• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಹಾ ಚಳಿಚಳಿ : ಧನುರ್ಮಾಸದ ವಿಶೇಷತೆ ಏನು?

By *ಗುರುರಾಜ ಪೋಶೆಟ್ಟಿಹಳ್ಳಿ, ಬೆಂಗಳೂರು
|

ಕೃಷ್ಣನು ಭಗವದ್ಗೀತೆಯಲ್ಲಿ ಮಾಸಗಳನ್ನು ಕುರಿತು ಹೇಳುವಾಗ ಧನುರ್ಮಾಸದ ಮಹಾತ್ಮೆಗೆ ವಿಶೇಷ ಒತ್ತು ನೀಡಿ "ಮಾಸಾನಾಂ ಮಾರ್ಗಶೀರ್ಷೋಸ್ಮಿ" ಎಂದು ಅಪ್ಪಣೆ ಕೊಡಿಸಿದ್ದಾನೆ. ಸೂರ್ಯ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಬೇಕಾದರೆ ಒಂದು ತಿಂಗಳು ಬೇಕಾಗುತ್ತದೆ. ಅದರಂತೆಯೇ ಸೂರ್ಯ ಧನುರಾಶಿಯಲ್ಲಿ ಪ್ರವೇಶ ಮಾಡಿ ಮಕರರಾಶಿಗೆ ಪ್ರವೇಶ ಮಾಡಲು ಒಂದು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಈ ಒಂದು ತಿಂಗಳನ್ನು (ಧನು ರಾಶಿಯ) "ಧನುರ್ಮಾಸ" ಎಂದು ಕರೆಯುತ್ತಾರೆ. ಈ ಮಾಸದಲ್ಲಿ ವಿಶೇಷವಾಗಿ ಚಳಿಚಳಿ ಇರುತ್ತದೆ.

ಚಳಿಯೆಂದು ಬಹಳ ಹೊತ್ತು ಹಾಸಿಗೆ ಮೇಲೆ ಹೊದ್ದು ಮಲಗುವುದು ಅನಾರೋಗ್ಯ. ಏನು ತಿಂದರೂ ಭಸ್ಮ ಮಾಡಿಬಿಡುವಂತಹ ಉತ್ತಮವಾದ ಹವೆ. ಡಿಸೆಂಬರ್ ತಿಂಗಳೆಂದರೆ ಹೇಳಿಕೇಳಿ ಮೈಕೊರೆವ ಚಳಿಗಾಲ. ಚಳಿಯ ತೀವ್ರತೆಯೆಷ್ಟು ಇರುತ್ತದೆ ಎಂದರೆ ಚಳಿಯನ್ನು ತಾಳಲಾರದೆ, ರಾತ್ರಿ ವೇಳೆ ಮನುಷ್ಯ ತನ್ನ ದೇಹವನ್ನು ಬಿಲ್ಲಿನಂತೆ ಬಾಗಿಸಿ ಮಲಗುತ್ತಾನೆ. ಮುದುರಿಕೊಳ್ಳುತ್ತಾನೆ. ಆದ್ದರಿಂದಲೇ ಈ ಮಾಸಕ್ಕೆ ಧನುರ್ಮಾಸ ಎಂದು ಹೆಸರು. ಇಂತಹ ಧನುರ್ಮಾಸದಲ್ಲಿ ಅರುಣೋದಯ ಕಾಲದಲ್ಲಿ ಒಂದು ತಿಂಗಳು ಹುಗ್ಗಿಯನ್ನು ತಯಾರು ಮಾಡಿ ಧನುರ್ ನಾರಾಯಣನಿಗೆ ಸಮರ್ಪಿಸುವುದು ಹಿಂದೂ ಸಂಪ್ರದಾಯ.

ಮುದ್ಗಾನ್ನವೆಂದರೇನು ? ಮುದ್ಗಾನ್ನ ಎಂದರೆ ಹುಗ್ಗಿ ಅಕ್ಕಿಯ ಎರಡರಷ್ಟು ಪ್ರಮಾಣ ಹೆಸರುಬೇಳೆ, ಒಣಶುಂಠಿ, ಮೆಣಸು, ಜೀರಿಗೆ, ಪತ್ರೆ, ದಾಲ್ಚಿನ್ನಿ, ಜಾಜಿಕಾಯಿ, ಕೊಬ್ಬರಿ, ಲವಂಗ, ಉಪ್ಪು, ತುಪ್ಪ ಎಲ್ಲವನ್ನು ಕೂಡಿಸಿ ಬೇಯಿಸಿದ ಪದಾರ್ಥವೇ ಮುದ್ಗಾನ್ನ.

