ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂತಾನ ಕರುಣಿಸುವ ಕುದೇರು ಗ್ರಾಮದ ಹಿಟ್ಟಿನ ಗೌರಮ್ಮ

By ಬಿ.ಎಂ.ಲವಕುಮಾರ್
|
Google Oneindia Kannada News

ಇಂದು ಎಲ್ಲೆಡೆ ಗೌರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳಿಗಂತು ಹಬ್ಬದ ಸಡಗರ ಸಂಭ್ರಮ ಹೇಳತೀರದಾಗಿದೆ. ಸಾಮಾನ್ಯವಾಗಿ ಹೆಚ್ಚಿನವರು ಮನೆಯಲ್ಲಿ ಗೌರಿಯನ್ನು ಕೂರಿಸಿ ಪೂಜೆ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಆದರೆ ಗೌರಿ ಹಬ್ಬವನ್ನು ಚಾಮರಾಜನಗರದ ಕುದೇರಿನಲ್ಲಿ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಇಲ್ಲಿರುವ ಸ್ವರ್ಣ ಗೌರಿ ದೇಗುಲದಲ್ಲಿ ವಿವಿಧ ಪೂಜೆ ಪುರಸ್ಕಾರದೊಂದಿಗೆ ಗೌರಿಯನ್ನು ಪೂಜಿಸಲಾಗುತ್ತದೆ. [ಗಣೇಶನನ್ನು ಒಲಿಸಿಕೊಳ್ಳಲು 7 ವಿಧಾನಗಳು]

ಎಲ್ಲ ವರ್ಗದ ಜನತೆ ಯಾವುದೇ ಜಾತಿ ಅಂತರವಿಲ್ಲದೆ ಜತೆಗೂಡಿ ಹಬ್ಬವನ್ನು ಆಚರಿಸುತ್ತಾರೆ. ಮತ್ತೊಂದು ವಿಶೇಷ ಏನೆಂದರೆ ಗೌರಿ ದೇಗುಲವೇ ಗ್ರಾಮದಲ್ಲಿರುವುದರಿಂದ ಗೌರಿಯನ್ನು ಬೇರೆಲ್ಲೂ ಪ್ರತಿಷ್ಠಾಪಿಸಿ ಪೂಜಿಸುವ ಸಂಪ್ರದಾಯವಿಲ್ಲ. ಎಲ್ಲರೂ ಒಂದೆಡೆ ಸೇರಿ ಹಬ್ಬವನ್ನು ಆಚರಿಸುವುದರಿಂದ ಸಾಮರಸ್ಯದ ಸಂಕೇತವಾಗಿಯೂ ಹಬ್ಬ ಗಮನಸೆಳೆಯುತ್ತದೆ. [ಸ್ವರ್ಣಗೌರೀವ್ರತದ ಹಿನ್ನೆಲೆ, ವಿಶೇಷತೆ ಮತ್ತು ಸಿದ್ಧತೆ]

ಕಡಲೆ ಹಿಟ್ಟಿನ ಗೌರಿ: ಗ್ರಾಮದ ದೊಡ್ಡಕೆರೆ ಯಮುನಾ ತಡಿಯಲ್ಲಿ ಹಬ್ಬಕ್ಕೂ ಮೊದಲು ಮರಳಿನ ಗೌರಿಯನ್ನು ಸಿದ್ದಗೊಳಿಸಿ ನಂತರ ಹಬ್ಬದ ದಿನ ವಿಶೇಷ ಪೂಜೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಗೌರಿಯನ್ನ ಪ್ರತಿಷ್ಠಾಪಿಸಲಾಗುತ್ತದೆ. [ಶಾಸ್ತ್ರಬದ್ಧವಾಗಿ ಗಣಪತಿಯನ್ನು ವಿಸರ್ಜಿಸುವ ಕ್ರಮ]

ದೇವಾಲಯದಲ್ಲಿ ಐದನೇ ದಿನಕ್ಕೆ ಮರಳಿನ ಗೌರಿಯನ್ನ ಬದಲಿಸಿ ಕಡಲೆ ಹಿಟ್ಟಿನ ಗೌರಿಯನ್ನು ಪ್ರತಿಷ್ಠಾಪಿಸಿ ಅದಕ್ಕೆ ಚಿನ್ನದ ಕವಚ ಆಭರಣ ಹಾಕಲಾಗುತ್ತದೆ.

