ ಸಲುವಾಗಿ ಜನವರಿಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿದೆ.

Year Ender 2022 Important Political Events Happen in Karnataka in 2022

ಜನವರಿ 26ಕ್ಕೆ ಜೆಡಿಎಸ್‌ನಿಂದ ಜನತಾ ಜಲಧಾರೆ ಕಾರ್ಯಕ್ರಮ

ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷದಿಂದ ರಾಜ್ಯವ್ಯಾಪಿ ಜನವರಿ 26ರಿಂದ ' ಜನತಾ ಜಲಧಾರೆ ' ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಕೊಂಡಿತ್ತು.

ಕನಕಪುರ ಸಂಗಮದಲ್ಲಿ ಮೇಕೆದಾಟು ಯೋಜನೆ ಪಾದಯಾತ್ರೆಗೆ ಚಾಲನೆ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಜನವರಿಯಲ್ಲಿ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಸಂಗಮದಲ್ಲಿ ಪಾದಯಾತ್ರೆ ಕಾರ್ಯಕ್ರಮ ಆರಂಭಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ಹಲವು ಮುಖಂಡರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಹಿಳಾ ಪ್ರತಿನಿಧಿಗಳು, ಕಾರ್ಯಕರ್ತರು ಭಾಗಿವಹಿಸಿದ್ದರು.

ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯುಟಿ ಖಾದರ್ ನೇಮಕ

ಜನವರಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯು.ಟಿ.ಖಾದರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.​ ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ ಮಾಡಿದ್ದಾರೆ. ​ಅಲ್ಪ ಸಂಖ್ಯಾತ ಸಮುದಾಯದ ಮನ ತಣಿಸಲು ಯು.ಟಿ ಖಾದರ್​ಗೆ ಜವಾಬ್ದಾರಿ ನೀಡಲಾಗಿದ್ದು, ಸಿದ್ದರಾಮಯ್ಯ ತಂತ್ರಗಾರಿಕೆ ಭಾಗವಾಗಿ ಅವರಿಗೆ ಪಕ್ಷದ ಉಪ ನಾಯಕನ ಸ್ಥಾನ ನೀಡಲಾಗಿದೆ ಎನ್ನಲಾಗಿದೆ.

Year Ender 2022 Important Political Events Happen in Karnataka in 2022

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಬಿ.ಕೆ ಹರಿ ಪ್ರಸಾಸ್ ನೇಮಕ

ಜನವರಿಯಲ್ಲಿ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡುವ ಮೂಲಕ ಹೈಕಮಾಂಡ್ ಭಾರೀ ಮಹತ್ವದ ಹೆಜ್ಜೆ ಇಟ್ಟಿದೆ.

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್ ನಾರಾಯಣ್, ಡಿ.ಕೆ ಸುರೇಶ್ ಜಟಾಪಟಿ!

ರಾಮನಗರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಡಾ. ಸಿಎನ್‌ ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ.ಕೆ ಸುರೇಶ್ ವೇದಿಕೆಯಲ್ಲೇ ಕೈ ಕೈ ಮಿಲಾಯಿಸಿದ ಘಟನೆ ನಡೆಯಿತು. ರಾಮನಗರ ಜಿಲ್ಲಾಡಳಿತದಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲೇ ಈ ಘಟನೆ ನಡೆಯಿತು. ಇನ್ನೂ ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವತ್ಥ ನಾರಾಯಣ ಮಾತನಾಡುವ ಸಂದರ್ಭದಲ್ಲಿ ಉಪಯೋಗಿಸಿದ ಒಂದು ಪದ ಡಿಕೆ ಸುರೇಶ್ ಆಕ್ರೋಶಕ್ಕೆ ಕಾರಣವಾಯಿತು.

ಜನವರಿ 28 ಕ್ಕೆ ಆರು ತಿಂಗಳು ಪೂರೈಸಿದ ಬಸವರಾಜ ಬೊಮ್ಮಾಯಿ ಸರ್ಕಾರ

ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೊದಲ ಆರು ತಿಂಗಳ ಅವಧಿಯಲ್ಲೇ ಸ್ಪಷ್ಟಭರವಸೆ ಮೂಡಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ಕೆಲ ದಿನಗಳಲ್ಲೇ ಸಿಎಂಎಂದರೆ 'ಕಾಮನ್‌ ಮ್ಯಾನ್‌ ಎನ್ನುವ ಮೂಲಕ ಮೆಚ್ಚುಗೆ ಗಳಿಸಿದ ಬೊಮ್ಮಾಯಿ ಅವರು ದಿನಗಳೆದಂತೆ ಆಡಳಿತದಲ್ಲಿ ತಮ್ಮದೇ ಛಾಪು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ

