ಒಂಟಿ ಕಾಲಿನಲ್ಲಿ ಸಚಿವ ರಾಮದಾಸ್ ಓಟ

Minister SA Ramdas
ಮೈಸೂರು, ಸೆ.25: ಮೈಸೂರು ದಸರಾ ಸಮೀಪಿಸುತ್ತಿದ್ದಂತೆಯೇ ನಗರದ ವಿವಿಧೆಡೆ ಕಾರ್ಯಕ್ರಮಗಳು ಸಮಾರೋಪಾದಿಯಲ್ಲಿ ನಡೆಯತೊಡಗಿವೆ.

ದಸರಾ ಕ್ರೀಡಾ ಉಪ ಸಮಿತಿ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಜೆಎಲ್‌ಬಿ ರಸ್ತೆಯಲ್ಲಿರುವ ಹಾರ್ಡ್ವಿಕ್ ಪ್ರೌಢಶಾಲೆಯಲ್ಲಿ ಶನಿವಾರ ದಸರಾ ಪ್ರಯುಕ್ತ ಗ್ರಾಮೀಣ ಪ್ರದೇಶದ ಸಾಂಪ್ರದಾಯಿಕ ಕ್ರೀಡೆಗಳಾದ ಪಗಡೆಯಾಟ, ಏಳುಮನೆ ಚೌಕಾಬಾರ, ಹಳಿಗುಳಿಮಣೆ, ಕುಂಟೆಬಿಲ್ಲೆ, ಕಣ್ಣಾಮುಚ್ಚಾಲೆ, ಒಂಟಿ ಕಾಲಿನ ಓಟ, ಕಂಬದ ಆಟಗಳನ್ನು ಏರ್ಪಡಿಸಲಾಗಿದೆ.

ಕರ್ನಾಟಕದ ವಿವಿಧ ಕಡೆಗಳಿಂದ ನೂರಾರು ಸ್ಪರ್ಧಿಗಳು ಆಗಮಿಸಿ ಕ್ರೀಡೆಯಲ್ಲಿ ಪಾಲ್ಗೊಂಡು ಮನರಂಜನೆ ಪಡೆದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಿ.ಪಂ.ಅಧ್ಯಕ್ಷೆ ಸುನೀತಾ ವೀರಪ್ಪಗೌಡ ಅವರು ಪಗಡೆಯಾಟದ ದಾಳ ಉರುಳಿಸುವ ಮೂಲಕ ಸಾಂಪ್ರದಾಯಿಕ ಕ್ರೀಡೆಗೆ ಚಾಲನೆ ನೀಡಿದರು.

ಈ ಸಂದರ್ಭ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ವಹಿಸಿ ಮಾತನಾಡಿ 401 ವರ್ಷಗಳ ಇತಿಹಾಸವಿರುವ ದಸರಾ ಮಹೋತ್ಸವದಲ್ಲಿ ಮೊದಲ ಬಾರಿಗೆ ಸಾಂಪ್ರದಾಯಿಕ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದರು.

ಈ ಸಂದರ್ಭ ಸಚಿವರು ಪಗಡೆ ಹಾಗೂ ಒಂಟಿ ಕಾಲಿನ ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಗಮನಸೆಳೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+