108-ft Kempegowda statue : 108 ಅಡಿ ಕೆಂಪೇಗೌಡ ಪ್ರತಿಮೆ ವಿಶೇಷತೆಗಳು
ಬೆಂಗಳೂರು, ನವೆಂಬರ್ 09; ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಇದಕ್ಕೆ 'ಪ್ರಗತಿಯ ಪ್ರತಿಮೆ' ಎಂದು ಕರ್ನಾಟಕ ಸರ್ಕಾರ ನಾಮಕರಣ ಮಾಡಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅನಾವರಣಗೊಳ್ಳಲಿರುವ 108 ಅಡಿ ಎತ್ತರದ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕರ್ನಾಟಕ ಬಿಜೆಪಿ ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಪ್ರತಿಮೆ ಬೆಂಗಳೂರು ನಗರದಲ್ಲಿಯೇ ಅತಿ ಎತ್ತರದ ಪ್ರತಿಮೆಯಾಗಿದೆ. ಪ್ರತಿಮೆ ಜಾಗದಲ್ಲಿಯೇ 23 ಎಕರೆ ಪ್ರದೇಶದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ.

ಪ್ರತಿಮೆ ವಿಶೇಷತೆಗಳು; ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಗರ ನಿರ್ಮಾತೃ ಒಬ್ಬರ ವಿಶ್ವದ ಅತಿ ಎತ್ತರದ ಪ್ರತಿಮೆ ಇದು ಎಂಬ ಹೆಗ್ಗಳಿಕೆಗೆ ಪಡೆದಿದೆ.
ಗುಜರಾತ್‌ನಲ್ಲಿ ಏಕತಾ ಪ್ರತಿಮೆ ನಿರ್ಮಾಣ ಮಾಡಿದ ರಾಮ್ ಸುತಾರ್ ಕ್ರಿಯೇಷನ್ಸ್ ಅವರೇ ಈ ಕೆಂಪೇಗೌಡ ಪ್ರತಿಮೆಯ ವಿನ್ಯಾಸ ಹಾಗೂ ನಿರ್ಮಾಣ ಮಾಡಿದ್ದಾರೆ.
ಪ್ರತಿಮೆಯ ಖಡ್ಗವೇ 4 ಸಾವಿರ ಕೆಜಿ ತೂಕ ಹೊಂದಿದೆ. 120 ಟನ್ ಉಕ್ಕನ್ನು ಪ್ರತಿಮೆ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ. 98 ಟನ್ ಕಂಚನ್ನು ಬಳಕೆ ಮಾಡಲಾಗಿದೆ. ಈ ಪ್ರತಿಮೆ ನಿರ್ಮಾಣಕ್ಕೆ 84 ಕೋಟಿ ರೂ. ಖರ್ಚು ಮಾಡಲಾಗಿದೆ.
ನವೆಂಬರ್ 11ರಂದು ನಡೆಯುವ ಕೆಂಪೇಗೌಡ ಬೃಹತ್ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ವಿಡಿಯೋವೊಂದನ್ನು ಪ್ರದರ್ಶನ ಮಾಡಲಾಗುತ್ತಿದೆ. ಈ ವಿಡಿಯೋಗೆ ನಟ ಯಶ್ ಹಿನ್ನಲೆ ಧ್ವನಿ ನೀಡಿದ್ದಾರೆ.












Click it and Unblock the Notifications