KSRTC:ಸಂಕ್ರಾಂತಿ ಪ್ರಯುಕ್ತ ಹೆಚ್ಚುವರಿ ಬಸ್ ಸೇವೆ

Posted By: Nayana
Subscribe to Oneindia Kannada

ಬೆಂಗಳೂರು, ಜನವರಿ 12: ಸಂಕ್ರಾಂತಿ ಪ್ರಯುಕ್ತ ಸಾಲು ಸಾಲು ರಜೆಯಿದ್ದ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿರುವುದರಿಂದ ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಕೆ ಎಸ್ ಅರ್ ಟಿಸಿ ಮಾಡಿದೆ.

ಜನವರಿ12 ಹಾಗೂ 13 ರಂದು ಬೆಂಗಳೂರಿನಿಂದ ರಾಜ್ಯ ಹಾಗೂ ಹೊರ ರಾಜ್ಯಗಳಿಗೆ 300 ಹೆಚ್ಚುವರಿ ಬಸ್ ಸಂಚಾರವಿರಲಿದೆ. ಅದೇ ರೀತಿ ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಜ.15 ರಂದು ಹೆಚ್ಚುವರಿ ಬಸ್ ವ್ಯವಸ್ಥೆಯಿರಲಿದೆ.

ಸಂಕ್ರಾಂತಿ, ಗಣರಾಜ್ಯೋತ್ಸವದಂದು ವಿಶೇಷ ರೈಲು ಸಂಚಾರ

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ,ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ವಿರಾಜಪೇಟೆ, ಮೈಸೂರು, ಹುಣಸೂರು, ಪಿರಿಯಾ ಪಟ್ಟಣ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಬಸ್ ಬರಲಿದೆ.

Additional bus services to clear rush

ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಆಂಧ್ರ ಪ್ರದೇಶ, ತೆಲಂಗಾಣ ಕಡೆಗೆ ಬಸ್ ಗಳು ಹೊರಡಲಿವೆ. ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4 ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರ 18 ನೇ ಅಡ್ಡರಸ್ತೆ ಬನಶಂಕರಿ, ಜೀವನ್ ಭೀಮಾನಗರ, ಕೆಂಗೇರಿ ಉಪನಗರ ಮತ್ತಿತರೆ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣೆಗೆರೆ, ತಿರುಪತಿ, ಮಂಗಳೂರು, ಶೃಂಗೇರಿ, ಧರ್ಮಸ್ಥಳ, ಹೊರನಾಡು, ಸುಬ್ರಹ್ಮಣ್ಯಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ.

ಸಂಕ್ರಾಂತಿ ವಿಶೇಷ ಪುಟ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
KSRTC has announced 300 additional bus service on the eve of Sankranti to clear the rush. Extra buses will run to various districts in the state on January 12 and 13 and return journey on January 15 from the same places.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