ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡುತಿದೆ

By * ಬಿ.ಎಂ. ಲವಕುಮಾರ್
|
Google Oneindia Kannada News

Wish you all Happy Ugadi
ಯುಗಾದಿ ಬಂತೆಂದರೆ ಸಾಕು ಪ್ರಕೃತಿಯಲ್ಲೊಂದು ಹೊಸ ಪುಳಕ. ಗಿಡ ಮರಗಳು ಚಿಗುರಿ ಹಸಿರೆಲೆಗಳಿಂದ ಕಂಗೊಳಿಸುತ್ತಿದ್ದರೆ, ಸುಡು ಬಿಸಿಲ ನಡುವೆಯೂ ಆಗಾಗ್ಗೆ ಬೀಸುವ ತಂಗಾಳಿ ಮನಕ್ಕೆ ಮುದನೀಡುತ್ತದೆ. ನಿಸರ್ಗದ ಮಡಿಲಲ್ಲಿ ಹೆಜ್ಜೆ ಹಾಕುತ್ತಿದ್ದರೆ ಅರಳಿ ನಿಂತು ಸುವಾಸನೆ ಬೀರುವ ಕುಸುಮಗಳು... ಅವುಗಳ ಮೇಲೆ ಹಾರಾಡಿ ಮಕರಂದ ಹೀರುವ ಜೇನು ನೊಣಗಳ ಝೇಂಕಾರ ಎಲ್ಲೆಡೆ ಕಂಡು ಬರುತ್ತದೆ. ಹಾಗೆನೋಡಿದರೆ ಯುಗಾದಿ ಎನ್ನುವುದು ನಿಸರ್ಗಕ್ಕೊಂದು ಮರುಹುಟ್ಟು ಅಷ್ಟೇ ಅಲ್ಲ ಮುಂದೆ ಬರಲಿರುವ ಎಲ್ಲಾ ಹಬ್ಬಗಳಿಗೂ ಇದು ಮುನ್ನುಡಿ ಎಂದರೂ ತಪ್ಪಾಗಲಾರದು.

ಪಾಶ್ಚಿಮಾತ್ಯರು ಜನವರಿ 1ನ್ನು ಹೊಸವರ್ಷವಾಗಿ ಆಚರಿಸಿದರೆ, ಭಾರತೀಯರು ಯುಗಾದಿಯನ್ನು ಹೊಸವರ್ಷವನ್ನಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ವಿಕ್ರಮ ಶಕೆಯ ಮೊದಲ ದಿನವಾದ ಕಾರ್ತಿಕ ಶುದ್ಧ ಪಾಡ್ಯವನ್ನು ಉತ್ತರ ಭಾರತದಲ್ಲಿ ಯುಗಾದಿ ಹಬ್ಬವನ್ನಾಗಿ ಆಚರಿಸಿಕೊಂಡು ಬರುತ್ತಿರುವುದನ್ನು ನಾವು ಕಾಣಬಹುದು. ಯುಗಾದಿ ಆಚರಣೆಯಲ್ಲಿ ಮೂರು ರೀತಿಯ ಲೆಕ್ಕಾಚಾರ ಜ್ಯೋತಿಷ್ಯ ಶಾಸ್ತ್ರದಲ್ಲಿದ್ದು, ಅವುಗಳೆಂದರೆ, ಬಾರ್ಹಸ್ಪತ್ಯಮಾನ, ಚಾಂದ್ರಮಾನ, ಸೌರಮಾನ.

ಭಾರತದಲ್ಲಿ ಯುಗಾದಿ ಆಚರಣೆಯೂ ಕೂಡ ವಿಭಿನ್ನವಾಗಿದೆ. ಉತ್ತರ ಭಾರತದಲ್ಲಿ ಬಾರ್ಹಸ್ಪತ್ಯಮಾನದಲ್ಲಿ ಯುಗಾದಿಯನ್ನು ಆಚರಿಸಿದರೆ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಾಂದ್ರಮಾನ ಹಾಗೂ ಸೌರಮಾನ ಯುಗಾದಿಯನ್ನು ಆಚರಿಸುವ ಪದ್ಧತಿಯಿದೆ. ಈ ಎರಡು ಯುಗಾದಿ ಆಚರಣೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಒಂದು ಚಂದ್ರ ಮತ್ತೊಂದು ಸೂರ್ಯನನ್ನು ಅವಲಂಬಿಸಿರುವುದು. ಚಾಂದ್ರಮಾನ ಯುಗಾದಿ ಕುರಿತಂತೆ ಹೇಳುವುದಾದರೆ, ಚಂದ್ರನ ಚಲನೆಯನ್ನು ಆಧರಿಸಿ ಸಾಮಾನ್ಯವಾಗಿ ಅಮಾವಾಸ್ಯೆ-ಹುಣ್ಣಿಮೆಯನ್ನು ಮತ್ತು ಇವುಗಳ ಆಧಾರದಲ್ಲಿ ತಿಂಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಪದ್ಧತಿಯೇ ಚಾಂದ್ರಮಾನ. ಈ ಪದ್ಧತಿಯಲ್ಲಿ ಚಂದ್ರನ ಚಲನೆಯಲ್ಲಿ ವ್ಯತ್ಯಾಸವಾಗುವುದರಿಂದ ಚಾಂದ್ರಮಾನ ಯುಗಾದಿ ಕೂಡ ನಿರ್ದಿಷ್ಟ ದಿನಾಂಕದಲ್ಲಿ ಬಾರದಿರುವುದನ್ನು ನಾವು ಕಾಣಬಹುದು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X