ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಕೊವ್ಯಾಕ್ಸಿನ್ ಲಸಿಕೆ ಪಡೆಯುವ ಮುನ್ನ ಒಮ್ಮೆ ಓದಿ

|
Google Oneindia Kannada News

ನವದೆಹಲಿ, ಜನವರಿ.19: ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿರುವ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು, ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತಿವೆ. ಈ ಹಿನ್ನೆಲೆ ಎಂಥವರು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವುದು ಸೂಕ್ತ ಎನ್ನುವ ಬಗ್ಗೆ ಸ್ವತಃ ಸಂಸ್ಥೆಯೇ ಒಂದು ಸಲಹಾ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವವರು ಕಡ್ಡಾಯವಾಗಿ ಷರತ್ತುಗಳನ್ನು ಓದಲೇಬೇಕು.

ಭಾರತದಲ್ಲಿ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕೃತವಾಗಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, 3ನೇ ಹಂತದ ವೈದ್ಯಕೀಯ ಪ್ರಯೋಗದ ಸ್ಥಿತಿಯಲ್ಲಿ ಇರುವ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಎಂದು ಪ್ರತಿರೋಧ ತೋರಿದ್ದರು.

ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?

ದೇಶದಲ್ಲಿ ಮೊದಲ ದಿನದಿಂದ ಈವರೆಗೂ ಕೊವ್ಯಾಕ್ಸಿನ್ ಲಸಿಕೆ ಪಡೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೊವಿಶೀಲ್ಡ್ ಲಸಿಕೆ ಯಾರಿಗೆ ಸೂಕ್ತ, ಯಾರು ಈ ಕೊವ್ಯಾಕ್ಸಿನ್ ಲಸಿಕೆ ತೆಗೆದುಕೊಳ್ಳಬೇಕು. ಎಂಥವರು ಲಸಿಕೆ ಹಾಕಿಸಿಕೊಳ್ಳಬಾರದು. ಕೊವ್ಯಾಕ್ಸಿನ್ ಲಸಿಕೆಗಳ ಬಗ್ಗೆ ಸಾರ್ವಜನಿಕರಲ್ಲಿರುವ ಗೊಂದಲಗಳಿಗೆ ಸಂಸ್ಥೆ ಸಲಹಾ ಪಟ್ಟಿಯ ಮೂಲಕ ಉತ್ತರಿಸಿದೆ.

ಭಾರತ್ ಬಯೋಟೆಕ್ ಸಂಸ್ಥೆಯು ಕೊವ್ಯಾಕ್ಸಿನ್ ಲಸಿಕೆಯ ಬಗ್ಗೆ ಪಟ್ಟಿ ಮಾಡಿರುವ ಎಚ್ಚರಿಕೆ ಅಂಶಗಳು ಯಾವುವು ಎಂಬ ಕುತೂಹಲಕ್ಕೆ ಒಂದೇ ಒಂದು ಭಾವಚಿತ್ರದಲ್ಲಿ ಉತ್ತರ ಸಿಗಲಿದೆ. (ಚಿತ್ರ ವಿನ್ಯಾಸ: ಭರತ್ ಹೆಚ್.ಸಿ)

Bharat Biotech Warns People About Covaxin: Here Key Points You Have To Read
English summary
Bharat Biotech Warns People About Covaxin Vaccine: Here Key Points You Have To Read.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X