ಧನುರ್ಮಾಸದಲ್ಲಿ ದೇವರ ಪೂಜೆಗೆ, ನೈವೇದ್ಯ ಪ್ರಸಾದಕ್ಕೆ ಮುದ್ಗಾನ್ನವೇ ಏಕೆ? ಇದಕ್ಕೆ ನಾನಾ ಕಾರಣಗಳುಂಟು. ಮನುಷ್ಯ ಶುದ್ಧ ಸೋಮಾರಿ, ಶಾಸ್ತ್ರದ ಕಟ್ಟುಪಾಡುಗಳಿಲ್ಲವಾದರೆ ಮನುಷ್ಯ ಬಿಸಿಲು ಮೈಸೋಂಕುವರೆಗೂ ಹೊದ್ದ ಕಂಬಳಿಯ ಮುಸುಕನ್ನು ಸರಿಸುತ್ತಲೇ ಇರಲಿಲ್ಲ. ಆದರೆ ವಸ್ತುತಃ ಸೂರ್ಯೋದಯವಾದೊಡನೆ ಚಳಿ ಹೆಚ್ಚಾಗುತ್ತದೆ. ಆದ್ದರಿಂದಲೇ ಮೈಬೆಚ್ಚಗಾಗಿಸುವ ಹಾಗು ಚಳಿಯನ್ನು ಎದುರಿಸುವ ಸಾಮರ್ಥ್ಯವನ್ನು ಕೊಡುವ ಪವಿತ್ರ ಸಾತ್ವಿಕ ಆಹಾರ ಎಂದರೆ ಹುಗ್ಗಿ.

ಚಳಿಗಾಲದಲ್ಲಿ ಚರ್ಮ ಒಡೆದು ರೂಪಗೊಳ್ಳುವುದರಿಂದ ಚರ್ಮವನ್ನು ಸ್ನಿಗ್ಧಗೊಳಿಸುವ ಆಹಾರದ ಸೇವನೆ ತೀರಾ ಅವಶ್ಯ. ಈ ಸಮಯದಲ್ಲಿ ಶರೀರದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುವುದರಿಂದಲೂ, ಧನುರ್ಮಾಸದಲ್ಲಿ ಹುಗ್ಗಿಯನ್ನು ಸೇವಿಸುವುದರಿಂದ ಕೊಬ್ಬಿನ ಅಂಶವನ್ನು ಹೆಚ್ಚಿಸಿ ಶಾರೀರಿಕ ಸಮತೋಲನವನ್ನು ಕಾಪಾಡಿಕೊಳ್ಳಬಹುದು. ಹೀಗೆ ಧನುರ್ಮಾಸದಲ್ಲಿ ಹುಗ್ಗಿ ಸೇವನೆಯು ವೈಜ್ಞಾನಿಕವಾಗಿಯೂ ಸಮಂಜಸ ಎಂಬುದು ನಿಮಗೆ ತಿಳಿದಿರಲಿ.

ಧನುರ್ಮಾಸದಲ್ಲಿ ಶ್ರೀವಿಷ್ಣು ಪೂಜೆಯೊಡನೆ ಶ್ರೀಲಕ್ಷ್ಮಿಯನ್ನು ದ್ವಾದಶ ನಾಮದೊಂದಿಗೆ ಪ್ರಾರ್ಥಿಸಿದರೆ ಅತಿಶಯ ಸಂಪತ್ತು ಒಲಿಯುತ್ತದೆ. ಒಮ್ಮೆ ಇಂದ್ರ ದೇವರು ರಾಜ್ಯ ಭ್ರಷ್ಟರಾದಾಗ ಶಚೀದೇವಿಯು ಹುಗ್ಗಿಯ ನೈವೇದ್ಯ ಮಾಡಿ ಮಹಾಲಕ್ಷ್ಮಿಯನ್ನು ದ್ವಾದಶನಾಮಗಳಿಂದ ಸ್ತುತಿಸಿದಳು, ಅದರ ಫಲವಾಗಿ ಇಂದ್ರ ದೇವರಿಗೆ ಪುನಃ ರಾಜ್ಯವು ದೊರೆಯಿತು ಎಂಬುದು ಪುರಾಣದ ಐತಿಹ್ಯ.

