ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ವರುಷದ ಸಂಭ್ರಮ ಹೊತ್ತು ತಂದ ಯುಗಾದಿ

By ವಿಶ್ವಾಸ ಸೋಹೋನಿ
|
Google Oneindia Kannada News

ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ, ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಹಬ್ಬಗಳಲ್ಲಿ ಶ್ರೇಷ್ಠವಾದ, ಪ್ರಸಿದ್ಧವಾದ ಯುಗಾದಿ ಹಬ್ಬ ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಯುಗಾದಿ ಹಬ್ಬವು ಹಿಂದುಗಳ ದೃಷ್ಟಿಯಲ್ಲಿ ಪವಿತ್ರವಾದ ದಿನವಾಗಿದ್ದು, ವರ್ಷದ ಪ್ರಾರಂಭ ದಿನವಾಗಿದೆ.

ಯುಗಾದಿಯ ಅರ್ಥ 'ಯುಗದ ಆದಿ'. ಯುಗಾದಿ' ಎಂಬ ಶಬ್ದವು ಸಂಸ್ಕೃತದ ಯುಗ' ಮತ್ತು ಆದಿ' ಎಂಬ ಎರಡು ಶಬ್ದಗಳಿಂದ ಕೂಡಿದೆ. ಯುಗವೆಂದರೆ ಸೃಷ್ಟಿಯ ಕಾಲಮಾನ. ಅರ್ಥಾತ್ ಹೊಸ ವರ್ಷ; ಆದಿ ಎಂದರೆ ಆರಂಭ.

ಯುಗಾದಿ ವಿಶೇಷ: ಮೇಷದಿಂದ ಮೀನ ರಾಶಿ ತನಕ ಯಾರಿಗೆ, ಯಾವ ಫಲ?ಯುಗಾದಿ ವಿಶೇಷ: ಮೇಷದಿಂದ ಮೀನ ರಾಶಿ ತನಕ ಯಾರಿಗೆ, ಯಾವ ಫಲ?

ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ ಪಾಡ್ಯದಂದು ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದೂ, ಅಂದಿನಿಂದ ಕಾಲಗಣನೆಗಾಗಿ ಗ್ರಹ-ನಕ್ಷತ್ರ-ಮಾಸ-ಋತು-ವರ್ಷ ಇವುಗಳನ್ನು ಏರ್ಪಡಿಸಿದನೆಂದೂ ವ್ರತಖಂಡದಲ್ಲೂ ಪುರಾಣಗಳಲ್ಲೂ ಉಲ್ಲೇಖವಿದೆ. ಪಂಚಾಂಗಗಳೂ ಇದನ್ನೇ ಹೇಳುತ್ತವೆ.

ವೇದಗಳ ಕಾಲದಿಂದಲೂ ಯುಗಾದಿಯ ಮಹಿಮೆ ಇವೆ. ಎಲ್ಲ ಶಾಸ್ತ್ರ, ಗ್ರಂಥಗಳಲ್ಲಿ ಯುಗಾದಿಯನ್ನು ಕುರಿತು ಹೇಳಲಾಗಿದೆ. ಶ್ರೀರಾಮನು ರಾವಣನನ್ನು ಸಂಹರಿಸಿ ಬಂದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪಟ್ಟಾಭಿಷೇಕವಾದ ದಿನ. ಅಲ್ಲದೆ ಮಹಾಭಾರತದಲ್ಲಿ ಬರುವ ಚೀದಿರಾಜ್ಯದ ಅರಸು ವಸುವಿನ ಉಗ್ರ ತಪಸ್ಸಿಗೆ ಮೆಚ್ಚಿದ ಇಂದ್ರನು ವೈಜಯಂತಿ ಮಾಲೆಯನ್ನು ಅವನಿಗೆ ಕೊಟ್ಟು, ಚಿನ್ನದ ಕಲಶವುಳ್ಳ ಚಕ್ರಾಧಿಪತ್ಯದ ಧ್ವಜವನ್ನು ರಾಜನ ತಲೆಯ ಮೇಲೆ ಇಟ್ಟಿರುವ ದಿನವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ದಕ್ಷಿಣ ಭಾರತವನ್ನು ಆಳಿದ ಶಾಲಿವಾಹನನು ಚೈತ್ರಶುದ್ಧ ಪಾಡ್ಯಮಿಯಂದು ಶಾಲಿವಾಹನ ರಾಜ ಸಿಂಹಾಸನಾರೂಢನಾದನೆಂದೂ, ಆಗಿನಿಂದ ಶಾಲಿವಾಹನ ಶಕೆ ಆರಂಭವಾಯಿತೆಂದೂ ಹೇಳಲಾಗುತ್ತದೆ. ಹಿಂದುಗಳು ಶಾಲಿವಾಹನ ಶಕೆಯ ಸಂವತ್ಸರಗಳನ್ನಾಧರಿಸಿ ಆಯಾ ಸಂವತ್ಸರವನ್ನು ಚೈತ್ರ ಮಾಸದ ಪ್ರತಿಪದೆಯಿಂದ ಆರಂಭಿಸುವರು. ಯುಗಾದಿಯು ಚಂದ್ರಮಾನದ ಸಂವತ್ಸರದ ಆರಂಭದ ದಿನ. ವರಾಹಮಿಹಿರಾಚಾರ್ಯನು ವರ್ಷಾರಂಭವನ್ನು ಚೈತ್ರ ಮಾಸವೆಂದು ಹೇಳಿರುವನು.

