ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ಗಣ್ಯರ ಶುಭಾಶಯ

|
Google Oneindia Kannada News

ಕರ್ನಾಟಕ, ನವೆಂಬರ್ 1: 66ನೇ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಸರಳ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ.

ಕೋವಿಡ್ ನಿಯಮದಂತೆ ಸಾಮಾಜಿಕ ಅಂತರ ಕಾಪಾಡಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. 9 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ಮಾಡದ್ದಾರೆ.

ಕನ್ನಡ ರಾಜ್ಯೋತ್ಸವ ಎಂದರೆ ಇಡೀ ವಿಶ್ವದಲ್ಲಿರುವ ಎಲ್ಲ ಕನ್ನಡಿಗರಿಗೂ ಒಂದು ರೀತಿ ಸಂಭ್ರಮ ಮತ್ತು ಹೆಮ್ಮೆ. ಕರ್ನಾಟಕ ರಾಜ್ಯ ಉದಯಿಸಿ ಇಂದಿಗೆ 66 ವರ್ಷ. ಈ ಸಂಭ್ರಮಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ ಮೋದಿ ಕನ್ನಡದಲ್ಲೇ ಶುಭಾಶಯ ತಿಳಿಸಿದ್ದಾರೆ.

 ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ

ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ

"ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ'' ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದು, ಕನ್ನಡಿಗರ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದ್ದಾರೆ.

 ಸಿಎಂ ಬಸವರಾಜ ಬೊಮ್ಮಾಯಿ ಶುಭಾಶಯ

ಸಿಎಂ ಬಸವರಾಜ ಬೊಮ್ಮಾಯಿ ಶುಭಾಶಯ

ಸಮಸ್ತ ಕನ್ನಡಿಗರಿಗೆ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡು-ನುಡಿ ರಕ್ಷಣೆಯ ಜೊತೆಗೆ ಸಮೃದ್ಧ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.

ಇದೇ ವೇಳೆ #ಕರ್ನಾಟಕರಾಜ್ಯೋತ್ಸವ ಶುಭ ಸಂದರ್ಭದಲ್ಲಿ ಕನ್ನಡಿಗರಿಗೆ ಕನ್ನಡದಲ್ಲಿ ಶುಭಕೋರಿ, ಕರ್ನಾಟಕದ ಉನ್ನತಿಯ ತುಡಿತವನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ಮುಂಬರುವ ದಿನಗಳಲ್ಲಿ ಕರ್ನಾಟಕವು ಅಭಿವೃದ್ಧಿಯ ಪಥದಲ್ಲಿ ಶರವೇಗದಲ್ಲಿ ಸಾಗಲಿದೆ; ಎಂದು ವಾಗ್ದಾನ ಮಾಡುತ್ತೇನೆ ಎಂದು ಪ್ರಧಾನಿ ಶುಭಾಶಯಕ್ಕೆ ಪ್ರತಿಕ್ರಿಯಿಸಿದ್ದಾರೆ.

 ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶುಭಾಶಯ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶುಭಾಶಯ

ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ.

1500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು- ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ.

ಕನ್ನಡಿಗರ ಮನೆ- ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ.

ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 ಮಾಜಿ ಸಿಎಂ ಸಿದ್ದರಾಮಯ್ಯ ಶುಭಾಶಯ

ಮಾಜಿ ಸಿಎಂ ಸಿದ್ದರಾಮಯ್ಯ ಶುಭಾಶಯ

ಕನ್ನಡ, ಕನ್ನಡಿಗ ಮತ್ತು ಕರ್ನಾಟಕವನ್ನು ಒಳಗೊಂಡ ಒಟ್ಟು ಕನ್ನಡತನದ ಬದುಕು ಹಸನಾಗಿಸುವ ಗುರಿ ನಮ್ಮದಾಗಿರಲಿ. ಕನ್ನಡವನ್ನು ಉಳಿಸೋಣ, ಬೆಳೆಸೋಣ. ರಾಜ್ಯದ ಸಮಸ್ತ ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
Prime Minister Narendra Modi took social media to extend warm greetings for Kannadiga on November to wish 66th Kannada Rajyotsava.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X