ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಬಾರಿ ಹೊರುವ ಅರ್ಜುನನ ತಾಲೀಮು ಹೇಗಿರುತ್ತೆ?

By ಬಿ.ಎಂ.ಲವಕುಮಾರ್
|
Google Oneindia Kannada News

ದಸರಾ ಗಜಪಡೆಗಳ ಪೈಕಿ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುವ ಅರ್ಜುನನಿಗೆ ವಿಶೇಷ ಸತ್ಕಾರಗಳು ನಡೆಯುತ್ತವೆ. ಉದ್ದು. ಗೋಧಿ, ಕುಸುಲಕ್ಕಿ, ಈರುಳ್ಳಿ, ಹಸಿ ತರಕಾರಿಗಳ ದೊಡ್ಡ ಉಂಡೆ ಜೊತೆಗೆ ಬೆಣ್ಣೆ, ಭತ್ತ, ತೆಂಗಿನಕಾಯಿ, ಹಿಂಡಿ, ಕಬ್ಬು, ಬೆಲ್ಲ, ಮೊದಲಾದ ಆಹಾರಗಳು ಅರ್ಜುನನಿಗೆ ನೀಡಲಾಗುತ್ತದೆ. ಹಸಿರು ಮೇವುಗಳಾಗಿ ಆಲದ ಮರದ ಸೊಪ್ಪು, ಹುಲ್ಲನ್ನು ಆಗಾಗ ನೀಡಲಾಗುತ್ತಿದೆ. ದಿನಕ್ಕೆರಡು ಬಾರಿ ಸ್ನಾನ ಮಾಡಿಸಲಾಗುತ್ತದೆ.

ದಿನಕ್ಕೆರಡು ಬಾರಿ ತಾಲೀಮು : ಜಂಬೂ ಸವಾರಿಯಲ್ಲಿ ಯಾವುದೇ ಅಡೆತಡೆಗೆ ಬಗ್ಗದೆ ಮುನ್ನಡೆಯಲು ಅರ್ಜುನನಿಗೆ 750 ಕೆಜಿ ತೂಕದ ಮರದ ಅಂಬಾರಿಯನ್ನು, ಉಳಿದ ಆನೆಗಳಿಗೆ ಮರಳಿನ ಮೂಟೆ (ಗಾದಿ ಹಮ್ದಾ)ಯನ್ನು ಕಟ್ಟಿ ದಿನಕ್ಕೆರಡು ಬಾರಿ ತಾಲೀಮು ನೀಡಲಾಗುತ್ತದೆ.[ದೇವರ ಪ್ರೀತಿಗೆ ಪಾತ್ರರಾಗಬೇಕೆ? ಹಾಗಾದ್ರೆ ದಸರಾ ಪೂಜೆ ಹೀಗಿರಲಿ]

Know about Mysuru dasara elephants training

ಪ್ರತಿದಿನ ಅರಮನೆ ಆವರಣದಿಂದ ಆರಂಭವಾಗುವ ಈ ತಾಲೀಮು ಸುಮಾರು 6 ಕಿ.ಮೀ. ದೂರವಿರುವ ಬನ್ನಿಮಂಟಪದವರೆಗೆ ದಿನನಿತ್ಯ ನಡೆಯುತ್ತದೆ. ಈ ರೀತಿಯ ಮರಳು ತಾಲೀಮನ್ನು ಸುಮುಹೂರ್ತದಲ್ಲಿ ಆರಂಭಿಸಲಾಗುತ್ತದೆ.

ಅಂಬಾರಿ ಕಟ್ಟುವುದು ಹೇಗೆ? : ಮೊದಲಿಗೆ ಅರ್ಜುನ ಮಂಡಿಯೂರಿ ಮಲಗುತ್ತದೆ. ಆಗ ಸುಮಾರು 300 ಕೆಜಿ ಭಾರದ 'ಗಾದಿ ಹಮ್ದಾ' ಎಂದು ಕರೆಯುವ ಮರಳು ತುಂಬಿದ ಚೀಲವನ್ನು ಅದರ ಬೆನ್ನ ಮೇಲೆ ಹಾಸಿ ಮಾರುದ್ದದ ಹಗ್ಗದಿಂದ ಆನೆಯ ಹೊಟ್ಟೆ ಭಾಗಕ್ಕೆ ಸುತ್ತಿ ಬಿಗಿಯಾಗಿ ಕಟ್ಟಲಾಗುತ್ತದೆ. ಬಳಿಕ ಗೋಣಿ ಚೀಲಗಳನ್ನು ಹಾಸಿ ಅದರ ಮೇಲೆ ಕಬ್ಬಿಣದ ತೊಟ್ಟಿಲನ್ನು ಕಟ್ಟಲಾಗುತ್ತದೆ. ಇದು ಸುಲಭದ ಕೆಲಸವಲ್ಲ. ಆದರೂ 10 ಹೆಚ್ಚು ಮಾವುತರು ಇದನ್ನು ಮಾಡಿ ಮುಗಿಸುತ್ತಾರೆ.[ರಾಜ ಗಾಂಭೀರ್ಯದ ದಸರಾ ಗಜಪಡೆ ಎಲ್ಲಿಂದ ಬಂದದ್ದು?]

ಆ ನಂತರ ತೊಟ್ಟಿಯಲ್ಲಿ ಮರಳು ಚೀಲಗಳನ್ನು ಇಡಲಾಗುತ್ತದೆ. ಪ್ರತಿ ದಿನವೂ ಚೀಲಗಳ ಸಂಖ್ಯೆಯನ್ನು ಹೆಚ್ಚಿಸುತ್ತಾ ಹೋಗಲಾಗುತ್ತದೆ. ಈ ರೀತಿಯ ಭಾರವನ್ನು ಅರ್ಜುನ ಮಾತ್ರವಲ್ಲದೆ, ಇತರ ಕೆಲ ಆನೆಗಳಿಗೂ ಕಟ್ಟಿ ಸುಮಾರು 15 ದಿನಗಳ ಕಾಲ ಸರತಿಯ ಸಾಲಿನಲ್ಲಿ ತಾಲೀಮು ನಡೆಸಲಾಗುತ್ತದೆ.

ಸುಮಾರು ನೂರು ಕೆಜಿಯಿಂದ ಆರಂಭವಾಗುವ ತಾಲೀಮು 750 ಕೆಜಿಗೆ ಬಂದು ತಲುಪುತ್ತದೆ. ಆ ನಂತರ ಮರದ ಅಂಬಾರಿಯನ್ನು ಕಟ್ಟಿ ತಾಲೀಮು ನಡೆಸಲಾಗುತ್ತದೆ. ಇದಾದ ಬಳಿಕ ದಸರಾ ದಿನದಂದು ಶ್ರೀ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಜಂಬೂ ಸವಾರಿ ನಡೆಸಲಾಗುತ್ತದೆ.
ಅರಮನೆ ಆವರಣದಿಂದ ಹೊರಡುವ ಈ ಜಂಬೂ ಸವಾರಿ ಸಯ್ಯಾಜಿರಾವ್ ರಸ್ತೆಯ ಮೂಲಕ ಬನ್ನಿಮಂಟಪ ತಲುಪುತ್ತದೆ.

English summary
The Mysuru Dasara elephants led by Arjuna undergoing rehearsals for the jamboo savari in Mysuru city more than two months. Know about elephants rehearsals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X