ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

18 ಪೇಟೆಯ ದೇವಳದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

By ಮಂಜು ನಿರೇಶ್ವಾಲ್ಯ
|
Google Oneindia Kannada News

ಮಂಗಳೂರು, ಆಗಸ್ಟ್ 15: ತುಳುನಾಡಿನಲ್ಲಿ ಹಿಂದಿನಿಂದಲೂ ನಾಗದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಬುಧವಾರ ನಾಗರಪಂಚಮಿ ಪ್ರಯುಕ್ತ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಗೆ ಗರುಡಪಂಚಮಿ ಮತ್ತು ನಾಗರ ಪಂಚಮಿ ಎಂದು ಹೆಸರಿದೆ. ನಾಗರ ಪಂಚಮಿಯಂದು ಅಕ್ಕಿ, ತೆಂಗಿನಕಾಯಿ ಇಟ್ಟು ನಾಗರ ಕಲ್ಲಿಗೆ ಪಂಚಾಮೃತ ಅಭಿಷೇಕ ಮಾಡಿ ಆರಾಧಿಸುವ ಸಂಪ್ರದಾಯವಿದೆ.

ನಾಗರ ಪಂಚಮಿ ಆರಾಧನೆ ಹಿನ್ನೆಲೆ, ವಿಶೇಷ ಹಾಗೂ ಪೂಜಾ ಕ್ರಮದ ಮಾಹಿತಿ ನಾಗರ ಪಂಚಮಿ ಆರಾಧನೆ ಹಿನ್ನೆಲೆ, ವಿಶೇಷ ಹಾಗೂ ಪೂಜಾ ಕ್ರಮದ ಮಾಹಿತಿ

ಮಂಜೇಶ್ವರದಲ್ಲಿ ನಾಗಪಂಚಮಿಯಂದು ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾ ಭಕ್ತಿಯಿಂದ ದೇವರಿಗೆ ಪೂಜೆ ಸಲ್ಲಿಸಿದರು. ಬುಧವಾರ ಬೆಳಗ್ಗೆಯಿಂದ ಸುರಿಯುತ್ತಿದ್ದ ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಮಂಜೇಶ್ವರದ ಅನಂತೇಶ್ವರ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಆವರಣದಲ್ಲಿರುವ ನಾಗರಕಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿದರು.

Nagara Panchami traditionally celebrated in Manjeshwara

ಬುಧವಾರ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿ ಪಡೆದಿರುವ ಅನಂತೇಶ್ವರ ದೇವಾಲಯಕ್ಕೆ ನಾಗರ ಪಂಚಮಿಯಂದು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ನಾಗರ ಪಂಚಮಿ ವಿಶೇಷ: ನಾಗಾರಾಧನೆಯಿಂದ ಸಂತತಿ ವೃದ್ಧಿ, ಮನೋ ನಿಯಂತ್ರಣ ನಾಗರ ಪಂಚಮಿ ವಿಶೇಷ: ನಾಗಾರಾಧನೆಯಿಂದ ಸಂತತಿ ವೃದ್ಧಿ, ಮನೋ ನಿಯಂತ್ರಣ

ಕಾಸರಗೋಡಿನಲ್ಲಿ ಇಂದು ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿಯುತ್ತಿತ್ತು. ಅದನ್ನು ಲೆಕ್ಕಿಸದೆ ದೇವಾಲಯಕ್ಕೆ ಆಗಮಿಸಿದ ಭಕ್ತರು ನಾಗರ ಕಲ್ಲಿಗೆ ಪಂಚಾಮೃತ ಮತ್ತು ಕ್ಷೀರಾಭಿಷೇಕ ಮಾಡಿದರು.

ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

English summary
Nagara Panchami traditionally celebrated in Manjeshwara, Kasaragodu district of Kerala. Thousands of people gathered from different places of Dakshina Kannada, Udupi, Kodagu district and part of Bengaluru, Chennai and Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X