ಕ್ರಿಸ್ಮಸ್ ಸಂಭ್ರಮ; ಮೈಸೂರು ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ
ಮೈಸೂರು, ಡಿಸೆಂಬರ್ 25: ಕೋವಿಡ್ ಭೀತಿಯ ನಡುವೆಯೇ ವಿಶ್ವದಾದ್ಯಂತ ಸಂಭ್ರಮದಿಂದ ಕ್ರಿಸ್ಮಸ್ ಆಚರಣೆ ಮಾಡಲಾಗುತ್ತಿದೆ. ಚರ್ಚ್‌ಗಳಲ್ಲಿ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಏಸುಕ್ರಿಸ್ತರ ಜನ್ಮದಿನ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಸಂಭ್ರಮ, ಸಡಗರದಿಂದ ಆಚರಣೆ ಮಾಡುತ್ತಿದ್ದಾರೆ. ಮೈಸೂರು ನಗರದ ಸೇಂಟ್ ಫಿಲೋಮಿನಾ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆಗೆ ಬಿಷಪ್ ಕೆ. ಎ. ವಿಲಿಯಂ ಚಾಲನೆ ನೀಡಿದರು.
ಮೈಸೂರು ನಗರದ ಪ್ರಮುಖ ಆಕರ್ಷಣೆಯಾದ ಸೆಂಟ್ ಫಿಲೋಮಿನಾ ಚರ್ಚ್‌ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗುರುವಾರ ರಾತ್ರಿ ನಡೆದವು. ಮೈಸೂರು ಧರ್ಮಾಧ್ಯಕ್ಷ ಡಾ. ಕೆ. ಎ. ವಿಲಿಯಂ ಸಮ್ಮುಖದಲ್ಲಿ ವಿಶೇಷ ಪ್ರಾರ್ಥನೆ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು ತುಂಬಿತು.

ಶ್ವೇತ ವಸ್ತ್ರಧಾರಿಯಾದ ಧರ್ಮಾಧ್ಯಕ್ಷ ಡಾ. ಕೆ. ಎ. ವಿಲಿಯಂ ತಮ್ಮ ಚರ್ಚ್‌ನ ಪರಿವಾರದೊಂದಿಗೆ ಛತ್ರಿಛಾಮರಗಳ ಹಿಮ್ಮೇಳದೊಂದಿಗೆ ಬಾಲಯೇಸುವಿನ ಪುಟ್ಟ ಮೂರ್ತಿಯನ್ನು ಹೊತ್ತು ಮೆರವಣಿಗೆಯಲ್ಲಿ ತಂದರು.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆಗೆ ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹಬ್ಬದ ಆಚರಣೆ ಸಂದರ್ಭದಲ್ಲಿ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದೆ.

ಕರ್ನಾಟಕ ಸರ್ಕಾರ ರಾತ್ರಿ 11 ಗಂಟೆ ಬಳಿಕ ಜಾರಿಗೊಳಿಸಲು ಉದ್ದೇಶಿಸಿದ್ದ ನೈಟ್ ಕರ್ಫ್ಯೂವನ್ನು ವಾಪಸ್ ಪಡೆದಿದೆ. ಈ ಹಿನ್ನಲೆಯಲ್ಲಿ ಚರ್ಚ್‌ನಲ್ಲಿ ಮಧ್ಯರಾತ್ರಿ ತನಕ ವಿಶೇಷ ಪ್ರಾರ್ಥನೆಗಳು ಮುಂದುವರೆದಿದ್ದವು.












Click it and Unblock the Notifications