Year Ender 2024: ಈ ವರ್ಷ ದಾಖಲಾದ ಪ್ರಮುಖ ಪ್ರಕಾರಣಗಳಿವು ವಿವರ ಇಲ್ಲಿದೆ

Year Ender 2024: 2024ರ ವರ್ಷ ಮುಗಿದು 2025ರ ಹೊಸ ವರ್ಷ ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಪ್ರತೀ ವರ್ಷವು ಸಹ ಪ್ರಮುಖ ಘಟನೆಗಳು ನಡೆಯುತ್ತಿರುತ್ತವೆ. ಹಾಗಾದರೆ ಈ ವರ್ಷ ರಾಜ್ಯದಲ್ಲಿ ನಟ ದರ್ಶನ್‌, ಪ್ರಜ್ವಲ್‌ ರೇವಣ್ಣ ಸೇರಿದಂತೆ ಯಾವೆಲ್ಲ ಪ್ರಮುಖ ಘಟನೆಗಳು ನಡೆದಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

* ಪ್ರಜ್ವಲ್‌ ರೇವಣ್ಣ ಪ್ರಕರಣ: 2024 ಅಂದರೆ ಈ ವರ್ಷದಲ್ಲಿ ನಡೆದ ಪ್ರಮುಖ ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಕರಣ ಒಂದಾಗಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೇ ವಿದೇಶದಲ್ಲಿಯೂ ಸದ್ದು ಮಾಡಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಮೇ 30ರ ತಡರಾತ್ರಿ ಬಂಧಿಸಲಾಗಿತ್ತು.

Year Ender 2024 Details of This Year Major Incidents in Karnataka Know details

ಈಗಾಗಲೇ ಕರ್ನಾಟಕದ ಹೈಕೋರ್ಟ್‌ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇನ್ನು ಇತ್ತೀಚೆಗಷ್ಟೇ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಕೂಡ ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ವಜಾಗೊಳಿಸಿತು. ಆದ್ದರಿಂದ ಇದೀಗ ಪ್ರಜ್ವಲ್‌ ರೇವಣ್ಣಗೆ ಮತ್ತೆ ಜೈಲೇ ಗತಿ ಎನ್ನುವಂತಾಗಿದೆ.

* ನಟ ದರ್ಶನ್‌ ಪ್ರಕರಣ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಮತ್ತು ಗ್ಯಾಂಗ್‌ ಜೈಲು ಸೇರಿದೆ. ಈಗಾಗಲೇ ಹಲವರು ಬಿಡುಗಡೆಯಾಗಿದ್ದು, ಮತ್ತೊಂದೆಡೆ ಪವಿತ್ರಾ ಗೌಡ ಹಾಗೂ ನಟ ದರ್ಶನ್ ಸೇರಿದಂತೆ ಹಲವರಿಗೆ ಜಾಮೀನು ನಿರಾಕರಣೆ ಆಗುತ್ತಲೇ ಇದೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯನ್ನು ನಟ ದರ್ಶನ್‌ & ಗ್ಯಾಂಗ್ ಪಟ್ಟಣಗೆರೆ ಶೆಡ್‌ನಲ್ಲಿ ಬರ್ಬರವಾಗಿ ಹತ್ಯೆ ಮಾಡಿದೆ ಎನ್ನುವುದು ಪೊಲೀಸ್‌ ಮೂಲಗಳಲ್ಲಿ ಉಲ್ಲೇಖವಾಗಿದೆ. ಇನ್ನೂ ಈ ಕೇಸ್‌ನಲ್ಲಿ ನಟ ದರ್ಶನ್‌ ಎ2 ಆರೋಪಿಯಾಗಿದ್ದು, ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ.

ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್‌, ಅಲ್ಲಿಯೂ ಕೂಡ ರೌಡಿ ಶೀಟರ್ ವಿಲ್ಸನ್‌ ಗಾರ್ಡನ್‌ ನಾಗನ ಜೊತೆ ಕುಳಿತುಕೊಂಡು ರೌಂಡ್‌ ಟೇಬಲ್‌ ಪಾರ್ಟ್‌ ಮಾಡಿರುವ ಫೋಟೋ ಭಾರೀ ವೈರಲ್‌ ಆಗಿತ್ತು. ಅಷ್ಟೇ ಅಲ್ಲದೆ, ವಿಐಪಿ ಸೆಲ್‌ನಿಂದಲೇ ವಿಡಿಯೋ ಕಾಲ್‌ ಮಾಡಿರುವ ವಿಡಿಯೋ ಭಾರೀ ವೈರಲ್‌ ಆಗಿತ್ತು. ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು.

ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ 9 ಮಂದಿ ಜೈಲಾಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಮತ್ತೊಂದೆಡೆ ಕೋರ್ಟ್‌ ಆದೇಶದ ಮೇರೆಗೆ ನಟ ದರ್ಶನ್‌ನನ್ನು ಪೊಲೀಸರು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದ್ದರು. ಬಳಿಕ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು.

ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರಿಂ ಕೋರ್ಟ್‌ ಮೆಟ್ಟಿಲೇರಲು ಸಿದ್ದರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೈಕೋರ್ಟ್‌ನಲ್ಲಿ ಸರ್ಕಾರದ ಪರವಾಗಿ ಎಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದ್ದು, ನಟ ದರ್ಶನ್‌ ಪರ ಸಿವಿ ನಾಗೇಶ್‌ ವಾದ ಮಂಡನೆ ಮಾಡಿದ್ದರು. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+