Chamarajanagar Kuderu Goddesses Gowri Festival Significance

ದೇವಾಲಯದಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿದಾಗಿನಿಂದ 12 ದಿನಗಳ ಕಾಲ ಪ್ರತಿನಿತ್ಯ ಪೂಜೆ ನಡೆಯುತ್ತದೆ. ಪ್ರಾರಂಭ ದಿನದಲ್ಲಿ ನವದಂಪತಿಗಳು ಬಾಗಿನ ಅರ್ಪಿಸುತ್ತಾರೆ. ಮಕ್ಕಳಿಲ್ಲದವರು ಸಂತಾನ ಭಾಗ್ಯಕ್ಕಾಗಿ ಚಿನ್ನ, ಬೆಳ್ಳಿಯ ತೊಟ್ಟಿಲು ಸಮರ್ಪಣೆ ಮಾಡುತ್ತಾರೆ.

ಯುವತಿಯರು ಕಂಕಣ ಭಾಗ್ಯಕ್ಕಾಗಿ ಮಾಂಗಲ್ಯವನ್ನು ದೇವರಿಗೆ ಅರ್ಪಣೆ ಮಾಡುತ್ತಾರೆ. ಅಷ್ಟೇ ಅಲ್ಲ ದೀಪೋತ್ಸವ, ದೀಪಾರಾಧನೆ ಸೇರಿದಂತೆ ಇಷ್ಟಾರ್ಥ ಸಿದ್ದಿಗಾಗಿ ನಾನಾ ಹರಕೆಗಳನ್ನು ಹರಿಸಿಕೊಂಡ ಭಕ್ತರು ಸಲ್ಲಿಸಿ ದೇವರನ್ನು ಪ್ರಾರ್ಥಿಸುತ್ತಾರೆ.

ಸುವರ್ಣ ಸಂಭ್ರಮದಲ್ಲಿ ದೇಗುಲ: ಕುದೇರು ಗ್ರಾಮದಲ್ಲಿ 1913ರಲ್ಲಿ ಗೌರಿ ದೇವಾಲಯ ನಿರ್ಮಿಸಲಾಗಿದ್ದು, ಸುವರ್ಣ ಸಂಭ್ರಮವನ್ನು ಈ ದೇಗುಲ ಕಂಡಿದೆ. ಮೊದಲಿಗೆ ಗೌರಿಗೆ ಕಡಲೆ ಹಿಟ್ಟಿನ ಗೌರಮ್ಮ ಎನ್ನುತ್ತಿದ್ದ ಜನತೆ ತದ ನಂತರ ಊರ ಹಬ್ಬವಾಗಿ ಆಚರಿಸಲು ವಿಗ್ರಹಕ್ಕೆ ಚಿನ್ನದ ಕವಚ, ಆಭರಣ ತೊಡಿಸಿದರು ಅಂದಿನಿಂದ ಇದು ಸ್ವರ್ಣ ಗೌರಿ ಎಂದು ಹೆಸರುವಾಸಿಯಾಯಿತು.

ಇತರೆ ದಿನಗಳಲ್ಲಿ ಇಲ್ಲಿ ಪೂಜೆ ಪುರಸ್ಕಾರಗಳು ನಡೆಯುತ್ತವೆಯಾದರೂ, ಗೌರಿ ಹಬ್ಬದಂದು ವಿಶೇಷ ಪೂಜೆಗಳು ನಡೆಯುತ್ತವೆ. ಅಂದು ಗೌರಿಯ ದರ್ಶನ ಮಾಡಿದರೆ ಇಷ್ಟಾರ್ಥ ನೆರವೇರುತ್ತದೆ ಎಂಬ ಪ್ರತೀತಿ ಇರುವುದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಿ, ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ.

English summary
Goddesses Gowri has given more prominence in Kuderu Village of Chamarajanagar district during Gowri Ganesha Festival in Bhadrapad month. Know what is the significance of the Gowri Habba here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X