ದೇವತೆಗಳಿಗೆ ದಕ್ಷಿಣಾಯಣವು ರಾತ್ರಿಯ ಕಾಲ. ಅದರಂತೆ ಉತ್ತರಾಯಣವು ಹಗಲಿನ ಸಮಯ ಆದರೆ ಈ ಧನುರ್ಮಾಸವು ಹಗಲು ರಾತ್ರಿ ಎರಡು ಸೇರಿದ ಸಮಯವೆಂದು ಹೇಳಲಾಗಿ ಬ್ರಾಹ್ಮಿ ಮುಹೂರ್ತದಲ್ಲಿ ಯಾರು ಎದ್ದು ಸ್ನಾನ ಮಾಡಿ ಭಗವಂತನನ್ನು ಪೂಜಿಸಿ ಹುಗ್ಗಿಯನ್ನು ಸಮರ್ಪಿಸುತ್ತಾರೋ ಅವರ ಮನೋಭೀಷ್ಟಗಳು ಅಕ್ಷಯವಾಗಿ ನೆರವೇರುತ್ತದೆ. ನಕ್ಷತ್ರಗಳು ಕಾಣುವ ಸಮಯ ಉತ್ತಮ ಪೂಜಾಫಲ. ಅವು ಮರೆಯಾದರೆ ಮಧ್ಯಮ, ಮುಂಜಾನೆಯ ಹೊಂಬೆಳಕು ಮೂಡಿದರೆ ಅಧಮಕಾಲ. ಮಧ್ಯಾಹ್ನವಂತು ವ್ಯರ್ಥ.

ಭಾಗವತದಲ್ಲಿ ಗೋಪಿಯರ ಕಾತ್ಯಾಯನಿ ವ್ರತವನ್ನು ಕುರಿತು ಹೇಳಲಾಗಿದೆ. ಧನುರ್ಮಾಸದ ಮುಂಜಾವಿನಲ್ಲಿ ಮಾಡುವ ವ್ರತದ ಫಲವು ಭಕ್ತರಿಗೆ ಸರ್ವವಿಧವಾದ ಇಷ್ಟಾರ್ಥವನ್ನು ಕೊಡುತ್ತದೆ ಎಂಬುದನ್ನು ಸೂಚಿಸುವುದಕ್ಕಾಗಿಯೇ ಈ ವ್ರತದ ವಿಧಿಯನ್ನು ಗೋಪಿಯರ ಕೂಡಿ ನಂದಗೋಪನ ಮಗನಾದ ಶ್ರೀಕೃಷ್ಣ ಪರಮಾತ್ಮನನ್ನು ಪತಿಯಾಗಿ ವರಿಸಲು ಈ ವ್ರತವನ್ನು ಮಾಡುತ್ತಾರೆ. ಅಂತಹ ಪರಮಾತ್ಮನ್ನೇ ದೊರಕಿಸಿಕೊಡುವುದು ಮಾಸವಾಗಿರುವುದರಿಂದ ಶೈವ, ವೈಷ್ಣವ, ಶಾಕ್ತ ಎಂಬ ಭೇದವಿಲ್ಲದೆ, ಎಲ್ಲರಿಗೂ ಎಲ್ಲ ದೇಗುಲಗಳಲ್ಲಿಯೂ ಧನುರ್ಮಾಸದ ಆಚರಣೆಗಳನ್ನು ನಡೆಸುತ್ತಾರೆ.

ಧನುರ್ಮಾಸದ ಪೂಜಾ ನೈವೇದ್ಯ ನಿಯಮವನ್ನು ತಿಂಗಳುದ್ದಕ್ಕೂ ಪ್ರತಿದಿನ ನಡೆಸಬೇಕೆಂದು ವಿಧಿಸಲಾಗಿರುವುದಾದರೂ, ಆಪದ್ಧರ್ಮಿಗಳು ಒಂದೇ ಒಂದು ದಿನವಾದರೂ ಧನುರ್ಮಾಸ ವ್ರತವನ್ನು ನಡೆಯಿಸಿ ತೃಪ್ತಿಪಡೆಯುವುದುಂಟು. ಇದನ್ನೂ ಮಾಡಲಾರದವರು ಪೌಷ್ಯಮಾಸದಲ್ಲಿ ಬರುವ "ಮುಕ್ಕೋಟಿ ದ್ವಾದಶೀ"ಯಂದು ಧನುರ್ಮಾಸದ ಕೃತಾರ್ಥತೆಯ ಸಮಾಧಾನವನ್ನು ತಾಳುವರು. ತಿರುಪತಿಯ ತಿಮ್ಮಪ್ಪನಿಗೆ ಸಲ್ಲುವ ವೈಕುಂಠ ಏಕಾದಶಿ, ಮುಕ್ಕೋಟಿ ದ್ವಾದಶಿ ಪೂಜಾ ಕೈಂಕರ್‍ಯಗಳು ವೈಶಿಷ್ಟ್ಯಪೂರ್ಣವಾದುದು. ಧನುರ್ಮಾಸ ಪುಣ್ಯ ಪೂರ್ಣ ಮಾಸ; ಪರ್ವಪ್ರವರ ಪ್ರತಿಷ್ಠಿತ ಮಾಸ !

English summary
What is Dhanurmaasa? Why hindus offer special prayers to the Sun god? where can I find Dhanurmaasa info and Huggi recipe or pongal cuisine?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X