ಝಿಕಾ ವೈರಸ್ ಸೋಂಕು; ಭಯಬೇಡ, ಎಚ್ಚರವಿರಲಿ
ಕರ್ನಾಟಕದಲ್ಲಿ ಡೆಂಗ್ಯು ಬಳಿಕ ಝಿಕಾ ವೈರಸ್ ಸೋಂಕು ಪತ್ತೆಯಾಗಿದೆ. ಜನರು ಯಾವುದೇ ಭಯಪಡುವ ಅಗತ್ಯವಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ. ಝಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ ಎಂದು ಕರೆ ನೀಡಲಾಗಿದೆ.
'ಝಿಕಾ' ಎಂಬುದು ಒಂದು ವೈರಸ್ ಸೋಂಕು. ಡೆಂಗ್ಯೂ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕು.

ರೋಗದ ಲಕ್ಷಣಗಳು; ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು (ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ.
ಉಳಿದಂತೆ ರೋಗಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು.
ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.
* ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ
* ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು
* ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು
* ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು
* ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.
* ಝಿಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.
ಮುಂಜಾಗ್ರತಾ ಕ್ರಮಗಳ ಮಾಹಿತಿ
* ಸ್ವಚ್ಛ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು.
* ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು.
* ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.
* ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು.
* ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು.
ಜನರು ಝಿಕಾ ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಆದರೆ ಜಾಗೃತರಾಗಿರಬೇಕು. ಈ ಖಾಯಿಲೆಯು ಡೆಂಗ್ಯೂ ಹರಡುವ ಈಡೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ರೋಗ ಲಕ್ಷಣಗಳಾದ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು (ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಕಂಡುಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಮತ್ತು ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಲಾಗಿದೆ.
-
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ರಾಶಿಯಷ್ಟೇ ಅಲ್ಲ, ದಿಕ್ಕು ಕೂಡಾ ಮುಖ್ಯ: ರಾಶಿಗನುಗುಣವಾಗಿ ನಿಮ್ಮ ಅದೃಷ್ಟ ದಿಕ್ಕು ಯಾವುದು ಗೊತ್ತಾ? -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ











Click it and Unblock the Notifications