ಶಿಕ್ಷಕರ ದಿನ: ಗುರುನಮನ ಸಲ್ಲಿಸಿದ ಟ್ವಿಟ್ಟಿಗರು
ಆಚಾರ್ಯ ದೇವೋ ಭವ ಎಂಬ ಸಂಸ್ಕೃತಿ ನಮ್ಮದು. ಹೆತ್ತ ತಾಯಿ, ಬದುಕು ಕಲಿಸಿದ ತಂದೆ ಮತ್ತು ಸಂಸ್ಕಾರ ನೀಡಿದ ಗುರು ಮೂವರನ್ನೂ ಪೂಜನೀಯ ಸ್ಥಾನದಲ್ಲಿಟ್ಟು ಗೌರವಿಸುವುದು ಭಾರತೀಯ ಸಂಸ್ಕೃತಿಯ ಹೆಗ್ಗಳಿಕೆಯೂ ಹೌದು.
ಅಸಂಖ್ಯ ಮಕ್ಕಳ ಭವಿಷ್ಯ ರೂಪಿಸಿ, ಆ ಮೂಲಕ ರಾಷ್ಟ್ರಕ್ಕೆ ಕೊಡುಗೆ ನೀಡಿದ ಶಿಕ್ಷರ ನೆನಕೆಗಾಗಿ ಸೆಪ್ಟೆಂಬರ್ 5 ಅನ್ನು ಭಾರತದಾದ್ಯಂತ ರಾಷ್ಟ್ರೀಯ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.
ಭಾರತದ ಮೊದಲ ಉಪರಾಷ್ಟ್ರಪತಿಯಾಗಿಯೂ, ಎರಡನೇ ರಾಷ್ಟ್ರಪತಿಯಾಗಿಯೂ ಕಾರ್ಯನಿರ್ವಹಿಸಿದ ಮಹಾನ್ ಶಿಕ್ಷಕ ಡಾ.ಸರ್ವಪಳ್ಳಿ ರಾಧಾಕೃಷ್ಣನ್ (5 ಸೆಪ್ಟೆಂಬರ್ 1888 - 17 ಏಪ್ರಿಲ್ 1975)ಅವರ ಗೌರವಾರ್ಥವಾಗಿ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವ ಮೂಲಕ ಸಮಸ್ತ ಗುರುವೃಂದಕ್ಕೆ ನಮನ ಸಲ್ಲಿಸಲಾಗುತ್ತದೆ.
ಸರ್ವಪಳ್ಳಿ ರಾಧಾಕೃಷ್ಣನ್ ಸೆಪ್ಟೆಂಬರ್ 5, 1888 ರಲ್ಲಿ ತಮಿಳುನಾಡು-ಆಂಧ್ರಪ್ರದೇಶ ಗಡಿಯ ತಿರುತ್ತಣಿ ಎಂಬಲ್ಲಿ ಜನಿಸಿದರು. ತಂದೆ ಸರ್ವಪಳ್ಳಿ ವೀರಸ್ವಾಮಿ ಮತ್ತು ತಾಯಿ ಸೀತಮ್ಮ. 16 ನೇ ವಯಸ್ಸಿನಲ್ಲಿ ಶಿವಕಮು ಎಂಬುವವರನ್ನು ಮದುವೆಯಾದ ರಾಧಾಕೃಷ್ಣನ್ ಅವರಿಗೆ ಆರು ಮಕ್ಕಳಿದ್ದರು.
ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡ ರಾಧಾಕೃಷ್ಣನ್ ಅವರ ಶಿಷ್ಯವೃಂದವೂ ಅಪಾರವಾಗಿತ್ತು. ಆಂಧ್ರ ವಿಶ್ವವಿದ್ಯಾಲಯ ಮತ್ತು ಬನಾರಸ್ ಹಿಂದು ವಿವಿಯ ಉಪಕುಲಪತಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಯು ಇವರದು. ರಾಧಾಕೃಷ್ಣನ್ ಅವರ ಶಿಷ್ಯರು ತಮ್ಮ ಗುರುವಿನ ಜನ್ಮದಿನವಾದ ಸೆಪ್ಟೆಂಬರ್ 5 ನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲು ನಿರ್ಧರಿಸಿದರು.
