keyboard_backspace

Explained: ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿದ ಭರವಸೆಗಳ ಪಟ್ಟಿ!

Google Oneindia Kannada News

ಲಕ್ನೋ, ಅಕ್ಟೋಬರ್ 25: ಉತ್ತರ ಪ್ರದೇಶದಲ್ಲಿ ಮತದಾರರ ಮನಸ್ಸು ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಹತ್ವದ ಘೋಷಣೆಗಳೊಂದಿಗೆ ಭರವಸೆಗಳನ್ನು ನೀಡುತ್ತಿದ್ದಾರೆ.

2022ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಅಧಿಕಾರ ನೀಡಿದರೆ ಏನೆಲ್ಲಾ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂಬುದನ್ನು ಪ್ರಚಾರ ಮತ್ತು ಸುದ್ದಿಗೋಷ್ಠಿಗಳ ಮೂಲಕ ಜನರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ.

 'ಈ ಚಿತ್ರ ನೋಡಿ ಯೋಗಿಜಿಗೆ ತುಂಬಾ ನೋವಾಗಿದೆ ಎಂದು ತಿಳಿಯಿತು' 'ಈ ಚಿತ್ರ ನೋಡಿ ಯೋಗಿಜಿಗೆ ತುಂಬಾ ನೋವಾಗಿದೆ ಎಂದು ತಿಳಿಯಿತು'

ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೂ ಆದ್ಯತೆ ನೀಡುವ ನಿಟ್ಟಿನಲ್ಲಿ ಶೇ.40ರಷ್ಟು ಮಹಿಳೆಯರಿಗೆ ಟಿಕೆಟ್ ನೀಡುವಾಗಿ ಘೋಷಿಸಿ ಆಗಿದೆ. ಈಗದೇ ಸಾಲಿಗೆ ಹೊಸ ಘೋಷಣೆ ಸೇರ್ಪಡೆಯಾಗಿದೆ. ರಾಜ್ಯದಲ್ಲಿ 10 ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಹಾಗೂ ಆರೋಗ್ಯ ಸೌಲಭ್ಯವನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದಾರೆ. ಮುಂಬರುವ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ನೀಡಿರುವ ಹಾಗೂ ನೀಡುತ್ತಿರುವ ಭರವಸೆಗಳ ಕುರಿತು ಒಂದು ವಿಶೇಷ ವರದಿಗಾಗಿ ಮುಂದೆ ಓದಿ.

ಆರೋಗ್ಯ ವಲಯದ ದುಸ್ಥಿತಿ ಬಗ್ಗೆ ಪ್ರಿಯಾಂಕಾ ಉಲ್ಲೇಖ

ಆರೋಗ್ಯ ವಲಯದ ದುಸ್ಥಿತಿ ಬಗ್ಗೆ ಪ್ರಿಯಾಂಕಾ ಉಲ್ಲೇಖ

"ಪ್ರಸ್ತುತ ಸರ್ಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದ ಪರಿಣಾಮವಾಗಿರುವ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಯುಪಿಯಲ್ಲಿ ಆರೋಗ್ಯ ವ್ಯವಸ್ಥೆಯ ಶಿಥಿಲ ಸ್ಥಿತಿಯನ್ನು ಎಲ್ಲರೂ ನೋಡಿದ್ದಾರೆ. ಈ ಹಿನ್ನೆಲೆ ಪ್ರಣಾಳಿಕೆಯ ಸಮಿತಿಯ ಒಪ್ಪಿಗೆಯೊಂದಿಗೆ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ ಯಾವುದೇ ರೋಗಕ್ಕೆ ಉಚಿತವಾಗಿ ಚಿಕಿತ್ಸೆ ನೀಡುವುದಕ್ಕೆ ನಿರ್ಧರಿಸಲಾಗಿದೆ. 10 ಲಕ್ಷ ರೂಪಾಯಿವರೆಗೆ ಚಿಕಿತ್ಸೆ ಮತ್ತು ಆರೋಗ್ಯ ಸೌಲಭ್ಯ ಒದಗಿಸುವ ವೆಚ್ಚವನ್ನು ಸರ್ಕಾರವೇ ಭರಿಸಲಿದೆ," ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರತಿಜ್ಞಾ ಯಾತ್ರೆ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರತಿಜ್ಞಾ ಯಾತ್ರೆ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ಹಾಗೂ ಹೊಸ ಕಾರ್ಯಕರ್ತರ ಸೇರ್ಪಡೆ ಮಾಡಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಪ್ರತಿಜ್ಞಾ ಯಾತ್ರೆಯನ್ನು ನಡೆಸುತ್ತಿದೆ. ಅಕ್ಟೋಬರ್ 23ರಂದು ಆರಂಭವಾಗಿರುವ ಪ್ರತಿಜ್ಞಾ ಯಾತ್ರೆಯು ನವೆಂಬರ್ 1ರವರೆಗೂ ರಾಜ್ಯದ ಮೂರು ಮಾರ್ಗಗಳಲ್ಲಿ ಸಂಚರಿಸಲಿದೆ. ಬಾರಾಬಂಕಿಯಿಂದ ಬುಂದೇಲ್‌ಖಂಡ್, ಸಹರಾನ್‌ಪುರದಿಂದ ಮಥುರಾ ಮತ್ತು ವಾರಣಾಸಿಯಿಂದ ರಾಯ್ ಬರೇಲಿವರೆಗೆ ನಡೆಯಲಿದೆ.

