Mysuru Dasara 2022 Live:ನಾಡಹಬ್ಬ ಸಂಭ್ರಮಕ್ಕೆ ಚಾಲನೆ
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸೋಮವಾರ ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ಸಿಗಲಿದೆ. ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸೋಮವಾರ ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶಿಕ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಮೂಲಕ ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆಯವರು ಬೆಟ್ಟದ ತುದಿಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ದಸರಾ ಮಹೋತ್ಸವದ ಪ್ರಯುಕ್ತ ನಗರದೆಲ್ಲೆಡೆ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ವಾಹನಗಳಲ್ಲಿ ಕಿಕ್ಕಿರಿದು ಬರುವುದರಿಂದ, ನಗರದ ಹೃದಯ ಭಾಗದಲ್ಲಿ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.

ಪ್ರವಾಸಿಗರಿಗೆ ದಸರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ನಗರದ ಎಂಟು ಕಡೆ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳು ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಬೆಳಗ್ಗೆ 9ರಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಇನ್ನು ರೈಲ್ವೇ ನಿಲ್ದಾಣ, ಅರಮನೆಯ ವರಾಹ ಗೇಟ್, ಕೆ. ಆರ್. ವೃತ್ತ, ಸೇಂಟ್ ಫಿಲೋಮಿನಾ ವೃತ್ತ, ಗ್ರಾಮಾಂತರ ಬಸ್ ನಿಲ್ದಾಣ, ಗಾಂಧಿ ಚೌಕ, ಮೃಗಾಲಯ, ದಸರಾವಸ್ತು ಪ್ರದರ್ಶನ ಆವರಣದಲ್ಲಿ ಸಹಾಯ ಕೇಂದ್ರಗಳು ಇರಲಿವೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಕ್ಕೆ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ಚಾಲನೆ. #MysuruDasara #Dasara2022 https://t.co/eN98pgJZUy
— CM of Karnataka (@CMofKarnataka) September 26, 2022
ದಸರಾ ಜಂಬೂ ಸವಾರಿಗೆ ಕಳೆ ಕಟ್ಟಲಿವೆ ಸ್ತಬ್ದ ಚಿತ್ರಗಳು
ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮೈಸೂರು ದಸರಾ ಭಾರತೀಯ ಸಂಸ್ಕೃತಿಯ ಗೌರವದ ಪ್ರತೀಕ
ಅದ್ದೂರಿಯಾಗಿ ದಸರಾ ಆಚರಣೆ; ಸಿಎಂ ಬೊಮ್ಮಾಯಿ
ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡಿ ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ

ಚಾಮುಂಡಿ ದೇವಿ ದರ್ಶನ ಪಡೆದ ರಾಷ್ಟ್ರಪತಿ
ಬುಡಕಟ್ಟು ಜನಾಂಗದಿಂದ ಸಾಂಪ್ರದಾಯಿಕ ನೃತ್ಯ

ಚಾಮುಂಡಿ ಬೆಟ್ಟದತ್ತ ಹೊರಟ ರಾಷ್ಟ್ರಪತಿ
ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
















Click it and Unblock the Notifications