ಮಾರ್ಚ್ ನಲ್ಲಿ ಕಾಂಗ್ರೆಸ್ ನಾಯಕ ಮೇಲಿನ ಅಸಮಾಧಾನದಿಂದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Year Ender 2022 Important Political Events Happen in Karnataka in 2022

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ

ಏಪ್ರಿಲ್ ನಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಮಾಜಿ ಎಂಎಲ್ ಸಿ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಪಕ್ಷದ ಧ್ವಜ ನೀಡಿ ಇಬ್ರಾಹಿಂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಪತ್ರವನ್ನ ಸಹ ನೀಡಲಾಯ್ತು. ತಮಗೆ ಒಳ್ಳೆಯದಾಗಲಿ, ನಿಮ್ಮ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಶಿಸಿದರು.

ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ

ಜೂನ್ ತಿಂಗಳಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ. ಎಸ್ ರಕ್ಷಾ ರಾಮಯ್ಯರನ್ನು ಯುವ ಕಾಂಗ್ರೆಸ್​​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಯುವ ಕಾಂಗ್ರೆಸ್ ನಾಯಕರಾಗಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ.

ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು- ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ವರಿಷ್ಠ ಹೆಚ್‌.ಡಿ. ದೇವೇಗೌಡರು ಬೆಂಬಲವನ್ನು ಘೋಷಿಸಿದರು. ರಾಷ್ಟ್ರಪತಿ ಚುನಾವಣೆ ನಿಮಿತ್ತ ಬೆಂಬಲವನ್ನು ಕೇಳಲು ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಹೆಚ್.ಡಿ. ದೇವೇಗೌಡರು ಮಾತನಾಡಿ, ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನೇಮಕ

ಜುಲೈ ತಿಂಗಳಿನಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನೇಮಕಗೊಂಡಿದ್ದಾರೆ. ಈವರೆಗೆ ಈ ಜವಾಬ್ದಾರಿ ಹೊತ್ತಿದ್ದ ಅರುಣ್ ಕುಮಾರ್ ಅವರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಮತ್ತು ಉತ್ತರ ಪ್ರಾಂತದ ಪ್ರಚಾರ ಪ್ರಮುಖ್ ಜವಾಬ್ದಾರಿ ನೀಡಲಾಗಿದೆ.

ಸಿದ್ದರಾಮಯ್ಯರ 75ನೇ ಜನ್ಮದಿನದ ಹಿನ್ನೆಲೆ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ

ಆಗಸ್ಟ್ ತಿಂಗಳಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಹಿನ್ನೆಲೆ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸಿದ್ದರಾಮೋತ್ಸವ ಮಾಡುವ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಗೊಳಿಸಿದರು.

ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್‍ವೈ ಆಯ್ಕೆ

ಆಗಸ್ಟ್ ತಿಂಗಳಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಹೈಕಮಾಂಡ್ ಪ್ರಮೋಷನ್ ನೀಡಿದೆ. ಪಕ್ಷದ ಅತ್ಯುನ್ನತ ಮಂಡಳಿಯಾದ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಟಾಪ್ ಐದನೇ ಸ್ಥಾನ ನೀಡಿ, ಅವರನ್ನು ಪಕ್ಷ ಕಡೆಗಣಿಸಿಯೂ ಇಲ್ಲ ಎಂಬ ಸಂದೇಶವನ್ನು ಹೈಕಮಾಂಡ್ ನೀಡಿದೆ.

ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ

ಸೆಪ್ಟಂಬರ್ ತಿಂಗಳಿನಲ್ಲಿ ಜನಸ್ಪಂದನ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ಮಾಡಿದೆ. ದೊಡ್ಡಬಳ್ಳಾಪುರದಲ್ಲಿ ನಡೆದ ಸಮಾವೇಶದಲ್ಲಿ ಸರ್ಕಾರದ ಸಾಧನೆಗಳ ಅನಾವರಣ ಮಾಡಿದೆ. ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರ ಅಭಿವೃದ್ಧಿ ಕಾರ್ಯಗಳು ಇದಕ್ಕೆ ಪೂರಕ ಎನಿಸಲಿವೆ ಎಂದರು.

