ಸಕ್ಕರೆ ನಾಡು ಮಂಡ್ಯದಲ್ಲಿ ರಾಮನವಮಿ ಹಬ್ಬದ ಸಂಭ್ರಮ ಹೇಗಿತ್ತು?, ಇಲ್ಲಿದೆ ವಿವರ
ಮಂಡ್ಯ, ಮಾರ್ಚ್, 30: ಜಿಲ್ಲೆಯಲ್ಲಿ ಗುರುವಾರ (ಮಾರ್ಚ್ 30) ಶ್ರೀ ರಾಮನ ಜನ್ಮದಿನಾಚರಣೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶ್ರೀರಾಮ ನವಮಿಯನ್ನು ಅದ್ಧೂರಿಯಾಗಿ ಆಚರಿಸಲಾಗದಿದ್ದರೂ, ಸಾಂಪ್ರದಾಯಿಕವಾಗಿ ಸಂಭ್ರಮ, ಸಡಗರದಿಂದ ಎಲ್ಲೆಡೆ ಆಚರಿಸಲಾಯಿತು. ಶ್ರೀರಾಮ ದೇವಾಲಯಗಳಲ್ಲಿ ರಾಮನಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಈ ವೇಳೆ ಸಾರ್ವಜನಿಕರಿಗೆ ಕೋಸಂಬರಿ, ಬೆಲ್ಲದ ಪಾನಕ, ಮಜ್ಜಿಗೆಯನ್ನು ವಿತರಣೆ ಮಾಡಲಾಯಿತು.

ನಗರದ ನೆಹರು ನಗರ ಬಡಾವಣೆಯಲ್ಲಿರುವ ಶ್ರೀ ರಾಮಮಂದಿರದಲ್ಲಿ ರಾಮ ಭಜನಾ ಸಭಾ ವತಿಯಿಂದ 40ನೇ ವರ್ಷದ ಶ್ರೀ ರಾಮನವಮಿ ಮಹೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇಂದಿನಿಂದ ಪ್ರಾರಂಭಿಸಲಾಗಿದ್ದು, ಇದು ಏಪ್ರಿಲ್ 8ರವರೆಗೆ ನಡೆಯಲಿದೆ. ನೆಹರುನಗರದ ರಾಮಮಂದಿರದಲ್ಲಿ ಪ್ರಾರಂಭವಾಗುವ ರಾಮೋತ್ಸವದಲ್ಲಿ ಬೆಳಗಿನಿಂದಲೇ ದೇವರಿಗೆ ವಿಶೇಷ ಪೂಜೆ, ಹೋಮ, ಹವನ ಕಾರ್ಯಕ್ರಮಗಳು ನಡೆದವು.
ರಾಮನವಮಿ ಸಂಭ್ರಮಾಚರಣೆ
ಬೆಳಗ್ಗೆ 6:30ಕ್ಕೆ ದೇವರಿಗೆ ಪಂಚಾಮೃತ ಅಭಿಷೇಕ, ವೇದಪಾರಾಯಣ, ಷೋಡಶೋಪಚಾರ ಪೂಜೆ, ಮಹಾಮಂಗಳಾರತಿ ನಡೆಯಿತು. ಬಳಿಕ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಮಂಡ್ಯದ ವಿದುಷಿ ಎಂ.ಎಸ್. ಬಿಂದುರಾವ್ ಅವರ ನೃತ್ಯಚೇತನ ಕಲಾ ಅಕಾಡೆಮಿ ವತಿಯಿಂದ ಭರತನಾಟ್ಯ ಪ್ರದರ್ಶನ ನಡೆಯಿತು.
ಶ್ರೀರಾಮನಿಗೆ ಮಹಾಮಂಗಳಾರತಿ
ನಗರದ ಪೇಟೆ ಬೀದಿಯಲ್ಲಿರುವ ಶ್ರೀರಾಮ ಸಭಾ ವತಿಯಿಂದ ಶ್ರೀರಾಮ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಶ್ರೀ ಕೋದಂಡರಾಮನಿಗೆ ವಿಶೇಷ ಅಭಿಷೇಕ, ಅಲಂಕಾರ, ಪೂಜೆಗಳು ನಡೆದವು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಿತು. ಬಳಿಕ ಭಕ್ತಾದಿಗಳಿಗೆ ವಿಶೇಷ ಪ್ರಸಾದ ವಿತರಿಸಲಾಯಿತು.