ಈ ಕುರಿತು ರಾಧಾಕೃಷ್ಣನ್ ಅವರಲ್ಲಿ ಮನವಿಮಾಡಿಕೊಂಡಾಗ, ನನ್ನ ಜನ್ಮದಿನವನ್ನು ಆಚರಿಸುವ ಬದಲು ಆ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತೀರಾದರೆ ಅದಕ್ಕಿಂತ ದೊಡ್ಡ ಹೆಮ್ಮೆ ಇನ್ನೇನಿದೆ? ಎಂದು ಉತ್ತರಿಸಿದ್ದರು. ಅಂದಿನಿಂದಲೂ ಸೆ.5 ಶಿಕ್ಷಕರ ದಿನವಾಗಿ ಆಚರಣೆಗೊಳ್ಳುತ್ತಿದೆ.
ಟ್ವಿಟ್ಟರ್ ನಲ್ಲಿಯೂ ಇಂದು ಹಲವರು ಶಿಕ್ಷಕರ ದಿನದಂದು ತಮ್ಮ ನೆಚ್ಚಿನ ಶಿಕ್ಷಕರನ್ನು ನೆನಪಿಸಿಕೊಂಡು ಶುಭಹಾರೈಸಿದ್ದಾರೆ. ಸಮಸ್ತ ಗುರುವೃಂದಕ್ಕೂ ಶುಭಹಾರೈಸುತ್ತ ಆ ಟ್ವೀಟ್ ಗಳತ್ತ ಕಣ್ಣು ಹಾಯಿಸೋಣ.
|
ನರೇಂದ್ರ ಮೋದಿ
ಮಕ್ಕಳ ಮನಸ್ಸನ್ನು ತಿದ್ದುವ, ಪೋಷಿಸುವ ಮತ್ತು ಶಿಕ್ಷಣದ ಕಂಪನ್ನು ಸಮಾಜದಲ್ಲಿ ಹರಡುವುದಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಎಲ್ಲ ಶಿಕ್ಷಕ ಸಮುದಾಯಕ್ಕೂ ನನ್ನ ನಮನಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಇನ್ನೊಂದು ಟ್ವೀಟ್ ನಲ್ಲಿ ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನೂ ನೆನಪಿಸಿಕೊಂಡಿದ್ದಾರೆ.
|
ಶಿಕ್ಷಕರಿಗೆ ಅಭಿನಂದನೆ
ಮಾಜಿ ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣನ್ ರ ಸ್ಮರಣೆಯಲ್ಲಿ ಆಚರಿಸುವ ಶಿಕ್ಷಕರ ದಿನಾಚರಣೆಯಂದು ದೇಶ ಕಟ್ಟುವ ಕಾಯಕದಲ್ಲಿ ನಿರತರಾದ ಶಿಕ್ಷಕ ಸಮುದಾಯವನ್ನು ಅಭಿನಂದಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ದೇಶದ ಎಲ್ಲ ಶಿಕ್ಷಕ ವೃಂದಕ್ಕೂ ಶುಭ ಹಾರೈಕೆ
ಶಿಕ್ಷಕರ ದಿನದಂದು ಸರ್ವಪಳ್ಳಿ ರಾಧಾಕೃಷ್ಣನ್ ಅವರಿಗೆ ನನ್ನ ನಮನಗಳು. ಹಾಗೆಯೇ ನಮ್ಮ ರಾಷ್ಟದ ಎಲ್ಲ ಶಿಕ್ಷಕ ವೃಂದಕ್ಕೂ ನನ್ನ ಶುಭಹಾರೈಕೆಗಳು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದಾರೆ.
|
ನಮನಗಳು
ಯುವಮನಗಳನ್ನು ತಿದ್ದಲು ತಮ್ಮ ಬದುಕನ್ನು ಮುಡಿಪಾಗಿಟ್ಟ ಎಲ್ಲಾ ಶಿಕ್ಷಕರಿಗೂ ನಮನಗಳು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
|
ನಿಜವಾದ ಶಿಕ್ಷಕ ಹೃದಯದಿಂದ ಕಲಿಸುತ್ತಾನೆ
ಒಬ್ಬ ಮಹಾನ್ ಶಿಕ್ಷಕ ಹೃದಯದಿಂದ ಕಲಿಸುತ್ತಾನೆ, ಪುಸ್ತಕದಿಂದಲ್ಲ. ನನಗೆ ಕಲಿಸಿದ ಎಲ್ಲ ಶಿಕ್ಷಕಕರಿಗೂ ನಾನು ಸದಾ ಋಣಿ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications