ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics; ಬಕ್ರೀದ್ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳು

|
Google Oneindia Kannada News

ಬೆಂಗಳೂರು, ಜುಲೈ 08; ಕರ್ನಾಟಕ ಸರ್ಕಾರ ಬಕ್ರೀದ್ ಆಚರಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಜುಲೈ 10ರ ಭಾನುವಾರ ಬಕ್ರೀದ್ ಹಬ್ಬದ ಆಚರಣೆ ನಡೆಯಲಿದೆ.

ಬಕ್ರೀದ್ ಹಬ್ಬದ ಸಮಯದಲ್ಲಿ ಪ್ರಾಣಿ ಬಲಿ ನೀಡುವುದಕ್ಕೂ ಹಲವು ನಿರ್ಬಂಧ ಹೇರಲಾಗಿದೆ. ಹಬ್ಬದ ಸಮಯದಲ್ಲಿ ಜಾನುವಾರುಗಳನ್ನು ಬಲಿಕೊಡಲು ಅವಕಾಶವಿಲ್ಲ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದ ಮರುದಿನ ಈ ಮಾರ್ಗಸೂಚಿ ಪ್ರಕಟವಾಗಿದೆ.

ಬಕ್ರೀದ್ ವೇಳೆ ಬೆಂಗಳೂರಿನ ರಸ್ತೆ, ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಪ್ರಾರ್ಥನೆಗೆ ಅವಕಾಶವಿಲ್ಲ: ಬಿಬಿಎಂಪಿಬಕ್ರೀದ್ ವೇಳೆ ಬೆಂಗಳೂರಿನ ರಸ್ತೆ, ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಪ್ರಾರ್ಥನೆಗೆ ಅವಕಾಶವಿಲ್ಲ: ಬಿಬಿಎಂಪಿ

ಹಬ್ಬದ ಸಂದರ್ಭದಲ್ಲಿ ಜಾನುವಾರ ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಯಾವುದೇ ವಯಸ್ಸಿನ ದನ, ಆಕಳು, ಕರು ಮತ್ತು ಎತ್ತುಗಳನ್ನು ಬಲಿ ನೀಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಬಕ್ರೀದ್ 2022: ದಿನಾಂಕ, ಇತಿಹಾಸ, ಹಬ್ಬದ ಮಹತ್ವ ತಿಳಿಯಿರಿಬಕ್ರೀದ್ 2022: ದಿನಾಂಕ, ಇತಿಹಾಸ, ಹಬ್ಬದ ಮಹತ್ವ ತಿಳಿಯಿರಿ

Bakrid Celebration Karnataka Govt Issues Guidelines

ಕರ್ನಾಟಕ ಸರ್ಕಾರದ ಮಾರ್ಗಸೂಚಿಯಲ್ಲಿ ಹಬ್ಬದ ಆಚರಣೆ ಸಂದರ್ಭದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ.

 ಕೋಲಾರ; ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತಂದಿದ್ದ ಒಂಟೆಗಳ ರಕ್ಷಣೆ ಕೋಲಾರ; ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತಂದಿದ್ದ ಒಂಟೆಗಳ ರಕ್ಷಣೆ

ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಅಧೀನ ಕಾರ್ಯದರ್ಶಿ ಮಹಿಬೂಬ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸ್ಥಳೀಯ ಆಡಳಿತ, ಪೊಲೀಸರು, ಸಂಬಂಧಿಸಿದ ಇಲಾಖೆ ನೀಡುವ ಸಾಮಾನ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಲಾಗಿದೆ.

Bakrid Celebration Karnataka Govt Issues Guidelines

ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನೀಡಬಾರದು ಎಂದು ಮಾರ್ಗಸೂಚಿಯಲ್ಲಿ ಸೂಚನೆ ನೀಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹ ಬಕ್ರೀದ್ ಹಬ್ಬದ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂಚಿ ಉಲ್ಲಂಘನೆ ಮಾಡಿದರೆ ಪ್ರಾಣಿ ಬಲಿ ತಡೆ ಕಾಯ್ದೆಯ ಅನ್ವಯ 6 ತಿಂಗಳ ಶಿಕ್ಷೆ, 5 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಲಾಗಿದೆ.

English summary
Karnataka government issued guidelines for the Bakrid celebration. Here are the details in infographics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X