ಗಾಂಧಿ ನಗರದಲ್ಲಿರುವ ಶ್ರೀರಾಮ ದೇವಸ್ಥಾನ ಮಂಡಳಿ ವತಿಯಿಂದ ಶ್ರೀ ರಾಮೋತ್ಸವದ ಪ್ರಯುಕ್ತ ಎರಡು ದಿನಗಳಿಂದಲೇ ಆರಂಭವಾದ ರಾಮೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಇಂದು ಸಹ ದೇವರಿಗೆ ವಿಶೇಷ ಪೂಜೆ, ಹೋಮ ಹವನಗಳನ್ನು ನಡೆಸಿ ಸಾರ್ವಜನಿಕರಿಗೆ ಪಾನಕ, ಮಜ್ಜಿಗೆಯನ್ನು ವಿತರಿಸಲಾಯಿತು.
ರಾಮೋತ್ಸವದ ಪ್ರಯುಕ್ತ ಇಂದಿನಿಂದ ಒಂದು ವಾರಗಳ ಕಾಲ ದೇವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಬೇಕೆಂದು ವ್ಯವಸ್ಥಾಪಕರು ಕೋರಿದ್ದಾರೆ. ಚಿನ್ಮಯ ಮಿಷನ್ ವತಿಯಿಂದ ಚಿನ್ಮಯ ರಾಮಮಂದಿರದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಇನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ವಸತಿಗೃಹದ ಆವರಣದಲ್ಲಿರುವ ಶ್ರೀರಾಮ ಮಂದಿರ, ರೈಲು ನಿಲ್ದಾಣದ ಬಳಿ ಇರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ ವಿತರಣೆ
ಮಂಡ್ಯದ ಸ್ವರ್ಣಸಂದ್ರ, ಗುರುಮಠ, ಹರಿಶ್ಚಂದ್ರ ವೃತ್ತ, ರಾಘವೇಂದ್ರ ಸ್ವಾಮಿ ದೇವಸ್ಥಾನದ ಸಮೀಪ, ಹೊಸಹಳ್ಳಿ ರಸ್ತೆ ಸೇರಿದಂತೆ ವಿವಿಧೆಡೆ ಬೆಳಗ್ಗೆಯಿಂದಲೇ ಶ್ರೀರಾಮನವಮಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಅಲ್ಲದೇ ವಿವಿಧ ಯುವಕ ಸಂಘಗಳ ಮುಖಂಡರು ಅಲ್ಲಲ್ಲಿ ರಾಮನವಮಿ ಆಚರಿಸಿದರು. ಈ ವೇಳೆ ಭಕ್ತರು, ಸಾರ್ವಜನಿಕರಿಗೆ ನೀರು ಮಜ್ಜಿಗೆ, ಬೆಲ್ಲದ ಪಾನಕ, ಹೆಸರುಬೇಳೆ ಕೋಸಂಬರಿ ವಿತರಿಸಲಾಯಿತು.

ಬೇಸಿಗೆಯ ಬಿರು ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳಕ್ಕೆ ತತ್ತರಿಸಿಹೋಗಿದ್ದ ಜನರು ಶ್ರೀರಾಮನವಮಿ ಆಚರಣೆ ವೇಳೆ ವಿತರಿಸುತ್ತಿದ್ದ ನೀರು ಮಜ್ಜಿಗೆ, ಪಾನಕ ಸೇವನೆಗಾಗಿ ಮುಗಿಬಿದ್ದಿದ್ದರು. ಕೆಲವೆಡೆ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಜ್ಜಿಗೆ, ಪಾನಕ, ಕೋಸಂಬರಿ ಸವಿದರೆ, ಉಳಿದೆಡೆ ನೂಕುನುಗ್ಗಲಿನಲ್ಲಿ ಪ್ರಸಾದ ಸ್ವೀಕರಿಸುತ್ತಿದ್ದ ದೃಶ್ಯ ಕಂಡುಬಂದಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications