ಪ್ರಧಾನಿ ಅಭ್ಯರ್ಥಿ ರಾಹುಲ್ ಗೆ ಜೈ ಎಂದ ಶಿಂದೆ!

sushil kumar shinde
ನವದೆಹಲಿ, ಸೆ.11 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಘೋಷಿಸಲು ಸಿದ್ಧತೆಗಳು ನಡೆಯುತ್ತಿವೆ. ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ಬುಧವಾರ ಘೋಷಿಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಮಾತನಾಡಿದ ಅವರು, 2014ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ನಮ್ಮ ಪ್ರಧಾನಮಂತ್ರಿ ಅಭ್ಯರ್ಥಿ. ಅವರ ನೇತೃತ್ವದಲ್ಲಿ ಕೆಲಸ ಮಾಡಲು ಕಾಂಗ್ರೆಸ್ ನಾಯಕರು ಇಚ್ಚಿಸಿದ್ದಾರೆ ಎಂದರು ಹೇಳಿದರು.

ಲೋಕಸಭೆ ಚುನಾವಣೆ ಎದುರಾಗುತ್ತಿದೆ. ಈಗ ಎಲ್ಲಾ ಪಕ್ಷಗಳು ತಮ್ಮ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುತ್ತವೆ. ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎಂದು ಘೋಷಿಸಿದ ಅವರು, ಪ್ರಧಾನಿ ಹುದ್ದೆಗೆ ರಾಹುಲ್ ಅತ್ಯುತ್ತಮ ಆಯ್ಕೆ ಎಂದರು.

ಕಳೆದವಾರ ಪ್ರಧಾನಿ ಮನಮೋಹನ್ ಸಿಂಗ್ ರಾಹುಲ್ ಗಾಂಧಿ ಪ್ರಧಾನಿಯಾಗಲು ಸೂಕ್ತ ವ್ಯಕ್ತಿ. 2014ರ ಚುನಾವಣೆ ಬಳಿಕ ಅವರ ನೇತೃತ್ವದಲ್ಲಿ ಕೆಲಸ ಮಾಡಲು ಸಿದ್ಧ ಎಂದು ಘೋಷಿಸಿದ್ದರು. ಸದ್ಯ ಶಿಂದೆ ರಾಹುಲ್ ಗಾಂಧಿಗೆ ಬೆಂಬಲ ಸೂಚಿಸಿದ್ದಾರೆ. (ಪ್ರಧಾನಿ ಸ್ಥಾನಕ್ಕೆ ರಾಹುಲ್‌ ಸೂಕ್ತ ವ್ಯಕ್ತಿ!)

ಪ್ರತಿಪಕ್ಷ ಬಿಜೆಪಿಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡುವುದರಿಂದ ಮೋದಿಗೆ ಪೈಪೋಟಿ ನೀಡಲು ಕಾಂಗ್ರೆಸ್ ರಾಹುಲ್ ಗಾಂಧಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಸಜ್ಜಾಗಿದೆ.

ರಾಮ, ಶಾಮ ಪ್ರಧಾನಿ ಆಗಬಹುದು : ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವ ಬಿಜೆಪಿ ನಿರ್ಣಯವನ್ನು ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಲೇವಡಿ ಮಾಡಿದ್ದಾರೆ.

ಬಿಜೆಪಿಯಲ್ಲಿ ರಾಮ, ಶಾಮ ಯಾರು ಬೇಕಾದರೂ ಪ್ರಧಾನಿ ಅಭ್ಯರ್ಥಿಗಳಾಗಬಹುದು ಎಂದು ಹೇಳುವ ಮೂಲಕ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದ್ದಾರೆ. ಬಿಜಪಿಯಲ್ಲಿ ಎಲ್ಲರೂ ಪ್ರಧಾನಿ ಅಭ್ಯರ್ಥಿಗಳಾಗಿದ್ದರು ಸದ್ಯ ಇಬ್ಬರು ಮಾತ್ರ ಉಳಿದಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಧಾನಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕಾಂಗ್ರೆಸ್ ರಾಹುಲ್ ಗಾಂಧಿ ಎನ್ನುತ್ತಿದ್ದರೆ, ಬಿಜೆಪಿ ನರೇಂದ್ರ ಮೋದಿ ಹೆಸರು ಹೇಳುತ್ತಿದೆ. ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+