ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುವ ಪೀಳಿಗೆಗೆ ವಿವೇಕಾನಂದರ ಸಿಂಹವಾಣಿ

By * ಮಲೆನಾಡಿಗ
|
Google Oneindia Kannada News

Swami Vivekananda's Birthday
ದೇಶವನ್ನು ಮುನ್ನಡೆಸಲು ಸಶಕ್ತವಾದ ಯುವಪಡೆಯನ್ನು ನಿರ್ಮಿಸುವುದೇ ನನ್ನ ಗುರಿ ಎನ್ನುತ್ತಿದ್ದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ; ಮಾನಸಿಕ, ದೈಹಿಕ, ಅಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಯುವಕರಿಗೆ ಕರೆ ನೀಡಿದ್ದರು. ಇಂದು ವಿವೇಕವಾಣಿಯ ಒಂದಿಷ್ಟು ಅಂಶ ನಮ್ಮ ಯುವ ಪೀಳಿಗೆಯ ತಲೆ ಒಳಗೆ ಹೊಕ್ಕರೆ, ಭಾರತೀಯ ಸಂಸ್ಕೃತಿಯ ಉಳಿಸಿ, ಬೆಳಸಲು ಸಾಧ್ಯವಾಗುತ್ತದೆ.

1985ರ ನಂತರ ಭಾರತದಲ್ಲಿ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬವನ್ನು "ರಾಷ್ಟ್ರೀಯ ಯುವ ದಿನ" ಎಂದು ಘೋಷಿಸಲಾಗಿದ್ದು, ಈಗಲೂ ಆಚರಣೆಯಲ್ಲಿದೆ ಎಂಬುದಷ್ಟೇ ಸಂತೋಷ. ಇಂದು ದೇಶದಾದ್ಯಂತ ಆಚರಣೆ ಜಾರಿಯಲ್ಲಿದ್ದು, ಶಾಲಾ, ಕಾಲೇಜು ಅಲ್ಲಲ್ಲಿ ಮೆರವಣಿಗೆ, ಪ್ರಬಂಧ ಸ್ಪರ್ಧೆ, ಭಾಷಣ, ಚರ್ಚಾಕೂಟದಲ್ಲಿ ಪಾಲ್ಗೊಂಡು ವಿವೇಕಾನಂದರರ ಸಂದೇಶ ಸಾರುವಲ್ಲಿ ತೊಡಗಿದ್ದಾರೆ.

ಸ್ವಾಮಿ ವಿವೇಕಾನಂದರು ತಮ್ಮ ಶಕ್ತಿಯುತ ವ್ಯಕ್ತಿತ್ವದ ಮೂಲಕ, ಅಪೂರ್ವ ವಾಗ್ಮೀಯತೆ ಹಾಗೂ ಪ್ರಚೋದನಾತ್ಮಕ ಬರವಣಿಗೆ ಮೂಲಕ ನಮ್ಮ ರಾಷ್ಟ್ರ ಚೇತವನ್ನು ಜಾಗೃತಗೊಳಿಸಿ, ಯುವಕರಲ್ಲಿ ನವೋತ್ಸಾಹವನ್ನು ಕೆರಳಿಸಿ, ಅವರಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಹೆಮ್ಮೆಯನ್ನು ಕುದುರಿಸಿ ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದರು.

ಸ್ವಾಮಿ ವಿವೇಕಾನಂದರ ಅಯ್ದ ನುಡಿ ಮುತ್ತುಗಳು :

