ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಓಣಂ ದಿನ ಪ್ರಜೆಗಳ ನೋಡಲು ಬಲಿ ಬರ್ತ್ತಾನೆ

By ಬಿ.ಎಂ. ಲವಕುಮಾರ್, ಮೈಸೂರು
|
Google Oneindia Kannada News

ಇದೇ ಸಂದರ್ಭಕ್ಕಾಗಿ ಕಾಯುತ್ತಿದ್ದ ವಾಮನ ರೂಪದಲ್ಲಿದ್ದ ವಿಷ್ಣು ಇದ್ದಕ್ಕಿದ್ದಂತೆ ತ್ರಿವಿಕ್ರಮನಾಗಿ ಆಕಾಶಕ್ಕೆತ್ತರ ಬೆಳೆಯುತ್ತಾನೆ. ಅಲ್ಲದೆ ಒಂದು ಪಾದದಿಂದ ಭೂಮಿಯನ್ನು ಇನ್ನೊಂದು ಪಾದದಿಂದ ಆಕಾಶವನ್ನು ಅಳೆದು ಇನ್ನೊಂದು ಪಾದವನ್ನು ಎಲ್ಲಿ ಇಡಲಿ ಎಂದು ಕೇಳುತ್ತಾನೆ. ಮಹಾದಾನಿಯಾಗಿದ್ದ ಬಲಿ ಚಕ್ರವರ್ತಿ ಮಾತಿಗೆ ತಪ್ಪದೆ ತನ್ನ ಶಿರವನ್ನು ತೋರಿಸುತ್ತಾನೆ. ಅದರಂತೆ ವಾಮನ ಅವತಾರದಲ್ಲಿದ್ದ ವಿಷ್ಣು ಆತನ ತಲೆ ಮೇಲೆ ಪಾದವನ್ನಿಡುತ್ತಿದ್ದಂತೆಯೇ ಬಲಿಚಕ್ರವರ್ತಿ ಪಾತಾಳ ಸೇರುತ್ತಾನೆ. ಆದರೆ ಪಾತಾಳ ಸೇರುವ ಮೊದಲು ವರ್ಷಕ್ಕೊಮ್ಮೆ ಪ್ರಜೆಗಳನ್ನು ನೋಡಲು ಅನುಮತಿಯನ್ನು ಕೋರುತ್ತಾನೆ. ಅದಕ್ಕೆ ವಿಷ್ಣು ಒಪ್ಪಿಗೆ ನೀಡುತ್ತಾನೆ. ಅದರಂತೆ ಇಂದಿಗೂ ತಿರುವೋಣಂ ದಿನ ಬಲಿಚಕ್ರವರ್ತಿ ಪ್ರಜೆಗಳನ್ನು ನೋಡಲು ಬರುತ್ತಾನೆ ಎಂಬ ನಂಬಿಕೆ ಕೇರಳಿಗರದ್ದಾಗಿದೆ. ಹಾಗಾಗಿ ಮನೆ ಮುಂದಿನ ಅಂಗಳದಲ್ಲಿ ಹೂವಿನ ರಂಗೋಲಿ ಹಾಕಿ ಮಧ್ಯೆ ದೀಪವನ್ನಿಟ್ಟು ವಿವಿಧ ಭಕ್ಷ್ಯ ಭೋಜನಗಳನ್ನು ತಯಾರಿಸಿ ಬಲಿ ಚಕ್ರವರ್ತಿಗಾಗಿ ಕಾಯುವುದು ಇಂದಿಗೂ ರೂಢಿಯಲ್ಲಿದೆ.

Onam festival 2011 | Onam celebration in Karnataka

ಹಬ್ಬದ ದಿನದಂದು ಮುಂಜಾನೆ ಎದ್ದು ಸ್ನಾನ ಮಾಡಿ ಹೊಸಬಟ್ಟೆ ಧರಿಸಿ ದೇವಸ್ಥಾನಕ್ಕೆ ಹೋಗಿ ಬರುತ್ತಾರೆ. ಮಹಿಳೆಯರು ಶ್ವೇತ ವಸ್ತ್ರಧರಿಸಿ ಹೂವಿನ ರಂಗೋಲಿ ಹಾಕಿ ಮಧ್ಯೆ ಹಣತೆ ಬೆಳಗಿ ಪ್ರಾರ್ಥಿಸುತ್ತಾರೆ. ಮಧ್ಯಾಹ್ನ ಕುಟುಂಬದವರೆಲ್ಲಾ ಒಂದೆಡೆ ಕುಳಿತು ಭೋಜನ ಮಾಡುತ್ತಾರಲ್ಲದೆ, ಗೆಳೆಯರು, ಗೆಳತಿಯರು, ಸಂಬಂಧಿಕರು ಹೀಗೆ ಒಟ್ಟಾಗಿ ಕಲೆತು ಸುಖ ದುಃಖಗಳನ್ನು ಹಂಚಿಕೊಳ್ಳುತ್ತಾರೆ. ಹಾಗೆಂದು ಓಣಂ ಹಬ್ಬ ಹೊಸ ಬಟ್ಟೆ ತೊಟ್ಟು ಹೂವಿನ ರಂಗೋಲಿಯಿಟ್ಟು ಬಲಿಯನ್ನು ಸ್ವಾಗತಿಸಿ ಭೋಜನ ಮಾಡುವುದರಲ್ಲಿ ಕಳೆದು ಹೋಗುವುದಿಲ್ಲ. ಹಬ್ಬದ ಸಂದರ್ಭ ಮನಕ್ಕೊಂದು ರಂಜನೆ ಬೇಡವೇ? ಅದಕ್ಕೆಂದೇ ಊರಿನ ಮೈದಾನದಲ್ಲಿ ಗಂಡಸರಿಗೆ ಕುಟ್ಟಿದೊಣ್ಣೆ, ಗಿಳಿಯಾಟ, ಚೆಂಪಾಟ್, ಕರಡಿಯಾಟ ಮುಂತಾದ ಆಟಗಳು ನಡೆದರೆ, ಮಕ್ಕಳು ಕುಮ್ಮಿ ಕೋಲಾಟ, ತುಂಬಿ ತುಳ್ಳಲ್, ತಿರುವಾದಿರ ಕಳಿ ಮುಂತಾದವುಗಳನ್ನು ಆಡುತ್ತಾರೆ. ಮಹಿಳೆಯರು ಉಯ್ಯಾಲೆ ಆಟದೊಂದಿಗೆ ಮನರಂಜನೆ ಪಡೆಯುತ್ತಾರೆ. ಇದೇ ಸಂದರ್ಭ ಜಲೋತ್ಸವ(ವಳ್ಳಂಕಳಿ)ವೂ ನಡೆಯುತ್ತದೆ.

Onam festival 2011 | Onam celebration in Karnataka

ಪ್ರತಿ ಊರಿನಲ್ಲಿ ಬಡವ-ಬಲ್ಲಿದ ಎನ್ನದೆ ಎಲ್ಲರೂ ಒಂದೆಡೆ ಕಲೆತು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಹಬ್ಬದ ಮತ್ತೊಂದು ವಿಶೇಷತೆಯಾಗಿದೆ. ಕೇರಳದಿಂದ ಹೊರ ಹೋಗಿ ನೆಲೆಸಿರುವ ಕೇರಳಿಯರು ಓಣಂ ದಿನದಂದು ಒಂದೆಡೆ ಬೆರೆತು ಸಾಮೂಹಿಕವಾಗಿ ಹಬ್ಬವನ್ನು ಆಚರಿಸುವ ಪರಿಪಾಠ ಇತ್ತೀಚೆಗೆ ಬೆಳೆದು ಬಂದಿದೆ. ಈ ಸಂದರ್ಭ ಮಹಿಳೆಯರಿಗೆ ಹೂವಿನ ರಂಗೋಲಿ ಹಾಕುವುದು ಸೇರಿಂತೆ ಕಿರಿಯರಿಗೆ ಹಾಗೂ ಹಿರಿಯರಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಮುಂದುವರೆದ ಇಂದಿನ ದಿನದಲ್ಲಿ ಓಣಂ ಹಬ್ಬದ ಆಚರಣೆಗಳಲ್ಲಿ ಒಂದಷ್ಟು ಬದಲಾವಣೆಗಳಾಗಿರಬಹುದು. ಆದರೆ ಹಬ್ಬದ ಸಂಭ್ರಮ ಮಾತ್ರ ಕಳೆಗುಂದಿಲ್ಲ ಹಾಗಾಗಿ ಇದು ಹೊನ್ನಿನ ಹಬ್ಬವಾಗಿ ಮುಂದುವರೆಯುತ್ತಿದೆ.
English summary
Onam is the biggest festival in Kerala. Keralites believe that emperor Bali chakravarti comes to meet the people. On this occasion relatives get together, prepare delicious food. Decorating the rangoli with flower petals is the highlight of the festival.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X