ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Sankranti Special: ಮಕರ ಸಂಕ್ರಾಂತಿ ಹಬ್ಬದ ಮಹತ್ವವೇನು?

|
Google Oneindia Kannada News

ಸಂಕ್ರಾಂತಿ ಬಂದೇ ಬಿಟ್ಟಿದೆ, ಇನ್ನೇನು ನಾಲ್ಕೇ ನಾಲ್ಕು ದಿನ ಬಾಕಿ ಉಳಿದಿದೆ. ಆದರೆ ಪ್ರತಿ ವರ್ಷದಂತೆ ಈ ವರ್ಷ ಯಾರಲ್ಲೂ ಅಷ್ಟು ಹುಮ್ಮಸ್ಸಿಲ್ಲ.

ಮುಖವೂ ಕೂಡ ಕೊರೊನಾದಿಂದಾಗಿ ಕಳೆಗುಂದಿದೆ. ಸಂಕ್ರಾಂತಿ ಪ್ರಮುಖವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ, ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬವು ಸಮೃದ್ಧಿಯ ಸಂಕೇತವಾಗಿರುತ್ತದೆ.

ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಕೂಡ ಒಂದಾಗಿದೆ.

 Sankranti Special: What Is The Significance Of Makar sankranti

ವೈಜ್ಞಾನಿಕ ರೀತಿಯಲ್ಲಿ ನೋಡಿದಾಗ ಸಂಕ್ರಾಂತಿಯ ಸಮಯದಲ್ಲಿ ಚಳಿ ಹೆಚ್ಚು ಇರುತ್ತದೆ. ಎಳ್ಳು ಸೇವನೆಯಿಂದ ದೇಹದ ಉಷ್ಣತೆ ಹೆಚ್ಚು ಆಗುತ್ತದೆ ಹಾಗೂ ಚರ್ಮದ ಕಾಂತಿಯೂ ಹೆಚ್ಚುತ್ತದೆ. ಈ ಹಬ್ಬವು ಅತ್ಯಂತ ಪ್ರಾಚೀನ ಕಾಲದಿಂದಲೂ ಆಚರಣೆಗೆ ಬಂದಿದೆ.

ಜನಪದ ಗೀತೆಯಲ್ಲೂ ಸಂಕ್ರಾಂತಿಯ ಬಗ್ಗೆ ಹೇಳಿದೆ. ಶಿವ ಮತ್ತು ಪಾರ್ವತಿಯರು ಲೋಕ ಸಂಚಾರ ಪ್ರಾರಂಭಿಸುತ್ತಾರಂತೆ. ಈ ಸಂಕ್ರಮಣದ ಕಾಲದ ಗೋಧೂಳಿ ಲಗ್ನಕ್ಕಿಂತ ಹೆಚ್ಚು ಸಮಯ ಈ ಭೂಲೋಕದಲ್ಲಿರುತ್ತಾರೆ ಎಂದು ಪುರಾಣದಲ್ಲಿ ಇದೆ. ಈ ಪುಣ್ಯ ದಿನದಲ್ಲಿ ಹಲವಾರು ದೇವತೆಗಳಿಗೆ ಶಾಪ ವಿಮೋಚನೆ ಉಂಟಾಗಿದೆ.

ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದುಎಳ್ಳು. ಮನೆಯಲ್ಲಿ ಎಳ್ಳನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ ಎಳ್ಳು ಬೀರುವುದು ಮತ್ತು ಸ್ನೇಹಿತರು-ಸಂಬಂಧಿಕರೊಂದಿಗೆ ಶುಭಾಶಯಗಳನ್ನು ಹಂಚಿಕೊಳ್ಳುವುದು ಸಾಮಾನ್ಯವಾಗಿ ಕಂಡುಬರುವ ಸಂಕ್ರಾಂತಿಯ ಸಂಪ್ರದಾಯಗಳು.

ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು,ಹಣ್ಣು,ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ,ಒಣ ಕೊಬ್ಬರಿ,ಹುರಿಗಡಲೆ,ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ "ಎಳ್ಳು" ತಯಾರಿಸಲಾಗುತ್ತದೆ.

ತಮಿಳುನಾಡಿನಲ್ಲಿ ಈ ಹಬ್ಬವನ್ನು "ಪೊಂಗಲ್" ಎಂದು ಕರೆಯಲಾಗುತ್ತದೆ. ಇಲ್ಲಿ ಇದು ನಾಲ್ಕು ದಿನಗಳ ಹಬ್ಬ - ಈ ನಾಲ್ಕು ದಿನಗಳು ಮತ್ತು ಆ ದಿನಗಳಲ್ಲಿನ ಆಚರಣೆಗಳು ಹೀಗಿವೆ:
ಭೋಗಿ: ಹೊಸ ಬಟ್ಟೆಗಳು
ಪೊಂಗಲ್: ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಗುತ್ತದೆ
ಮಾಟ್ಟು ಪೊಂಗಲ್: ಗೋಪೂಜೆ
ಕೆಲವು ಕಡೆಗಳಲ್ಲಿ "ಜಲ್ಲಿಕಟ್ಟು" ಎಂಬ ಗೂಳಿಯನ್ನು ಪಳಗಿಸುವ ಆಟ ನಡೆಯುತ್ತದೆ
ಕಾಣುಮ್ ಪೊಂಗಲ್

ಒಂದು ವರ್ಷದಲ್ಲಿ (ಸಂವತ್ಸರ) 12 ಮಾಸಗಳು ಅವುಗಳನ್ನು ಎರಡು ಭಾಗ ಮಾಡಿರುವರು. ಉತ್ತರಾಯಣ ಹಾಗೂ ದಕ್ಷಿಣಾಯನ. ಸೂರ್ಯ ಗ್ರಹವು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶ ಮಾಡುವ ದಿನವನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ.

ಸೂರ್ಯ ಗ್ರಹವು ಒಂದು ರಾಶಿಯಲ್ಲಿ ಒಂದು ತಿಂಗಳ ಕಾಲ ಇರುತ್ತಾನೆ. ಸೂರ್ಯ, ಧನಸ್ಸು ರಾಶಿಯಿಂದ ಮಕರ ರಾಶಿಗೆ ಸೇರುವ ಸಮಯವನ್ನು ಮಕರ ಸಂಕ್ರಾಂತಿ ಎನ್ನುತ್ತಾರೆ.

ಪ್ರತಿ ವರ್ಷ ಜನವರಿ 14 ಅಥವಾ 15ರಂದು ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ ಹಾಗೂ ಆನಂತರ ಆತನ ಪಥವು ಉತ್ತರಾಭಿಮುಖವಾಗಿ ಚಲಿಸಲು ಪ್ರಾರಂಭವಾಗುತ್ತದೆ. ಈ ಸಮಯದಲ್ಲಿ ಬೆಳಕು ಹೆಚ್ಚು ಇರುತ್ತದೆ. 6 ತಿಂಗಳು ಕಾಲ ಉತ್ತರಾಯಣ ನಂತರ ಅಂದರೆ ಜೂನ್ 15ರ ನಂತರ ದಕ್ಷಿಣಾಯನ ಪ್ರಾರಂಭ ಆಗುತ್ತದೆ.

English summary
Makar Sankranti is celebrated on a fixed date that is 14 january every year, some times 15, it also marks the termination of the winter season and the beginning of a new harvest season.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X