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ

ಅಕ್ಟೋಬರ್ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. 24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಾತ್ರರಾಗಿದ್ದಾರೆ. ಜೊತೆಗೆ ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‍ನ ನೇತೃತ್ವ ಸಿಕ್ಕಿದೆ.

ಭಾರತ್ ಜೋಡೋ ಯಾತ್ರೆ, ಬಳ್ಳಾರಿಯಲ್ಲಿ ಬೃಹತ್ ಸಮಾವೇಶ

ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ಬಿರುಸಿನಿಂದ ಸಾಗಿದ್ದು, ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆದಿದೆ, ಸೆಪ್ಟಂಬರ್ 30 ರಂದು ರಾಜ್ಯ ಪ್ರವೇಶ ಮಾಡಿದ ಭಾರತ್ ಜೋಡೋ ಪಾದಯಾತ್ರೆ ನಂತರ ಚಿತ್ರದುರ್ಗಕ್ಕೆ ತಲುಪಿದೆ. ಚಿತ್ರದುರ್ಗದಲ್ಲಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡರು ಬಿರುಸಿನ ಹೆಜ್ಜೆ ಹಾಕುತ್ತಿದ್ದು, ಬಳ್ಳಾರಿಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ಬಿಎಸ್‌ವೈ, ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭ

ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆಗೂ ಮುನ್ನ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಜನಸಂಕಲ್ಪ ಯಾತ್ರೆಗೆ ಮಂಗಳವಾರ ರಾಯಚೂರಿನಲ್ಲಿ ಚಾಲನೆ ನೀಡಲಾಯಿತು.

ನ. 1ರಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ

ಕಾಂಗ್ರೆಸ್‍ನ ಭಾರತ ಐಕ್ಯತಾ ಯಾತ್ರೆ ಆಡಳಿತಾರೂಢ ಬಿಜೆಪಿಯ ಜನ ಸಂಕಲ್ಪ ಯಾತ್ರೆಯ ಬೆನ್ನಲ್ಲೇ ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಸಲು ಅಣಿಯಾಗಿದೆ. ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ಗಡಿನಾಡು ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪಂಚರತ್ನ ಯಾತ್ರೆಯನ್ನು ಆರಂಭಿಸಲು ಸಜ್ಜಾಗಿತ್ತು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಬೇಕೆಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರವನ್ನು ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಕೈಯಲ್ಲಿ ಕೆಂಪೇಗೌಡ ಪ್ರತಿಮೆ ಅನಾವರಣ

ನವೆಂಬರ್ ತಿಂಗಳಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಬಳಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. ಬಳಿಕ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇಂದು ವಿಶೇಷ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿದ್ದೇನೆ, ಇದು ನನ್ನ ಸೌಭಾಗ್ಯ, ಇಂದು ಎರಡು ವಿಶೇಷ ರೈಲುಗಳಿಗೆ ಚಾಲನೆ ನೀಡಲಾಗಿದೆ ಎಂದರು. ಇಂದು ಕನ್ನಡದಲ್ಲಿಯೇ ತಮ್ಮ ಮಾತುಗಳನ್ನು ಪ್ರಧಾನಿಯವರು ಪ್ರಾರಂಭಿಸಿದರು.

ಜೆಡಿಎಸ್ ಪಕ್ಷದ ತೊರೆದು, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಸಜ್ಜಾದ ವೈ ಎಸ್ ವಿ ದತ್ತ

ತಮ್ಮ ಕ್ಷೇತ್ರ ಜನರಿಗಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದನಾಗದ್ದೇನೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಕಾಂಗ್ರೆಸ್ ಸೇರ್ಪಡೆಗೆ ತಯಾರಿ ನಡೆಸುತ್ತಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮೊದಲ ಹಂತವಾಗಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಇಂದು ಘೋಷಣೆ ಮಾಡಿದರು. ಪಂಚರತ್ನ ಯಾತ್ರೆ ಕೈಗೊಂಡಿದ್ದ ಕುಮಾರಸ್ವಾಮಿ ಅವರು ಅಭ್ಯರ್ಥಿಗಳ ಹೆಸರನ್ನು ಘೋಷಿಸುವುದಾಗಿ ತಿಳಿಸಿದ್ದರು. ಅದರಂತೆ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19 ರಿಂದ 29 ರವರೆಗೆ ಚಳಿಗಾಲದ ಅಧಿವೇಶನ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19 ರಿಂದ 29 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+