ಪಂಚಾಂಗ ಏನು ಹೇಳುತ್ತದೆ?

ಪಂಚಾಂಗ ಏನು ಹೇಳುತ್ತದೆ?

ಪಂಚಾಂಗ ಮತ್ತು ಶಾಸ್ತ್ರದ ಪ್ರಕಾರ ಶುಭದಿನ ಹಾಗೂ ಅತ್ಯಂತ ಶುಭ ಮೂಹೂರ್ತದ ಮೂರೂವರೆ ದಿನಗಳೆಂದರೆ ಯುಗಾದಿ, ವಿಜಯದಶಮಿ, ಬಲಿಪಾಡ್ಯಮಿ ಮತ್ತು ಅಕ್ಷಯ ತದಿಗೆ. ಅದರಲ್ಲಿ ಯುಗಾದಿ ಅತೀಶ್ರೇಷ್ಠ ಮೂಹೂರ್ತ ಎಂದು ಭಾರತಿಯರು ನಂಬುತ್ತಾರೆ. ವರ್ಷದ ಶುಭ ದಿನವಾದ ಯುಗಾದಿ ಮಂಗಳ ಕಾರ್ಯವನ್ನು ಮಾಡಲು ಯೋಗ್ಯ ದಿನವೆಂದು ಹೇಳುವರು.

ಯುಗಾದಿ ಹಬ್ಬವನ್ನು ಚಂದ್ರಮಾನ ಹಾಗೂ ಸೌರಮಾನ ಎಂಬ ಎರಡು ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸುರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನ ಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.

ಜ್ಯೋತಿಷದ ಪ್ರಕಾರ ಲೆಕ್ಕಾಚಾರ

ಜ್ಯೋತಿಷದ ಪ್ರಕಾರ ಲೆಕ್ಕಾಚಾರ

ಭೂಮಿಯಿಂದ ನೋಡಿದಾಗ, ಸೂರ್ಯ ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ನಿಧಾನವಾಗಿ ಸಂಚರಿಸಿದಂತೆ ಕಾಣುತ್ತದೆ. ಜ್ಯೋತಿಷ ಶಾಸ್ತ್ರದಂತೆ, ಮೊದಲ ನಕ್ಷತ್ರ ಅಶ್ವಿನಿ- ಅಂದರೆ ಮೇಷ ರಾಶಿಯ 0-13:20 ಡಿಗ್ರಿ. ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ. ಇದೇ ಚಂದ್ರಮಾನ ಯುಗಾದಿ. ಅಶ್ವಿನೀ ನಕ್ಷತ್ರಕ್ಕೆ ರವಿಯು ಸೂರ್ಯನು ಪ್ರವೇಶಿಸುವ ಕಾಲಕ್ಕೆ ಹೊಸವರ್ಷ ಎಂದು ಹೇಳುವರು. ಇದೇ ಸೌರಮಾಮ ಯುಗಾದಿ. ಸಾಮಾನ್ಯವಾಗಿ ಇದು ಏಪ್ರಿಲ್ 14 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗೆ ಚಾಂದ್ರಮಾನ ಸಂವತ್ಸರವಾಗುತ್ತದೆ. ರವಿಚಂದ್ರರ ಗತಿಯನ್ನವಲಂಬಿಸಿ 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ.

ಈ ಊರಿನ ಜನ ಯುಗಾದಿ ಆಚಿರಿಸದಿರಲು ಕಾರಣ ಬಲು ವಿಚಿತ್ರಈ ಊರಿನ ಜನ ಯುಗಾದಿ ಆಚಿರಿಸದಿರಲು ಕಾರಣ ಬಲು ವಿಚಿತ್ರ

ಚೈತ್ರ ಶುದ್ಧ ಪಾಡ್ಯಮಿ

ಚೈತ್ರ ಶುದ್ಧ ಪಾಡ್ಯಮಿ

ದಕ್ಷಿಣ ಭಾರತೀಯರು ಚಾಂದ್ರಮಾನವನ್ನು ಅನುಸರಿಸಿ ಚೈತ್ರಶುದ್ಧ ಪಾಡ್ಯಮಿಯಂದು ಯುಗಾದಿ ಆಚರಿಸುತ್ತಿರುವರು. ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಗುಜರಾತ್ ಗಳಲ್ಲಿ ಚಂದ್ರಮಾನ ಯುಗಾದಿ ಆಚರಿಸಿದರೆ ತಮಿಳುನಾಡು, ಕೇರಳ ಮತ್ತು ಉತ್ತರ ಭಾರತದ ಕೆಲವು ಸ್ಥಳಗಳಲ್ಲಿ ಸೌರಮಾನ ಯುಗಾದಿ ಆಚರಿಸುತ್ತಾರೆ. ಉತ್ತರಭಾರತದಲ್ಲಿ ಕಾರ್ತಿಕ ಶುದ್ಧ ಪಾಡ್ಯಮಿಯನ್ನು ಯುಗಾದಿಯೆನ್ನುವರು.

ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುವರು. ಕರ್ನಾಟಕದಲ್ಲಿ ಯುಗಾದಿ', ಮಹಾರಾಷ್ಟ್ರದಲ್ಲಿ ಗುಢಿಪಾಡವಾ', ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಹೊಸ ವರ್ಷದ ಹಬ್ಬ'ವೆಂದು, ಉತ್ತರ ಭಾರತದಲ್ಲಿ ಬೈಸಾಖಿ' ಎಂದು ಇದು ಆಚರಿಸಲ್ಪಡುತ್ತದೆ.

ಯುಗಾದಿ ಎಂಬ ಹೊಸ ವರ್ಷ... ಏನಿದರ ಮಹತ್ವ?ಯುಗಾದಿ ಎಂಬ ಹೊಸ ವರ್ಷ... ಏನಿದರ ಮಹತ್ವ?

ನಿಸರ್ಗ ಸೌಂದರ್ಯಕ್ಕೆ ಮುನ್ನುಡಿಯಾಗುವ ಯುಗಾದಿ

ನಿಸರ್ಗ ಸೌಂದರ್ಯಕ್ಕೆ ಮುನ್ನುಡಿಯಾಗುವ ಯುಗಾದಿ

ಹೊಸ ವರ್ಷದ ಪ್ರಾರಂಭದ ಸಂಕೇತವಾದ ಯುಗಾದಿಯನ್ನು ಬಡವ-ಬಲ್ಲಿದರೆಂಬ ತಾರತಮ್ಯವಿಲ್ಲದೇ ಎಲ್ಲಾ ಹಿಂದೂಗಳೂ ಆಚರಿಸುತ್ತಾರೆ. ರೈತರು ಎತ್ತುಗಳನ್ನು ಶೃಂಗರಿಸಿ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ವ್ಯಾಪಾರಿಗಳು ಹಾಗೂ ಇನ್ನಿತರರು ಕೂಡ ಅಂದಿನ ದಿನವೇ ಶುಭ ಕಾರ್ಯವನ್ನು ಮಾಡುತ್ತಾರೆ. ಯುಗಾದಿ' ಬಂದಿತೆಂದರೆ ಎಲ್ಲಡೆಯಲ್ಲಿ ಸಂತೋಷ, ಸಂಭ್ರಮ ತುಂಬಿ ತುಳುಕುತ್ತಿರುತ್ತದೆ. ಚೈತ್ರಮಾಸದಿಂದ ವಸಂತ ಋತು ಶುರುವಾಗುತ್ತದೆ. ವನಗಳೆಲ್ಲ ಚಿಗುರಿ ಹೂ ಬಿಟ್ಟು ಯುಗಾದಿಯ ಹರ್ಷವನ್ನು ಬೀರುವವು. ಎಲ್ಲಿ ನೋಡಿದರೂ ಮರಗಿಡಬಳ್ಳಿಗಳು ಹಸಿರಾಗಿ ನಳನಳಿಸುತ್ತಿರುವುದು.

ಯುಗಾದಿಯ ದಿನ ಮುಂಜಾನೆ ಬೇವು ಮಿಶ್ರಿತ ನೀರಿನಿಂದ ಸ್ನಾನ ಮಾಡಿ, ಹೊಸಬಟ್ಟೆ ಧರಿಸಿ ತಂತಮ್ಮ ದೇವರನ್ನು ಪೂಜಿಸುತ್ತಾರೆ. ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಕೋಣೆಯ ಬಾಗಿಲಿಗೆ ಎಳೆಯ ಹಸಿರು ಮಾವಿನೆಲೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು ಸೆರಿಸಿ ತೋರಣವನ್ನು ಕಟ್ಟುವರು. ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು.

ರಾಹು-ಕೇತು ಗ್ರಹಗಳ ಸ್ಥಾನ ಬದಲಾವಣೆ; ಯಾವ ರಾಶಿಗೆ ಏನು ಫಲ?ರಾಹು-ಕೇತು ಗ್ರಹಗಳ ಸ್ಥಾನ ಬದಲಾವಣೆ; ಯಾವ ರಾಶಿಗೆ ಏನು ಫಲ?

ಸುಖ-ದುಃಖದ ಸಂಕೇತ

ಸುಖ-ದುಃಖದ ಸಂಕೇತ

ಬೇವು-ಬೆಲ್ಲವು, ಸುಖ-ದುಃಖ, ರಾತ್ರಿ-ಹಗಲು ಇವುಗಳ ಸಂಕೇತಗಳಾಗಿವೆ. ಮಾನವರ ಬದುಕಿನಲ್ಲಿ ಸುಖ-ದುಃಖಗಳು ಅವಿಭಾಜ್ಯ ಅಂಶಗಳು.

ಇವೆಲ್ಲವುಗಳೊಂದಿಗೆ ಸಮತೋಲನ ಕಾಯ್ದುಕೊಂಡೇ ಮನುಷ್ಯ ಬದುಕಬೇಕು. ಜೀವನ ಕಷ್ಟ-ಸುಖ. ನೋವು ನಲಿವುಗಳ ಸಮ್ಮಿಶ್ರಣವಾಗಿದೆ. ಇವೆರಡೂ ಒಟ್ಟಿಗೆ ಇರುವವು. ಎರಡನ್ನೂ ಸಮದೃಷ್ಟಿಯಿಂದ ಸವಿಯುವುದನ್ನು ಕಲಿಯಲೆಂದೇ ಯುಗಾದಿಯಂದು ಬೇವು-ಬೆಲ್ಲವನ್ನು ತಿನ್ನಿಸುವರು. ಅಂದು ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೇಣಸು, ಬೇವು ಇತ್ಯಾದಿಗಳ ಮಿಶ್ರಣಮಾಡಿ ಉಟದ ಮೊದಲು ಸೇವಿಸುವರು. ನೋವು ನಲಿವು ಎರಡಕ್ಕೂ ನಾವು ಸ್ವಾಗತ ನೀಡಬೇಕು. ನಾವು ಬೇವಿನ ಸಮಾನವಾದ ದು:ಖ, ಅಶಾಂತಿಯ, ಪ್ರಪಂಚದಲ್ಲಿದ್ದರೂ ಬೆಲ್ಲದ ಸಮಾನವಾದ ಶಾಂತಿ, ಅತೀಂದ್ರಿಯ ಸುಖ, ಆತ್ಮೀಯತೆ, ಸ್ನೇಹ, ಮಧುರತೆಯ ಅನುಭವ ಮಾಡುವುದು ಎಂಬ ನಿಜ ಅರ್ಥವಾಗಿದೆ.

ಬೇವಿನ ಎಲೆಯಿಂದ ಆರೋಗ್ಯ ವೃದ್ಧಿ

ಬೇವಿನ ಎಲೆಯಿಂದ ಆರೋಗ್ಯ ವೃದ್ಧಿ

ಬೇವಿನ ಎಲೆಯೂ ಮಾನವನ ಆರೋಗ್ಯಕ್ಕೆ ಸಹಕಾರಿಯಾಗುವುದು.
'ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ !
ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ!!'
ಎಂದು ಆಯುರ್ವೇದವು ಬೇವಿನ ಮಹಿಮೆಯನ್ನು ಸಾರಿದೆ. ಅದರರ್ಥ ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅನಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೆನೆ ಎಂದು.

English summary
Ugadi is the New Year's Day for the people of Hindus in India. It is festively observed in these regions on the first day of the Hindu lunisolar calendar month of Chaitra. This year it falls on April 7.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X