ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ರಿಸ್ಮಸ್ ಸಂಭ್ರಮ; ಮೈಸೂರು ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 25: ಕೋವಿಡ್ ಭೀತಿಯ ನಡುವೆಯೇ ವಿಶ್ವದಾದ್ಯಂತ ಸಂಭ್ರಮದಿಂದ ಕ್ರಿಸ್ಮಸ್ ಆಚರಣೆ ಮಾಡಲಾಗುತ್ತಿದೆ. ಚರ್ಚ್‌ಗಳಲ್ಲಿ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಏಸುಕ್ರಿಸ್ತರ ಜನ್ಮದಿನ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಸಂಭ್ರಮ, ಸಡಗರದಿಂದ ಆಚರಣೆ ಮಾಡುತ್ತಿದ್ದಾರೆ. ಮೈಸೂರು ನಗರದ ಸೇಂಟ್ ಫಿಲೋಮಿನಾ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆಗೆ ಬಿಷಪ್ ಕೆ. ಎ. ವಿಲಿಯಂ ಚಾಲನೆ ನೀಡಿದರು‌.

ಕ್ರಿಸ್ ಮಸ್ ದಿನ ಬರುವ ಸಾಂತಾ ಕ್ಲಾಸ್ ಬಗ್ಗೆ ಎಷ್ಟು ಗೊತ್ತು? ಕ್ರಿಸ್ ಮಸ್ ದಿನ ಬರುವ ಸಾಂತಾ ಕ್ಲಾಸ್ ಬಗ್ಗೆ ಎಷ್ಟು ಗೊತ್ತು?

ಮೈಸೂರು ನಗರದ ಪ್ರಮುಖ ಆಕರ್ಷಣೆಯಾದ ಸೆಂಟ್ ಫಿಲೋಮಿನಾ ಚರ್ಚ್‌ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗುರುವಾರ ರಾತ್ರಿ ನಡೆದವು. ಮೈಸೂರು ಧರ್ಮಾಧ್ಯಕ್ಷ ಡಾ. ಕೆ. ಎ. ವಿಲಿಯಂ ಸಮ್ಮುಖದಲ್ಲಿ ವಿಶೇಷ ಪ್ರಾರ್ಥನೆ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು ತುಂಬಿತು.

ಬೆಂಗಳೂರಿನಲ್ಲೇ ತೆರೆದುಕೊಂಡ ಕ್ರಿಸ್ ಮಸ್ ಆಚರಣೆಯ 'ಹೊಸಲೋಕ'! ಬೆಂಗಳೂರಿನಲ್ಲೇ ತೆರೆದುಕೊಂಡ ಕ್ರಿಸ್ ಮಸ್ ಆಚರಣೆಯ 'ಹೊಸಲೋಕ'!

Christmas Celebration Mass Prayers In Church

ಶ್ವೇತ ವಸ್ತ್ರಧಾರಿಯಾದ ಧರ್ಮಾಧ್ಯಕ್ಷ ಡಾ. ಕೆ. ಎ. ವಿಲಿಯಂ ತಮ್ಮ ಚರ್ಚ್‌ನ ಪರಿವಾರದೊಂದಿಗೆ ಛತ್ರಿಛಾಮರಗಳ ಹಿಮ್ಮೇಳದೊಂದಿಗೆ ಬಾಲಯೇಸುವಿನ ಪುಟ್ಟ ಮೂರ್ತಿಯನ್ನು ಹೊತ್ತು ಮೆರವಣಿಗೆಯಲ್ಲಿ ತಂದರು.

ಕ್ರಿಸ್ ಮಸ್ ಸ್ವಾಗತಕ್ಕಾಗಿ ಬಂದು ನಿಂತಿದೆ ಗೇಟ್ ವೇ ಆಫ್ ಇಂಡಿಯಾ !ಕ್ರಿಸ್ ಮಸ್ ಸ್ವಾಗತಕ್ಕಾಗಿ ಬಂದು ನಿಂತಿದೆ ಗೇಟ್ ವೇ ಆಫ್ ಇಂಡಿಯಾ !

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆಗೆ ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹಬ್ಬದ ಆಚರಣೆ ಸಂದರ್ಭದಲ್ಲಿ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದೆ.

Christmas Celebration Mass Prayers In Church

ಕರ್ನಾಟಕ ಸರ್ಕಾರ ರಾತ್ರಿ 11 ಗಂಟೆ ಬಳಿಕ ಜಾರಿಗೊಳಿಸಲು ಉದ್ದೇಶಿಸಿದ್ದ ನೈಟ್ ಕರ್ಫ್ಯೂವನ್ನು ವಾಪಸ್ ಪಡೆದಿದೆ. ಈ ಹಿನ್ನಲೆಯಲ್ಲಿ ಚರ್ಚ್‌ನಲ್ಲಿ ಮಧ್ಯರಾತ್ರಿ ತನಕ ವಿಶೇಷ ಪ್ರಾರ್ಥನೆಗಳು ಮುಂದುವರೆದಿದ್ದವು.

English summary
Mass prayer at St. Philomena church Mysuru in a view of Christmas 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X