Infographics: ಕರ್ನಾಟಕದಲ್ಲಿ ಚುರಕುಗೊಂಡ ಮುಂಗಾರು ಮಾರುತಗಳು: ಭಾರಿ ಮಳೆ ಸಂಭವ
ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆ ನೀಡಿದೆ. ಈ ಕುರಿತು ಮುಂದಿನ ಐದು ದಿನ (ಆಗಸ್ಟ 4ರವರೆಗೆ) ರಾಜ್ಯ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ 2ರಿಂದ ಮೂರು ದಿನ ಭಾರಿಯಿಂದ ಅತೀ ಭಾರಿ ಮಳೆ ಆಗುವ ಸಂಭವವಿದೆ. ಆಗಸ್ಟ್ 2ರವರೆಗೆ ಈ ಭಾಗದಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಪ್ರದೇಶದಲ್ಲಿ ಮಳೆ ದುರ್ಬಲವಾಗಿದ್ದು, ಮುಂದಿನ ಮೂರು ದಿನ ಯಾವುದೇ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನದಲ್ಲಿ ಉಂಟಾದ ಅಕಾಲಿಕ ಬದಲಾವಣೆಗಳಿಂದಾಗಿ ಮುಂಗಾರು ಮಾರುತಗಳು ರಾಜ್ಯದಲ್ಲಿ ಸಕ್ರಿಯವಾಗಿವೆ. ಕಳೆದ ಬಾರಿಯಂತೆ ಈ ಸಲ ಮತ್ತೆ ಕರಾವಳಿ ಮೂರು ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಲಿದೆ. ಇದರ ಹೊರತು ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮಲೆನಾಡಿಗೆ ಆರೆಂಜ್ ಅಲರ್ಟ್
ಕರ್ನಾಟಕ ಹಾಗೂ ಭಾರತದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿದೆ. ಈ ಪೈಕಿ ಕರ್ನಾಟಕ ಕರಾವಳಿ ತೀರ ಪ್ರದೇಶದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿಮವೊಗ್ಗ ಸೇರಿ ಆರು ಜಿಲ್ಲೆಗಳಲ್ಲಿ ಭಾನುವಾರದಿಂದ ಆಗಸ್ಟ್ 2ರವರೆಗೆ ಸಾಧಾರಣದಿಂದ ಭಾರಿ ಮಳೆ ಬೀಳಲಿದೆ. ಈ ಕಾರಣಕ್ಕೆ ಅವುಗಳಿಗೆ 'ಯೆಲ್ಲೋ ಅಲರ್ಟ್' ನೀಡಲಾಗಿದೆ. ನಂತರ ಮೂರು ದಿನ ಇದೇ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಅಬ್ಬರಿಸುವ ಕಾರಣಕ್ಕೆ 'ಆರೆಂಜ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಮುಂದಿನ 48ಗಂಟೆಯ ಮಳೆ ವರದಿ
ರಾಜ್ಯದ ಎಲ್ಲ ಭಾಗದಲ್ಲಿ ಮುಂದಿನ 48ಗಂಟೆಗಳಲ್ಲಿ ಅತ್ಯಧಿಕ ಭಾರಿ ಮಳೆ ನಿರೀಕ್ಷೆ ಇಲ್ಲ. ಭಾನುವಾರ ಒಂದು ದಿನ ಕರಾವಳಿ ಮೂರು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣದಿಂದ ಭಾರಿ ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಈ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಕೊಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಕೇವಲ ಸಾಮಾನ್ಯ ಇಲ್ಲವೇ ತುಂತುರು ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 48ಗಂಟೆ ನಂತರ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಚುರುಕಗಾಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನ ಹವಾಮಾನ ಮನ್ಸೂಚನೆ ವಿವರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಬಿಸಿಲು ಕಂಡು ಬಂದಿದ್ದು, ಮಳೆ ದಾಖಲಾದ ಬಗ್ಗೆ ವರದಿ ಆಗಿಲ್ಲ. ಇನ್ನು ಮುಂದಿನ ಎರಡು ದಿನ ನಗರದಲ್ಲಿ ಸಾಮಾನ್ಯವಾಗಿಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡ ಸಲ ತುಂತುರು ಇಲ್ಲವೇ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಈ ವೇಳೆ ಗರಿಷ್ಠ ತಾಪಮಾನ 30ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಎಷ್ಟು ಉಷ್ಣಾಂಶ ದಾಖಲಾಗಿದೆ?
ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದ್ದು, ತೇವಾಂಶ 77ರಷ್ಟು ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 21ಕಿ.ಮೀ ಕಂಡು ಬಂದಿದೆ. ಬಾಗಲಕೋಟೆ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ ದಾಖಲಾಗಿದೆ. ಮಂಗಳೂರಲ್ಲಿ 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 75ರಷ್ಟು ತೇವಾಂಶ ಇದೆ. ಶಿವಮೊಗ್ಗದಲ್ಲಿ 28ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 70ರಷ್ಟು ತೇವಾಂಶ ಇದೆ. ಇನ್ನು ಮೈಸೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ತೇವಾಂಶ 58ರಷ್ಟು ದಾಖಲಾಗಿದ್ದು, ಬಳ್ಳಾರಿಯಲ್ಲಿ 33ಡಿ. ಸೆ.ಗರಿಷ್ಠ ಉಷ್ಣಾಂಶ, ತೇವಾಂಶ 51 ದಾಖಲಾಗಿದೆ.
ರಾಯಚೂರಲ್ಲಿ 34ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 56ರಷ್ಟು ತೇವಾಂಶ , ಚಿತ್ರದುರ್ಗದಲ್ಲಿ 32ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 59ರಷ್ಟು ತೇವಾಂಶ ಕಂಡು ಬಂದಿದೆ. ಅದೇ ರೀತಿ ಕಲಬುರಗಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 57ರಷ್ಟು ತೇವಾಂಶ, ಚಿಕ್ಕಮಗಳೂರು 28ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 63ರಷ್ಟು ತೇವಾಂಶ ಇದೆ.












Click it and Unblock the Notifications