ಯುಗಾದಿ ತಂದ ಪಾಠ!
ಪ್ರತಿ ವರುಷ ಯುಗಾದಿ ಹಬ್ಬದ ದಿನ ರೇಡಿಯೋ ಮತ್ತು ಟೀವಿಗಳಲ್ಲಿ ಈ ಹಾಡು ಪ್ರಸಾರವಾಗುತ್ತದೆ. ಎಷ್ಟೇ ಬಾರಿ ಕೇಳಿದರೂ ತೃಪ್ತಿಯಾಗದೇ ಮತ್ತೆ ಮತ್ತೆ ಕೇಳಬೇಕೆನಿಸುವ ಸಾಹಿತ್ಯ. ದ.ರಾ.ಬೇಂದ್ರೆಯವರು ಬರೆದ ಈ ಗೀತೆಯನ್ನು ಕುಲವಧು ಚಲನಚಿತ್ರಕ್ಕೆ ಅಳವಡಿಸಿಕೊಂಡಿದ್ದಾರೆ. ಹಾಡಿರುವವರು ಎಸ್. ಜಾನಕಿ.
ಮಾರ್ಗಶೀರ್ಷ ಮಾಸದ ಹೋಳಿ ಹುಣ್ಣಿಮೆಯಾದ 15 ದಿನಗಳಿಗೆ ಬರುವುದು ಯುಗಾದಿ. ಯುಗ ಎಂದರೆ ಅದೊಂದು ಕಾಲಗಣನೆ. ತ್ರೇತಾಯುಗ, ಕೃತಯುಗ, ದ್ವಾಪರಯುಗ, ಕಲಿಯುಗಗಳ ಬಗ್ಗೆ ನೀವು ಕೇಳಿರಬಹುದು. ಯುಗವೆಂದರೆ 5000ಕ್ಕೂ ಹೆಚ್ಚಿನ ವರುಷಗಳಂತೆ. ಆದರೆ ಇಲ್ಲಿ ಹಾಗಲ್ಲ. ಕಾಲದ ಒಂದು ಭಾಗ ಮತ್ತೆ ಪ್ರಾರಂಭವಾಗುತ್ತಿದೆ ಎಂಬುದರ ಸೂಚನೆಯಷ್ಟೆ.
ವಸಂತ ಋತುವಿನಿಂದ ಪ್ರಾರಂಭಗೊಂಡ ಕಾಲಗಣನೆ ಶಿಶಿರದಲ್ಲಿ ಮುಕ್ತಾಯಗೊಂಡು ಮತ್ತೆ ವಸಂತ ಪ್ರಾರಂಭವಾಗುತ್ತಿರುವುದರ ಸೂಚನೆ. ಇಂತಹ ಯುಗದ ಅಂದರೆ ವರುಷದ ಮೊದಲನೆಯ ದಿನವನ್ನು ಯುಗಾದಿ ಎಂದು ಗುರುತಿಸಿ ಹಬ್ಬವನ್ನಾಗಿ ಆಚರಿಸುವರು.
ಚಾಂದ್ರಮಾನ ಪಂಚಾಂಗ ರೀತ್ಯಾ ಚೈತ್ರ ಮಾಸದ ಶುದ್ಧ ಪಾಡ್ಯದ ದಿನದಂದು ಬ್ರಹ್ಮ ಈ ಲೋಕವನ್ನು ಸೃಷ್ಟಿಸಿದ ಎಂಬ ಪ್ರತೀತಿ ಇದೆ. ಇಂದೇ ಸೂರ್ಯನು ತನ್ನ ಮೊದಲ ಕಿರಣವನ್ನು ಭೂಮಿಯ ಮೇಲೆ ಹರಿಸಿದ ಎಂಬ ಮಾತೂ ಇದೆ. ಇವೆಲ್ಲವೂ ಇಂದು ನಂಬಲಶಕ್ಯ. ಆದರೂ ಮುಂದಿನ ಪೀಳಿಗೆಗೆ ಇದರ ಬಗ್ಗೆ ಸ್ವಲ್ಪವಾದರೂ ತಿಳಿದಿರಲಿ ಎಂದು ಹೇಳಬೇಕಿದೆ.
ಇಂದಿನ ದಿನದಿಂದ ವಸಂತ ಮಾಸ ಪ್ರಾರಂಭವಾಗಿ ತರು ಲತೆಗಳು ಚಿಗುರುತ್ತವೆ. ಹೊಸ ಹೊಸ ಹೂಗಳು ಕಂಪನ್ನು ಬೀರುತ್ತವೆ. ಹಳೆಯ ತರಗೆಲೆಗಳು ಉದುರಿ ಗಿಡ ಮರಗಳು ಮತ್ತೆ ಮರಳಿ ಹೊಸ ಚೈತನ್ಯ ಪಡೆಯುತ್ತವೆ. ಜೀವನದಲ್ಲಿ ಒಂದು ವರುಷಗಳಲ್ಲಿ ಕಂಡ ಸುಖ ದು:ಖಗಳನ್ನು ಮರೆತು ಹೊಸ ಬಾಳನ್ನು ನೋಟ್‌ಬುಕ್ಕಿನ ಹೊಸ ಪುಟದಂತೆ ಪ್ರಾರಂಭಿಸುವ ಸೂಚನೆಯ ಈ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಾರೆ.
ಈ ದಿನ ಶ್ರೀರಾಮನು ರಾವಣನನ್ನು ಜಯಿಸಿ ಮರಳಿ ಅಯೋಧ್ಯೆಗೆ ಬಂದು ರಾಜ್ಯಭಾರ ಮಾಡಿದನೆಂದು ಪ್ರತೀತಿ. ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ - ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ 'ಗುಡಿ" ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ. ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು. ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು. ಅಂದಿನ ವಿಶೇಷ ತಿನಿಸು - ಒಬ್ಬಟ್ಟು ಅಥವಾ ಹೋಳಿಗೆ.
ತೆಂಗಿನಕಾಯಿ ಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣಲ್ಲಿ ಮಾಡುವರು. ಇದನ್ನೇ ಮರಾಠಿಯಲ್ಲಿ ಪೂರಣಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು. ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು.
ಇನ್ನೊಂದು ವಿಶೇಷವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.
ಎಲ್ಲರ ಬಾಳಲ್ಲೂ ಸುಖ-ದು:ಖ, ಒಳ್ಳೆಯದು-ಕೆಟ್ಟದ್ದು, ಕರ್ಮ-ಫಲ ಇದ್ದೇ ಇರುವುದು. ಇದೊಂದು ಬ್ಯಾಲೆನ್ಸ್ ಶೀಟು ಇದ್ದ ಹಾಗೆ. ಎಷ್ಟು ಸ್ವೀಕರಿಸುವರೋ ಅಷ್ಟನ್ನೇ ಮರಳಿ ಕೊಡಬೇಕು, ಕೊನೆಯಲ್ಲಿ ಬರುವಾಗ ಏನೂ ತರದೆ ಬಂದಂತೆ ಹೋಗುವುದು. ಅದಕ್ಕೇ ಇಂದಿನ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ನಿಜವಾಗಿಯೂ ಬೇವಿನಲ್ಲಿ ಇರುವ ಶಕ್ತಿ ಬೆಲ್ಲದಲ್ಲಿಲ್ಲ. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ.
ಬೇವು ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ :
ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ।
ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ।।
ಅದರರ್ಥ ಹೀಗಿದೆ - ನೂರು ವರುಷಗಳ ಆಯುಷ್ಯೆ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅನಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications