Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್‌ಗೆ GBA ಆದೇಶ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮಾರ್ಚ್ 27 ರ ಶುಕ್ರವಾರದಂದು "ಶ್ರೀರಾಮ ನವಮಿ ಹಬ್ಬ"ದ ಪ್ರಯುಕ್ತ ನಗರದಲ್ಲಿರುವ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ರವರು ತಿಳಿಸಿದ್ದಾರೆ.

ಮಾರ್ಚ್ 27ರ ಶುಕ್ರವಾರದಂದು ನಾಡಿನೆಲ್ಲೆಡೆ ಶ್ರೀರಾಮ ನವಮಿಯನ್ನು ಅತ್ಯಂತ ಭಕ್ತಿ-ಭಾವದಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನದ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಮಾಂಸ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Ram Navami

ನಾಗರಿಕರ ಸಮಸ್ಯೆ ಆಲಿಸಲು 'ಫೋನ್-ಇನ್' ಕಾರ್ಯಕ್ರಮ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮೂಲಸೌಕರ್ಯ ಸಮಸ್ಯೆಗಳಿಗೆ ಮುಕ್ತಿ ನೀಡಲು ಬೆಂಗಳೂರು ಉತ್ತರ ನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ. ನಾಗರಿಕರ ಅಹವಾಲುಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಪ್ರತೀ ಶುಕ್ರವಾರ 'ಫೋನ್-ಇನ್' ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಅದರಂತೆ, ಈ ವಾರದ ಕಾರ್ಯಕ್ರಮವು ಮಾರ್ಚ್ 27ರ ಶುಕ್ರವಾರದಂದು ಮುಂಜಾನೆ 7.00 ಗಂಟೆಯಿಂದ 9.00 ಗಂಟೆಯವರೆಗೆ ನಡೆಯಲಿದೆ. ಸಾರ್ವಜನಿಕರು ಮನೆಯಲ್ಲೇ ಕುಳಿತು ತಮ್ಮ ಬಡಾವಣೆಯ ಸ'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. ಮಸ್ಯೆಗಳನ್ನು ನೇರವಾಗಿ ಆಯುಕ್ತರ ಗಮನಕ್ಕೆ ತರಬಹುದಾಗಿದೆ.

ಯಾವೆಲ್ಲಾ ಸಮಸ್ಯೆಗಳ ಬಗ್ಗೆ ದೂರು ನೀಡಬಹುದು?

ಈ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ವಾರ್ಡ್‌ಗಳಲ್ಲಿನ ರಸ್ತೆ ಗುಂಡಿಗಳ ಸಮಸ್ಯೆ, ಹಾಳಾದ ಬೀದಿ ದೀಪಗಳ ದುರಸ್ತಿ, ಮನೆಮನೆ ಕಸ ಸಂಗ್ರಹಣೆ ಮತ್ತು ವಿಲೇವಾರಿಯಲ್ಲಿನ ವ್ಯತ್ಯಯ, ಅಪಾಯಕಾರಿಯಾಗಿ ಕಾಣುತ್ತಿರುವ ಮರಗಳು ಹಾಗೂ ಕೊಂಬೆಗಳ ತೆರವು ಕಾರ್ಯಾಚರಣೆಯ ಬಗ್ಗೆ ದೂರು ನೀಡಬಹುದು. ಜೊತೆಗೆ, ಸೊಳ್ಳೆ ಕಾಟ, ಬೀದಿ ನಾಯಿಗಳ ಹಾವಳಿ, ಉದ್ಯಾನವನಗಳ ಅಭಿವೃದ್ಧಿ ಮತ್ತು ಸಂರಕ್ಷಣೆ, ರಸ್ತೆ ಬದಿಯ ಅನಧಿಕೃತ ಬ್ಯಾನರ್ ಮತ್ತು ಪೋಸ್ಟರ್‌ಗಳ ಹಾವಳಿ, ಪಾದಚಾರಿ ಮಾರ್ಗಗಳ ಒತ್ತುವರಿ ನಿವಾರಣೆ ಹಾಗೂ ಇತ್ತೀಚೆಗೆ ಜನರನ್ನು ಹೆಚ್ಚು ಕಾಡುತ್ತಿರುವ ಇ-ಖಾತಾ (e-Khata) ಸಂಬಂಧಿತ ಗೊಂದಲಗಳ ಕುರಿತು ಆಯುಕ್ತರೊಂದಿಗೆ ನೇರವಾಗಿ ಮುಕ್ತವಾಗಿ ಚರ್ಚಿಸಬಹುದಾಗಿದೆ.

ದೂರುಗಳ ವಿಲೇವಾರಿ ಹೇಗೆ?

ಫೋನ್-ಇನ್ ಕಾರ್ಯಕ್ರಮದ ಮೂಲಕ ಸ್ವೀಕರಿಸಲಾದ ಪ್ರತಿಯೊಂದು ದೂರನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಈ ಎಲ್ಲಾ ಅಹವಾಲುಗಳನ್ನು ತಕ್ಷಣವೇ 'ಸಹಾಯ 2.0' (Sahaaya 2.0) ಪೋರ್ಟಲ್‌ನಲ್ಲಿ ದಾಖಲಿಸಿ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ರವಾನಿಸಲಾಗುತ್ತದೆ. ದೂರು ದಾಖಲಾಗಿರುವ ವಿವರಗಳು ಹಾಗೂ ಅದನ್ನು ನಿರ್ವಹಿಸುತ್ತಿರುವ ಅಧಿಕಾರಿಗಳ ಮಾಹಿತಿಯನ್ನು ನಾಗರಿಕರಿಗೆ ಎಸ್.ಎಂ.ಎಸ್ (SMS) ಮೂಲಕ ರವಾನಿಸುವ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ದೂರು ನೀಡಲು 9480685705, 080-22975936, 080-23636671 ಈನಿಯಂತ್ರಣ ಕೊಠಡಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು. ಇದರ ಜೊತೆಗೆ, ಸ್ಮಾರ್ಟ್‌ಫೋನ್ ಬಳಕೆದಾರರು ತಮ್ಮ ದೂರುಗಳನ್ನು 'ಸಹಾಯ 2.0' ಮೊಬೈಲ್ ಅಪ್ಲಿಕೇಶನ್ ಮೂಲಕವೂ ಸುಲಭವಾಗಿ ಸಲ್ಲಿಸಬಹುದಾಗಿದೆ. ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಬಡಾವಣೆಯ ಅಭಿವೃದ್ಧಿಗೆ ಕೈಜೋಡಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+