ಶೇ.40ರಷ್ಟು ಮಹಿಳೆಯರಿಗೆ ಕಾಂಗ್ರೆಸ್ ನೀಡುವುದಾಗಿ ಘೋಷಣೆ

ಶೇ.40ರಷ್ಟು ಮಹಿಳೆಯರಿಗೆ ಕಾಂಗ್ರೆಸ್ ನೀಡುವುದಾಗಿ ಘೋಷಣೆ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶೇ.40ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಈಗಾಗಲೇ ಘೋಷಿಸಿದ್ದಾರೆ. "ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕೆಂದು ನಾವು ಬಯಸುತ್ತೇವೆ" ಎಂದು ಹೇಳಿದ್ದರು. "ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡಲಿದೆ ಎಂದು ನಾವು ನಿರ್ಧರಿಸಿದ್ದೇವೆ" ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

"ಮುಂಬರುವ ನವೆಂಬರ್ 15ರವರೆಗೆ ಮಹಿಳೆಯರಿಗೆ ಅವಕಾಶವಿರುತ್ತದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಯಾವುದೇ ಮಹಿಳೆಯರು ಕಾಂಗ್ರೆಸ್ ಪಕ್ಷದ ಕಚೇರಿಗೆ ಬಂದು ಭೇಟಿ ಮಾಡಬಹುದು ಎಂದು ಪ್ರಿಯಾಂಕಾ ಗಾಂಧಿ ಆಹ್ವಾನ ನೀಡಿದ್ದಾರೆ. ಮಹಿಳಾ ನಾಯಕರಿಗೆ ಅವರ ಸಾಮರ್ಥ್ಯ ಮತ್ತು ಕ್ಷೇತ್ರದಲ್ಲಿ ಅವರು ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಅವಕಾಶಗಳನ್ನು ನೀಡಲಾಗುವುದು," ಎಂದು ಹೇಳಿದ್ದಾರೆ.

ರೈತರು, ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿನಿಯರಿಗೂ ಬಂಪರ್

ರೈತರು, ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿನಿಯರಿಗೂ ಬಂಪರ್

ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ಆದ್ಯತೆ ನೀಡುವುದರ ಜೊತೆಗೆ ರೈತರು, ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿನಿಯರಿಗೂ ಪ್ರಿಯಾಂಕಾ ಗಾಂಧಿ ವಾದ್ರಾ ಬಂಪರ್ ಆಫರ್ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ರೈತರ ಕೃಷಿ ಸಾಲ ಮನ್ನಾ ಮಾಡಲಾಗುವುದು, 20 ಲಕ್ಷ ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗ ನೀಡುವುದು, ಸಾಂಕ್ರಾಮಿಕ ಸಮಯದಲ್ಲಿನ ವಿದ್ಯುತ್ ಬಿಲ್ ಮನ್ನಾ ಮಾಡುವುದು ಮತ್ತು ಕೋವಿಡ್ -19 ಸಂತ್ರಸ್ತರಿಗೆ ರೂ 25,000 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ ಪ್ರಮುಖ ಘೋಷಣೆಗಳನ್ನು ಮುಂದೆ ಓದಿ.

* 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌ಗಳನ್ನು ಮತ್ತು ಪದವಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ ನೀಡುವುದು

* ರೈತರ ಎಲ್ಲಾ ಸಾಲ ಮನ್ನಾ ಮಾಡುತ್ತೇವೆ. ಈ ಹಿಂದೆ 72 ಸಾವಿರ ಕೋಟಿ ಸಾಲ ಮನ್ನಾ ಮಾಡಿ ತೋರಿಸಿದ್ದೇವೆ

* ಛತ್ತೀಸಗಡದಂತೆ ಉತ್ತರ ಪ್ರದೇಶದಲ್ಲೂ ಗೋಧಿ ಮತ್ತು ಭತ್ತದ ಬೆಲೆಯನ್ನು 2500 ರೂಪಾಯಿಗೆ ನಿಗದಿಪಡಿಸಲಾಗುವುದು

* ಕಬ್ಬಿಗೆ ಪ್ರತಿ ಕ್ವಿಂಟಾಲ್ ಗೆ 400 ರೂಪಾಯಿ ಬೆಂಬಲ ಬೆಲೆ ನೀಡುವುದು

* ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿನ ವಿದ್ಯುತ್ ಬಿಲ್ ಅನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇವೆ. ಪ್ರತಿಯೊಬ್ಬರ ವಿದ್ಯುತ್ ಬಿಲ್ ಅನ್ನು ಅರ್ಧದಷ್ಟು ಕಡಿಮೆ ಮಾಡುತ್ತೇವೆ.

* ಕೊರೊನಾವೈರಸ್ ಕಾಲದಲ್ಲಿ ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬಗಳಿಗೆ 25,000 ರೂಪಾಯಿ ಪರಿಹಾರವನ್ನು ನೀಡುತ್ತೇವೆ

* ರಾಜ್ಯದಲ್ಲಿ 20 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವುದರ ಜೊತೆಗೆ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು

English summary
Free Treatment upto Rs 10 lakh to People in Uttar Pradesh: Priyanka Gandhi promises. Know More.
Related News
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X