* ಇದೊಂದು ದೊಡ್ಡ ಸತ್ಯ; ಶಕ್ತಿಯೇ ಜೀವನ, ದುರ್ಬಲತೆಯೇ ಮರಣ; ಶಕ್ತಿಯೇ ಪರಮಾನಂದ, ಅಖಂಡಜೀವನ, ಅಮರತ್ವ. ದುರ್ಬಲತೆಯೇ ಅನವರತ ದುಃಖ, ತಳಮಳ, ದುರ್ಬಲತೆಯೇ ಮರಣ.
* ನೀವು ಯಾವುದೇ ಕೆಲಸವನ್ನು ಮಾಡುವಾಗಲೂ ನಿಮ್ಮ ಮನಸ್ಸು ಹೃದಯ, ನಿಮ್ಮ ಸರ್ವಸ್ವವನ್ನೂ ಆಕೆಲಸಕ್ಕೆ ಕೊಡಿ. ನಾನೊಮ್ಮೆ ಒಬ್ಬ ಸಾಧು ಮಹಾತ್ಮನನ್ನು ನೋಡಿದ್ದೆ. ಆತ ಪೂಜೆ, ಧ್ಯಾನಗಳನ್ನು ಎಷ್ಟು ಏಕಾಗ್ರತೆ ಶ್ರದ್ಧೆಗಳಿಂದ ಮಾಡುತ್ತಿದ್ದನೋ ಅಷ್ಟೇ ಸಾವಧಾನದಿಂದ ತನ್ನ ಆಡುಗೆ ಮಾಡುವ ಹಿತ್ತಾಳೆ ಪಾತ್ರೆಗಳನ್ನು ಫಳ ಫಳನೆಹೊಳೆಯುವ ಚಿನ್ನದಂತೆ ತೊಳೆದಿಡುತ್ತಿದ್ದನು.
* ಶಿಕ್ಷಣವೆಂದರೆ ಮೊದಲೇ ಮನುಷ್ಯನಲ್ಲಿ ಇರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು.
* ವಿಕಾಸವೇ ಜೀವನ;ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ,ಸ್ವಾರ್ಥವೆಲ್ಲಾ ಸಂಕೋಚ. ಆದ್ದರಿಂದ ಪ್ರೇಮವೇ ಬದುಕಿನ ಧರ್ಮ.
* ಭಾರತೀಯರಲ್ಲಿ ದೊಡ್ಡದೊಂದು ದೋಷವಿದೆ.ನಾವು ಒಂದು ಸ್ಥಿರವಾದ ಸಂಸ್ಥೆಯನ್ನು ಕಟ್ಟಲಾರೆವು. ಕಾರಣವೇನೆಂದರೆ ಅಧಿಕಾರವನ್ನು ಇತರರೊಂದಿಗೆ ಹಂಚಿಕೊಳ್ಳುವುದು ನಮಗೆ ಇಷ್ಟವಿಲ್ಲ. ನಾವು ಕಾಲವಾದ ಮೇಲೆ ಇದರ ಗತಿ ಏನೆಂಬುದನ್ನು ಕುರಿತು ಚಿಂತಿಸುವುದೇ ಇಲ್ಲ.
* ಎದ್ದೇಳಿ, ಕಾರ್ಯೋನ್ಮುಕರಾಗಿ ಈ ಬದುಕಾದರು ಎಷ್ಟು ದಿನ ಮಾನವರಾಗಿ ಹುಟ್ಟಿದಮೇಲೆ ಏನಾದರು ಸಾಧಿಸಿ
* ಈ ಜಗತ್ತೆನ್ನುವುದು ನಮ್ಮನ್ನು ನಾವು ಗಟ್ಟಿಗೊಳಸಲೆಂದೇ ಇರುವ ವ್ಯಾಯಾಮಶಾಲೆ.
* ಮೊಹಮ್ಮದ್ ಅಗಲಿ ಬುದ್ಧ ನಾಗಲಿ ಒಳ್ಳೆಯ ಮನುಷ್ಯನಾಗಿದ್ದರಿಂದ ನನಗಾಗ ಬೇಕಾದುದೇನು? ಅದು ನನ್ನ ಒಳ್ಳೆಯ ಅಥವಾ ಕೆಟ್ಟ ತನವನ್ನು ಬದಲಾಯಿಸುತ್ತದೆಯೇ? ನಾವು ನಮಗೋಸ್ಕರವಾಗಿಯೇ ಒಳ್ಳೆಯವರಾಗುವ ಜವಾಬ್ದಾರಿಯನ್ನು ತೆಗೆದುಕೊಳ್ಳೋಣ. ಯಾರೋ ಯಾವಾಗಲೋ ಹಿಂದೆ ಒಳ್ಳೆಯವರಾಗಿದ್ದರು ಎಂಬ ಕಾರಣಕ್ಕಲ್ಲ'.

ಏಳಿ! ಎದ್ದೇಳಿ !! ಗುರಿ ಮುಟ್ಟುವ ತನಕ ನಿಲ್ಲದಿರಿ' ವಿಶ್ವದ ಅನೇಕ ಮಂದಿ ಇಂದು ಭಾರತ ಸಂಸ್ಕೃತಿ, ಹಿಂದೂ ಪರಂಪರೆಯ ಬಗ್ಗೆ ಗೌರವದಿಂದ ಕಾಣಲು ಹಾಗೂ ಅದರ ಬಗ್ಗೆ ಅಧ್ಯಯನ ಮಾಡಲು ಮುಂದಾಗುತ್ತಿರುವುದಕ್ಕೆ ಕಾರಣ ಕೂಡ ಅದೇ ವಿವೇಕವಾಣಿ!

English summary
Swami Vivekananda's birthday is being celebrated as National Youth Day across the country from 1985. But present day youths are not following his values and teachings. Now a days Youth day is limited to schools and college celebrations. But Vivekavani-Swamiji's preaching and sayings are motivation to many around the globe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X