Year End Special 2024: ಲೋಕಸಭೆ ಚುನಾವಣೆಯ ಆಸಕ್ತಿಕರ ಅಂಕಿ ಅಂಶಗಳು
2024 ಭಾರತದ ರಾಜಕೀಯದ ಪಾಲಿಗೆ ಮಹತ್ವದ್ದು. ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಿತು. ಕೇಂದ್ರ ಚುನಾವಣಾ ಆಯೋಗ ಮಾರ್ಚ್ 16ರಂದು ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿತು. ಏಪ್ರಿಲ್ 19 ರಿಂದ ಜೂನ್ 1ರ ತನಕ ಒಟ್ಟು 7 ಹಂತದಲ್ಲಿ 543 ಸದಸ್ಯ ಬಲದ ಲೋಕಸಭೆಗೆ ಮತದಾನ ನಡೆಯಿತು. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಯಿತು.
ಚುನಾವಣಾ ಆಯೋಗ ದೇಶದಲ್ಲಿ ಏಪ್ರಿಲ್ 19ರಂದು ಮೊದಲ ಹಂತದಲ್ಲಿ 102 ಸೀಟುಗಳಿಗೆ ಮತದಾನ ನಡೆಸಿತು. ಏಪ್ರಿಲ್ 26ರಂದು 2ನೇ ಹಂತದಲ್ಲಿ 88, ಮೇ 7ರಂದು 3ನೇ ಹಂತದಲ್ಲಿ 94, ಮೇ 13ರಂದು 4ನೇ ಹಂತದಲ್ಲಿ 96, ಮೇ 20ರಂದು 5ನೇ ಹಂತದಲ್ಲಿ 49, ಮೇ 25ರಂದು 6ನೇ ಹಂತದಲ್ಲಿ 58 ಮತ್ತು ಜೂನ್ 1ರಂದು 7ನೇ ಹಂತದಲ್ಲಿ 57 ಸೀಟುಗಳಿಗೆ ಮತದಾನ ನಡೆಸಲಾಯಿತು.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಗೊಂಡಿತು. ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೊಂಡಿತು. ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರವಹಿಸಿಕೊಂಡರು. ಚುನಾವಣಾ ಆಯೋಗ ಲೋಕಸಭೆ ಚುನಾವಣೆ-2024ರ ಕುರಿತು ಆಸಕ್ತಿಕರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ.
ಲೋಕಸಭೆ ಚುನಾವಣೆ ಅಂಕಿ-ಅಂಶಗಳು: ಚುನಾವಣಾ ಆಯೋಗ 2024ರ ಲೋಕಸಭಾ ಚುನಾವಣೆ ಕುರಿತು 42 ಅಂಕಿ-ಅಂಶಗಳ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯನ್ನು ಚುನಾವಣಾ ಆಯೋಗದ ವೆಬ್‌ಸೈಟ್ https://www.ect.gov.in/statistical-reports ಮೂಲಕ ಪಡೆದುಕೊಳ್ಳಬಹುದಾಗಿದೆ.
ಆಯೋಗದ ಮಾಹಿತಿಯಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾರರ ಸಂಖ್ಯೆಯೂ ಏರಿಯಾಗಿತ್ತು. 2019ರ ಚುನಾವಣೆಯಲ್ಲಿ 91,19,50,734 ಮತದಾರರು ಇದ್ದರು. ಈ ಬಾರಿ 97,97,51,847 ನೋಂದಾಯಿತ ಮತದಾರರಿದ್ದರು. ಅಸ್ಸಾಂನ ಧುಬ್ರಿ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ 92.3 ರಷ್ಟು ಮತದಾನವಾಯಿತು ಹಾಗೂ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ 38.7ರಷ್ಟು ಮತದಾನವಾಗಿದೆ. 2024 ರಲ್ಲಿ 63,71,839 ನೋಟಾ ಮತ ಚಲಾವಣೆಯಾಗಿದೆ.
2024ರಲ್ಲಿ ಮತದಾನಕ್ಕೆ 10,52,664 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. 40 ಮತಗಟ್ಟೆಗಳಲ್ಲಿ ಮಾತ್ರ ಮರುಮತದಾನ ಮಾಡಲಾಗಿದೆ. ಒಂದು ಮತಗಟ್ಟೆಗೆ ಮತದಾರರ ಸರಾಸರಿ ಸಂಖ್ಯೆ 931 ಆಗಿದೆ. ಅತಿ ಹೆಚ್ಚು ಮತಗಟ್ಟೆ 1,62,069 ಹೊಂದಿರುವ ರಾಜ್ಯ ಉತ್ತರ ಪ್ರದೇಶವಾಗಿತ್ತು. ಕಡಿಮೆ ಸಂಖ್ಯೆಯ 55 ಮತಗಟ್ಟೆ ಹೊಂದಿದ್ದು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ. 2019ಕ್ಕೆ ಹೋಲಿಕೆ ಮಾಡಿದರೆ 2024 ರಲ್ಲಿ ಅತಿ ಹೆಚ್ಚು ಹೊಸ ಮತಗಟ್ಟೆ ಕೇಂದ್ರಗಳನ್ನು ಹೊಂದಿರುವುದು ಬಿಹಾರ (4739) ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು (1731).
ಲೋಕಸಭೆ ಚುನಾವಣೆ 2019ರಲ್ಲಿ 11,692 ನಾಮಪತ್ರಗಳು ಸಲ್ಲಿಕೆಯಾಗಿದ್ದವು. 2024ರಲ್ಲಿ 12,459 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ತೆಲಂಗಾಣದ ಮಲ್ಕಾಜ್‍ಗಿರಿ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಎಂದರೆ 114 ನಾಮಪತ್ರಗಳು ಸ್ವೀಕೃತವಾದವು. ಅಸ್ಸಾಂನ ದಿಬ್ರುಗಡ್ ಕ್ಷೇತ್ರದಲ್ಲಿ ಕೇವಲ 3 ನಾಮಪತ್ರ ಸಲ್ಲಿಕೆಯಾದವು.
2019ರಲ್ಲಿ 726 ಮಹಿಳಾ ಸ್ಪರ್ಧಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. 2024ರಲ್ಲಿ ಮಹಿಳಾ ಅಭ್ಯರ್ಥಿಗಳ ಸಂಖ್ಯೆ 800. 2019ರಲ್ಲಿ 39,075 ತೃತೀಯ ಲಿಂಗಿ ಮತದಾರರು ನೋಂದಣಿ ಮಾಡಿಕೊಂಡಿದ್ದರು. 2024ರಲ್ಲಿ 48,272 ತೃತೀಯ ಲಿಂಗಿ ಮತದಾರರನ್ನು ನೋಂದಾಯಿಸಲಾಗಿದೆ. ಅತಿ ಹೆಚ್ಚು ನೋಂದಾಯಿತ ತೃತೀಯ ಲಿಂಗ ಮತದಾರರು (8,467) ಇರುವ ರಾಜ್ಯ ತಮಿಳುನಾಡು.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಒಟ್ಟು 6 ರಾಷ್ಟ್ರೀಯ ಪಕ್ಷಗಳು ಪಾಲ್ಗೊಂಡವು. 2019ರ ಚುನಾವಣೆಯಲ್ಲಿ 6,923 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು. 2024ರಲ್ಲಿ 7,190 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡರು. ಗುಜರಾತ್ ರಾಜ್ಯದ ಸೂರತ್ ಲೋಕಸಭಾ ಕ್ಷೇತ್ರಕ್ಕೆ ಅವಿರೋಧವಾಗಿ ಆಯ್ಕೆ ನಡೆಯಿತು. ಚುನಾವಣೆಗೆ 3,921 ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 7 ಮಂದಿ ಮಾತ್ರ ಆಯ್ಕೆಯಾಗಿದ್ದಾರೆ. 3,905 ಸ್ವತಂತ್ರ ಅಭ್ಯರ್ಥಿಗಳು ಠೇವಣಿ ಕಳದುಕೊಂಡಿದ್ದಾರೆ. 279 ಸ್ವತಂತ್ರ ಮಹಿಳಾ ಅಭ್ಯರ್ಥಿಗಳು ಚುನಾವನಣಾ ಕಣದಲ್ಲಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications