ಕನ್ನಡಿಗರ ಹುಟ್ಟಡಗಿಸುತ್ತೇವೆ ಎಂದ ಮುದಿಹುಲಿ

ಮುಂಬೈ ಮತ್ತು ಪೂಣೆದಲ್ಲಿ ಬಹಳಷ್ಟು ಮಂದಿ ಕನ್ನಡಿಗರಿದ್ದಾರೆನ್ನುವ ವಿಷಯವನ್ನು ನಾವು ಅರಿತಿದ್ದೇವೆ. ಈ ಎರಡೂ ನಗರಗಳಲ್ಲಿ ಹೋಟೆಲ್ ಉದ್ಯಮ ಬಹುಪಾಲು ನಡೆಸುತ್ತಿರುವುದು ಕನ್ನಡಿಗರು. ನಮ್ಮ ತಂಟೆಗೆ ಬಂದರೆ ನಿಮ್ಮ ಹುಟ್ಟಡಗಿಸಿಬಿಡುತ್ತೇವೆ, ಅಲ್ಲದೆ ನಿಮ್ಮನ್ನು ಕರ್ನಾಟಕಕ್ಕೇ ಓಡಿಸಿ ಬಿಡುತ್ತೇವೆ ಎಂದು ಕನ್ನಡಿಗರನ್ನು ಎಚ್ಚರಿಸಿದ್ದಾರೆ.
ಬೆಳಗಾವಿ ಮತ್ತು ಗಡಿ ಭಾಗದಲ್ಲಿ ನಮ್ಮವರ ಮೇಲೆ ನಿಮ್ಮ ಪುಂಡಾಟಿಕೆ ಮುಂದುವರಿಯುತ್ತಿದೆ. ನಾವೇನೂ ಅಶಕ್ತರಲ್ಲ, ನಮ್ಮವರ ರಕ್ಷಣೆಗೆ ಮರಾಠಿಗರೆಲ್ಲಾ ಒಂದಾಗುತ್ತೇವೆ. ಬೆಳಗಾವಿ ನಗರವನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಇಲ್ಲವಾದಲ್ಲಿ ಅದನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ ಎಂದು ಠಾಕ್ರೆ ತಮ್ಮ ಪಕ್ಷದ ಮುಖ ವಾಹಿನಿ ಸಾಮ್ನಾದಲ್ಲಿ ಹೇಳಿಕೆ ನೀಡಿದ್ದರು.
ಕಾರ್ಪೊರೇಟರ್ ಪತಿಗೆ ಮಸಿ : ಬೆಳಗಾವಿ ಮಹಾನಗರ ಪಾಲಿಕೆಯ ಅನುಮೋದನೆ ಮಂಡನೆ ವಿಚಾರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಬೆಂಬಲಿಸಲಿಲ್ಲ ಎನ್ನುವ ಕೋಪದಿಂದ ಎಂಇಎಸ್ ಸದಸ್ಯರು ಮತ್ತು ಅವರ ಪುಂಡಪೋಕರಿ ಸಹಚರರು ಮಹಿಳಾ ಕಾರ್ಪೊರೇಟರ್ ಅವರ ಮನೆಗೆ ನುಗ್ಗಿ ಅವರ ಮುಂದೆಯೇ ಅವರ ಪತಿಗೆ ಮಸಿ ಬಳಿದು ಅವಮಾನ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತಮ್ಮ ಶಕ್ತಿ ಕುಂದುತ್ತಿದೆ ಎಂದು ಅರಿತ ಎಂಇಎಸ್ ಮರಾಠಿಗರನ್ನು ಕನ್ನಡಿಗರ ಮೇಲೆ ಎತ್ತಿ ಕಟ್ಟುವ ಕೆಲಸಕ್ಕೆ ಕೈ ಹಾಕುತ್ತಿದೆ. ತಮ್ಮ ಬೇಳೆ ಬೇಯುತ್ತಿಲ್ಲ ಎಂದು ಇಲ್ಲಸಲ್ಲದ ಕಿರಿಕಿರಿ ನಡೆಸುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಘಟಕದ ಅಧ್ಯಕ್ಷರು ಈ ಸಂದರ್ಭದಲ್ಲಿ ಹೇಳಿಕೆ ನೀಡಿ ಎಂಇಎಸ್ ಗೆ ಸಡ್ಡು ನೀಡಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications