ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ZEE News Opinion Poll: ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರಿಗೆ ಮತದಾರರ ಮಣೆ?

|
Google Oneindia Kannada News

ಲಕ್ನೋ, ಜನವರಿ 19: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಬಳಿಕ ಭಾರತೀಯ ಜನತಾ ಪಕ್ಷವು ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಬಹುತೇಕ ಚುನಾವಣಾಪೂರ್ವ ಸಮೀಕ್ಷೆಗಳು ಭವಿಷ್ಯ ನುಡಿಯುತ್ತಿವೆ. ಜೀ ನ್ಯೂಸ್ ನಡೆಸಿರುವ ಚುನಾವಣಾಪೂರ್ವ ಅಭಿಪ್ರಾಯ ಸಮೀಕ್ಷೆಯೂ ಸಹ ಬಿಜೆಪಿ ಪರವಾಗಿದೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೀ ನ್ಯೂಸ್ ನಡೆಸಿರುವ ಅಭಿಪ್ರಾಯ ಸಮೀಕ್ಷೆಯು ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ಒಲಿಯಲಿದೆ ಎನ್ನುವ ಅಂಕಿ-ಅಂಶಗಳನ್ನು ನೀಡಿದೆ. ರಾಜ್ಯದ ಶೇ.41ರಷ್ಟು ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಸಮಾಜವಾದಿ ಪಕ್ಷವು ಎರಡನೇ ಸ್ಥಾನದಲ್ಲಿ ಗುರುತಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.

ಉತ್ತರ ಪ್ರದೇಶದಲ್ಲಿ ಪಿಎಂ ಮೋದಿ, ಸಿಎಂ ಯೋಗಿ ಚಿತ್ರವಿರುವ ಸೀರೆಗಳದ್ದೇ ಸದ್ದು!ಉತ್ತರ ಪ್ರದೇಶದಲ್ಲಿ ಪಿಎಂ ಮೋದಿ, ಸಿಎಂ ಯೋಗಿ ಚಿತ್ರವಿರುವ ಸೀರೆಗಳದ್ದೇ ಸದ್ದು!

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. ಇದರ ಮಧ್ಯೆ ಜೀ ನ್ಯೂಸ್ ನಡೆಸಿರುವ ಅಭಿಪ್ರಾಯ ಸಮೀಕ್ಷೆಯ ಅಂಕಿ-ಅಂಶಗಳು ಏನು ಹೇಳುತ್ತವೆ ಎಂಬುದನ್ನು ಮುಂದೆ ತಿಳಿಯೋಣ.

ಉತ್ತರ ಪ್ರದೇಶದಲ್ಲಿ ಯಾವ ಪಕ್ಷಕ್ಕೆ ಎಷ್ಟು ಮತ?

ಉತ್ತರ ಪ್ರದೇಶದಲ್ಲಿ ಯಾವ ಪಕ್ಷಕ್ಕೆ ಎಷ್ಟು ಮತ?

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಹೆಚ್ಚು ಶೇಕಡಾವಾರು ಮತಗಳನ್ನು ಗಳಿಸಲಿದೆ. ಯಾವ ಪಕ್ಷಕ್ಕೆ ಎಷ್ಟು ಪ್ರಮಾಣದ ಮತಗಳು ಬೀಳುತ್ತವೆ ಎಂಬುದರ ಕುರಿತು ಸಮೀಕ್ಷೆ ನೀಡಿರುವ ಅಂಕಿ-ಅಂಶಗಳನ್ನು ಕೆಳಗೆ ಪಟ್ಟಿ ಮಾಡಲಾಗಿದೆ.

ಶೇಕಡಾವಾರು ಮತಗಳ ಹಂಚಿಕೆ:

ಬಿಜೆಪಿ - ಶೇ.41

ಸಮಾಜವಾದಿ ಪಕ್ಷ - ಶೇ.34

ಬಹುಜನ ಸಮಾಜವಾದಿ ಪಕ್ಷ - ಶೇ.10

ಕಾಂಗ್ರೆಸ್ - ಶೇ.6

ಇತರೆ - ಶೇ.9

ಯುಪಿಯಲ್ಲಿ ಯಾರಿಗೆ ಎಷ್ಟು ಸ್ಥಾನ?

ಯುಪಿಯಲ್ಲಿ ಯಾರಿಗೆ ಎಷ್ಟು ಸ್ಥಾನ?

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೀ ನ್ಯೂಸ್ ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿ ಮೈತ್ರಿಕೂಟವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂಬುದನ್ನು ತೋರಿಸುತ್ತದೆ. ಯುಪಿ ಚುನಾವಣೆಯಲ್ಲಿ ಬಿಜೆಪಿ 267 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದ್ದು, ಎಸ್‌ಪಿ ಸುಮಾರು 125 ರಿಂದ 148 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.

ಪಕ್ಷವಾರು ಸ್ಥಾನ:

ಬಿಜೆಪಿ ಮೈತ್ರಿಕೂಟ - 245 ರಿಂದ 267

ಸಮಾಜವಾದಿ ಪಕ್ಷ - 125 ರಿಂದ 148

ಬಹುಜನ ಸಮಾಜವಾದಿ ಪಕ್ಷ - 5 ರಿಂದ 9

ಕಾಂಗ್ರೆಸ್ - 3 ರಿಂದ 7

ಇತರೆ - 2 ರಿಂದ 6

ಯುಪಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೇಗಿದೆ ಪೈಪೋಟಿ?

ಯುಪಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೇಗಿದೆ ಪೈಪೋಟಿ?

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯೋಗಿ ಆದಿತ್ಯನಾಥ್ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್, ಬಹುಜನ ಸಮಾಜವಾದಿ ಪಕ್ಷದಿಂದ ಮಾಯಾವತಿ ಮತ್ತು ಕಾಂಗ್ರೆಸ್ ಪಕ್ಷದಿಂದ ಪ್ರಿಯಾಂಕಾ ಗಾಂಧಿಯವರನ್ನು ಸಿಎಂ ಅಭ್ಯರ್ಥಿ ಎನ್ನುವಂತೆ ಬಿಂಬಿಸಲಾಗಿದೆ. ಈ ಪೈಕಿ ಮತದಾರರ ಒಲವು ಯಾರ ಕಡೆಗೆ ಹೆಚ್ಚಾಗಿದೆ ಎಂಬುದನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಮುಖ್ಯಮಂತ್ರಿ ಅಭ್ಯರ್ಥಿಗಳ ಪಟ್ಟಿ:

ಬಿಜೆಪಿಯ ಯೋಗಿ ಆದಿತ್ಯನಾಥ್ - ಶೇ.47

ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್ - ಶೇ.35

ಬಹುಜನ ಸಮಾಜವಾದಿ ಪಕ್ಷದ ಮಾಯಾವತಿ - ಶೇ.9

ಕಾಂಗ್ರೆಸ್ ಪಕ್ಷದ ಪ್ರಿಯಾಂಕಾ ಗಾಂಧಿ - ಶೇ.5

ಇತರೆ - ಶೇ.4

ಕಳೆದ ಬಾರಿ ಚುನಾವಣೆಯ ಫಲಿತಾಂಶ ಹೇಗಿತ್ತು?

ಕಳೆದ ಬಾರಿ ಚುನಾವಣೆಯ ಫಲಿತಾಂಶ ಹೇಗಿತ್ತು?

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

English summary
ZEE News Opinion Poll: Will BJP prevail or Samajwadi comeback to Power in Uttar Pradesh Election?, Look Here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X