ಈ ವರ್ಷ ದಸರಾಗೆ ದಾಖಲೆ ಸಂಖ್ಯೆಯ ಪ್ರವಾಸಿಗರು
ಮೈಸೂರು, ಅ.12: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ದಾಖಲೆ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿದ್ದಾರೆ. 10 ದಿನಗಳಲ್ಲಿ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳಿಂದ ರು.23 ಲಕ್ಷಕ್ಕಿಂತ ಅಧಿಕ ವರಮಾನ ಬಂದಿದೆ.
ಮೈಸೂರು ಅರಮನೆ, ಚಾಮರಾಜೇಂದ್ರ ಮೃಗಾಲಯಕ್ಕೆ ಅಧಿಕ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಟ್ಟಿದ್ದಾರೆ. ಸೆ.30ರಿಂದ ಅ.8ರವರೆಗೆ ಮೈಸೂರಿಗೆ ಸುಮಾರು 1,15,000 ಮಂದಿ ಭೇಟಿ ನೀಡಿದ್ದಾರೆ. 90 ಸಾವಿರ ಮಂದಿ ಮೈಸೂರು ಅರಮನೆ, ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ.
ಮೈಸೂರು ಅರಮನೆ ಹಾಗೂ ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರಿಂದ ಸರಕಾರಕ್ಕೆ ಸುಮಾರು ರು.18,89,000ಗಳಷ್ಟು ಆದಾಯ ಬಂದಿರುವುದಾಗಿ ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಅವರಾದಿ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications