Navratri 2024 Remedies: ನವರಾತ್ರಿ ವ್ರತ ಮಾಡುವವರು ಇದನ್ನು ಪಾಲಿಸಲೇಬೇಕು... ಇಲ್ಲವಾದಲ್ಲಿ ಅಪಾಯ..!
ಶಾರದೀಯ ನವರಾತ್ರಿ ಅಕ್ಟೋಬರ್ 3ರಿಂದ ಪ್ರಾರಂಭವಾಯಿತು. ನವರಾತ್ರಿ ಸಂದರ್ಭದಲ್ಲಿ ಒಂಬತ್ತು ದಿನಗಳ ಕಾಲ ದುರ್ಗಾ ಮಾತೆಯ ಒಂಬತ್ತು ಅವತಾರಗಳನ್ನು ಪೂಜಿಸಲಾಗುತ್ತದೆ. ಹೀಗಾಗಿ ಈ ಒಂಬತ್ತು ದಿನಗಳು ದುರ್ಗಾ ದೇವಿಗೆ ಮೀಸಲಾಗಿವೆ. ಈ ಸಮಯದಲ್ಲಿ ದುರ್ಗಾದೇವಿಯನ್ನು ಪೂಜಿಸುವುದರಿಂದ ಧೈರ್ಯ, ಬುದ್ಧಿವಂತಿಕೆ, ಶಕ್ತಿ ಮತ್ತು ಶೌರ್ಯ ಹೆಚ್ಚಾಗುತ್ತದೆ ಎಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ಪರಿಹಾರಗಳನ್ನು ಅನುಸರಿಸುವ ಮೂಲಕ, ಎಲ್ಲಾ ರೀತಿಯ ತೊಂದರೆಗಳಿಂದ ಪರಿಹಾರವನ್ನು ಪಡೆಯಬಹುದು ಎಂದು ಪಂಡಿತರು ಹೇಳುತ್ತಾರೆ. ಇದಲ್ಲದೆ ನವರಾತ್ರಿ ಸಂಪತ್ತನ್ನು ಹೆಚ್ಚಿಸಲು ವಿಶೇಷ ಸಮಯವೆಂದು ಪರಿಗಣಿಸಲಾಗಿದೆ. ಮಹಾಲಕ್ಷ್ಮಿಯು ದುರ್ಗಾದೇವಿಯ ರೂಪವೂ ಹೌದು. ಹೀಗಾಗಿ ಈ ದಿನಗಳಲ್ಲಿ ದುರ್ಗಾದೇವಿಯನ್ನು ಪೂಜಿಸುವುದರಿಂದ ಸಾಕಷ್ಟು ಅನುಕೂಲವಾಗಲಿದೆ. ಹಾಗಾದರೆ ನವರಾತ್ರಿಯಲ್ಲಿ ಲಕ್ಷ್ಮಿ ದೇವಿಯ ವಿಶೇಷ ಅನುಗ್ರಹವನ್ನು ಪಡೆಯಲು ಅನುಸರಿಸಬೇಕಾದ ಆಸಕ್ತಿದಾಯಕ ವಿಷಯಗಳನ್ನು ಈಗ ತಿಳಿದುಕೊಳ್ಳೋಣ...

ಲಕ್ಷ್ಮಿ ದೇವಿಯ ಕೃಪೆಗಾಗಿ..
ನವರಾತ್ರಿಯ ಸಮಯದಲ್ಲಿ ಲಕ್ಷ್ಮಿ ದೇವಿಯನ್ನು ಮೆಚ್ಚಿಸುವುದು ತುಂಬಾ ಸುಲಭ. ಭಕ್ತರು ಶ್ರದ್ಧೆ ಹಾಗೂ ಭಕ್ತಿಯಿಂದ ಲಕ್ಷ್ಮಿದೇವಿಯನ್ನು ನೆನೆದು ಪೂಜಿಸಿದರೆ ಇಷ್ಟಾರ್ಥಗಳಿಗೆ ಆಕೆ ಅಸ್ತು ಎಂದು ಆಶೀರ್ವದಿಸುತ್ತಾಳೆ ಎಂದು ಪುರಾಣಗಳು ಹೇಳುತ್ತವೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ನವರಾತ್ರಿಯಲ್ಲಿ ಬೆಳ್ಳಿ ನಾಣ್ಯವನ್ನು ಮನೆಗೆ ತರುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ರೀತಿ ಮಾಡುವುದರಿಂದ ಲಕ್ಷ್ಮಿ ದೇವಿಗೂ ಸಂತೋಷವಾಗುತ್ತದೆ. ನಿಮಗೆ ಯಾವುದೇ ಹಣಕಾಸಿನ ಸಮಸ್ಯೆ ಇರುವುದಿಲ್ಲ.
ತುಳಸಿ ಗಿಡ ನೆಡಬೇಕು..
ತುಳಸಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಅಲ್ಲದೆ ಧಾರ್ಮಿಕವಾಗಿ ಮಹತ್ವದ ಸ್ಥಾನ ಪಡೆದುಕೊಂಡಿದೆ. ತುಳಸಿಯನ್ನು ಪೂಜಿಸುವುದು ಲಕ್ಷ್ಮೀ ದೇವಿಯನ್ನು ಪೂಜಿಸಿದಷ್ಟೇ ಸಮವೆಂದು ಪರಿಗಣಿಸಲಾಗುತ್ತದೆ. ನಿಮ್ಮ ಮನೆಯಲ್ಲಿ ತುಳಸಿ ಗಿಡವಿಲ್ಲದಿದ್ದರೆ ನವರಾತ್ರಿಯ ಸಮಯದಲ್ಲಿ ನಿಮ್ಮ ಮನೆಯ ಆವರಣದಲ್ಲಿ ತುಳಸಿ ಗಿಡವನ್ನು ನೆಡಿ. ಈ ಮಂಗಳಕರ ದಿನಗಳಲ್ಲಿ ತುಳಸಿ ಗಿಡವನ್ನು ನೆಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದಲ್ಲದೆ, ತುಳಸಿ ಮರದ ಮುಂದೆ ದೀಪವನ್ನು ಬೆಳಗಿಸುವುದರಿಂದ, ದೇವಿಯ ವಿಶೇಷ ಆಶೀರ್ವಾದವು ದೊರೆಯುತ್ತದೆ ಮತ್ತು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯಿಂದ ಆಶೀರ್ವದಿಸುತ್ತದೆ ಎಂದು ಅನೇಕರು ನಂಬುತ್ತಾರೆ.

ಆರ್ಥಿಕ ಸಮಸ್ಯೆಗಳ ಪರಿಹಾರಕ್ಕಾಗಿ..
ಯಾರೇ ಆರ್ಥಿಕ ಸಮಸ್ಯೆ ಎದುರಿಸುತ್ತಿರಲಿ.. ನವರಾತ್ರಿಯ ಸಮಯದಲ್ಲಿ ಅಶೋಕ ವೃಕ್ಷದ ಅಂದರೆ ಆಲದ ಮರದ ಒಂದು ಚಿಕ್ಕ ಬೇರನ್ನು ತೆಗೆದುಕೊಂಡು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಅದನ್ನು ಭದ್ರಪಡಿಸುವ ಮೊದಲು, ಲಕ್ಷ್ಮಿ ದೇವಿಯನ್ನು ತೊಂದರೆಗಳಿಂದ ಮುಕ್ತಗೊಳಿಸಲು ಪ್ರಾರ್ಥಿಸಬೇಕು. ಹೀಗೆ ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.
ಕನಕಧಾರಾ ಸ್ತೋತ್ರವನ್ನು ಪಠಿಸಬೇಕು..
ವಿಜಯದಶಮಿಯ ಸಮಯದಲ್ಲಿ ಒಂಬತ್ತು ದಿನಗಳ ಕಾಲ ಬೆಳಿಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮತ್ತು ಸೂರ್ಯೋದಯದಲ್ಲಿ 11 ಬಾರಿ ಲಕ್ಷ್ಮಿ ಮತ್ತು ಶ್ರೀಸೂಕ್ತವನ್ನು ಪಠಿಸಿ. 108 ದಿನಗಳ ಕಾಲ ಹೀಗೆ ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.
ಅದೇ ರೀತಿ ಈ ಸಮಯದಲ್ಲಿ ಲಕ್ಷ್ಮಿ ದೇವಿಗೆ ಆರತಿಯನ್ನು ಅರ್ಪಿಸಬೇಕು. ಹಾಗೆಯೇ ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು, ಸಂಜೆ ಲಕ್ಷ್ಮಿ ದೇವಿಗೆ ಮನೆಯಲ್ಲೇ ಸಿಹಿಯನ್ನು ತಯಾರಿಸಿ ಅರ್ಪಿಸಬೇಕು. ನಂತರ ಕನಕಧಾರಾ ಸ್ತೋತ್ರವನ್ನು 9 ಬಾರಿ ಪಠಿಸಬೇಕು. ಹೀಗೆ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತವೆ.
ಆಳವಾದ ಪೂಜೆ..
ವಿಜಯದಶಮಿಯ ಹಬ್ಬದ ಒಂಬಂತ್ತು ದಿನಗಳಲ್ಲಿ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸಲು ನೀವು ಬಯಸಿದರೆ, ನಿಮ್ಮ ಮನೆಯ ಮೇಲೆ ಕೆಂಪು ಧ್ವಜವನ್ನು ಹಾರಿಸಿ. ಹಾಗೆಯೇ ಆಲದ ಮರದ ಮುಂದೆ ದೇಸಿ ತುಪ್ಪದ ದೀಪವನ್ನು ಹಚ್ಚಬೇಕು. ಹೀಗೆ ಮಾಡುವುದರಿಂದ ದುರ್ಗಾ ಮಾತೆಯ ವಿಶೇಷ ಆಶೀರ್ವಾದವನ್ನು ಪಡೆಯುವ ಮೂಲಕ, ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ.
ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತವೆ. ಅದೇ ರೀತಿ ಶುಕ್ರವಾರದಂದು ಕಮಲದ ಹೂವನ್ನು ತೆಗೆದುಕೊಂಡು ಅದನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಹಣವನ್ನು ಇಡುವ ಸುರಕ್ಷಿತ ಸ್ಥಳದಲ್ಲಿ ಇಡಬೇಕು. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ.
(ಗಮನಿಸಿ: ಇಲ್ಲಿ ಒದಗಿಸಲಾದ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ಒದಗಿಸುವುದು ಮಾತ್ರ ನಮ್ಮ ಏಕೈಕ ಉದ್ದೇಶ. ಯಾವುದೇ ಮಾಹಿತಿಯನ್ನು ಅನುಷ್ಠಾನಕ್ಕೆ ತರುವ ಮೊದಲು ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications