Year End Special 2024: ಈ ವರ್ಷ ದೇಶಾದ್ಯಂತ ಸುದ್ದಿ ಮಾಡಿದ ಮೂವರು ನಾಯಕರು
2024ರಲ್ಲಿ ವಿಧಾನಸಭೆ ಚುನಾವಣೆ ನಡೆದ ರಾಜ್ಯಗಳಲ್ಲಿ ಮಹಾರಾಷ್ಟ್ರ ಸಹ ಒಂದು. ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಿತು. ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಯಿತು. ಚುನಾವಣೆಯಲ್ಲಿ ಬಿಜೆಪಿ 132 ಸೀಟುಗಳಲ್ಲಿ ಜಯಗಳಿಸುವ ಮೂಲಕ ದಾಖಲೆ ಬರೆಯಿತು. ರಾಜ್ಯದಲ್ಲಿ ಡಿಸೆಂಬರ್ 5ರಂದು ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯತಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯದ ಮುಖ್ಯಮಂತ್ರಿಯಾಗಿ ಸರ್ಕಾರ ಮುನ್ನಡೆಸುತ್ತಿದ್ದಾರೆ. ಸರ್ಕಾರ ರಚನೆಗೆ ಬೆಂಬಲ ನೀಡಿದ ಏಕನಾಥ್ ಶಿಂಧೆ, ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಳು.
ಈ ವರ್ಷ ದೇಶದಲ್ಲಿ ಸುದ್ದಿ ಮಾಡಿದ ಪ್ರಮುಖ ನಾಯಕರಲ್ಲಿ ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ, ಅಜಿತ್ ಪವಾರ್ ಸಹ ಪ್ರಮುಖರು. 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಬಳಿಕ ದೇವೇಂದ್ರ ಫಡ್ನವೀಸ್ 3ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾದರು. ಚುನಾವಣೆಗೆ ಮೊದಲು ಮುಖ್ಯಮಂತ್ರಿಯಾಗಿದ್ದ ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿಯಾದರು. ಅಜಿತ್ ಪವಾರ್ ಮತ್ತೊಮ್ಮೆ ಉಪ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145 ಆಗಿತ್ತು. ಬಿಜೆಪಿ 132 ಸೀಟು ಗೆದ್ದಿದೆ. ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸ್ಥಾನಗ ನೆರವಿನಿಂದ 'ಮಹಾಯುತಿ' ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮೈತ್ರಿಕೂಟದ ಒಟ್ಟು ಸದಸ್ಯ ಬಲ 230 ಸ್ಥಾನಗಳು.

ಚುನಾವಣೆಗೂ ಮೊದಲು 2022ರಿಂದಲೂ ರಾಜ್ಯದಲ್ಲಿ 'ಮಹಾಯತಿ' ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿತ್ತು. ಶಿವಸೇನೆಯ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದರು. ಬಿಜೆಪಿಯ ದೇವೇಂದ್ರ ಫಡ್ನವೀಸ್, ಎನ್‌ಸಿಪಿಯ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿದ್ದರು. 2024ರ ವಿಧಾನಸಭೆ ಚುನಾವಣೆಯನ್ನು ಸಹ ಬಿಜೆಪಿ, ಶಿವಸೇನೆ, ಎನ್‌ಸಿಪಿ ಸೇರಿರುವ 'ಮಹಾಯತಿ' ಮೈತ್ರಿಕೂಟದ ಮೂಲಕವೇ ಎದುರಿಸಲಾಯಿತು. ಚುನಾವಣೆ ಸೀಟು ಹಂಚಿಕೆ, ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ, ಖಾತೆ ಹಂಚಿಕೆ ಸೇರಿದಂತೆ ವಿವಿಧ ವಿಚಾರಕ್ಕೆ ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ದೇಶಾದ್ಯಂತ 2024ರಲ್ಲಿ ಸುದ್ದಿಯಾದರು.
ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ: ಡಿಸೆಂಬರ್ 5ರಂದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಡಿಸೆಂಬರ್ 15ರಂದು ಸಚಿವ ಸಂಪುಟ ವಿಸ್ತರಣೆ ಮಾಡಿದರು. ಸಂಪುಟದಲ್ಲಿ ಬಿಜೆಪಿಯ 19 ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ)ದ ತಲಾ 10 ಶಾಸಕರು ಸಚಿವರಾಗಿದ್ದಾರೆ.
ಖಾತೆ ಹಂಚಿಕೆಯಲ್ಲಿ ಗೃಹ ಖಾತೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಟ್ಟುಕೊಂಟಿದ್ದಾರೆ. ಅಲ್ಲದೇ ಇಂಧನ, ಕಾನೂನು & ನ್ಯಾಯಾಂಗ, ಸಾಮಾನ್ಯ ಆಡಳಿತ ಇಲಾಖೆ, ಮಾಹಿತಿ ಮತ್ತು ಪ್ರಚಾರ ಖಾತೆಗಳು ಮುಖ್ಯಮಂತ್ರಿಗಳ ಬಳಿ ಇದೆ. ಶಿವಸೇನೆ ನಾಯಕ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ನಗರಾಭಿವೃದ್ಧಿ, ವಸತಿ, ಲೋಕೋಪಯೋಗಿ ಖಾತೆ ಹಂಚಿಕೆ ಮಾಡಲಾಗಿದೆ. ಮತ್ತೊಬ್ಬ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ಗೆ ಹಣಕಾಸು & ಯೋಜನೆ, ರಾಜ್ಯ ಅಬಕಾರಿ ಖಾತೆ ನೀಡಲಾಗಿದೆ.
ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಶಿವಸೇನೆ ನಾಯಕ ಏಕನಾಥ್ ಶಿಂಧೆ ಪ್ರಮುಖ ಖಾತೆಗಾಗಿ ಬೇಡಿಕೆ ಇಟ್ಟರು. ತಮ್ಮ ಪುತ್ರ ಶ್ರೀಕಾಂತ್ ಶಿಂಧೆಯನ್ನು ಉಪ ಮುಖ್ಯಮಂತ್ರಿ ಮಾಡಬೇಕು ಎಂದು ಸಹ ಬೇಡಿಕೆ ಇಟ್ಟರು. ಖಾತೆ ಹಂಚಿಕೆ ಕಗ್ಗಂಟಿನ ಕಾರಣ ನವೆಂಬರ್ 23ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾದರೂ ಸಹ ಹೊಸ 'ಮಹಾಯತಿ' ಸರ್ಕಾರ ರಚನೆಯಾಗಿದ್ದು, ಡಿಸೆಂಬರ್ 5ಕ್ಕೆ.
ಏಕನಾಥ್ ಶಿಂಧೆ ಗೃಹ ಖಾತೆ ತಮಗೆ ಬೇಕು ಎಂದು ಪಟ್ಟು ಹಿಡಿದಿದ್ದರು. ದೆಹಲಿಯಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಮುಂದೆಯೂ ಇದೇ ಬೇಡಿಕೆ ಇಟ್ಟಿದ್ದರು. ಆದರೆ ಹೆಚ್ಚು ಸೀಟು ಗೆದ್ದಿರುವ ಬಿಜೆಪಿ ಬಳಿಯೇ ಗೃಹ ಖಾತೆ ಉಳಿಯಲಿದೆ ಎಂದು ಅಮಿತ್ ಶಾ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದರು. ಬಿಜೆಪಿ ನಾಯಕರು ಏಕನಾಥ್ ಶಿಂಧೆ ಜೊತೆ ಸರಣಿ ಸಭೆಗಳನ್ನು ನಡಸುವ ಮೂಲಕ ಹೊಸ ಸರ್ಕಾರ ರಚನೆಯ ಕಗ್ಗಂಟು ಬಿಡಿಸಿದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 'ಮಹಾಯತಿ' ಮೈತ್ರಿಕೂಟಕ್ಕೆ ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಎದುರಾಳಿಯಾಗಿತ್ತು. ಈ ಮೈತ್ರಿಕೂಟದಲ್ಲಿ ಶಿವಸೇನೆ (ಉದ್ಭವ್ ಠಾಕ್ರೆ ಬಣ) 20, ಕಾಂಗ್ರೆಸ್ 16, ಎನ್‌ಸಿಪಿ (ಶರದ್ ಪವಾರ್ ಬಣ) 10 ಸೀಟುಗಳನ್ನು ಗೆದ್ದಿವೆ. ಚುನಾವಣೆಯಲ್ಲಿ ಎಸ್‌ಪಿ 2 ಮತ್ತು ಇತರರು 10 ಸೀಟುಗಳಲ್ಲಿ ಜಯಗಳಿಸಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications