ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂರು ಕ್ಷೇತ್ರಗಳ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ

|
Google Oneindia Kannada News

ಬೆಂಗಳೂರು, ಮಾರ್ಚ್ 26; ಕರ್ನಾಟಕದಲ್ಲಿ ಉಪ ಚುನಾವಣೆ ಎದುರಾಗಿದೆ. ಒಂದು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರು ಜಿಲ್ಲೆಯ ಮಸ್ಕಿ ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದೆ.

ಬೆಳಗಾವಿ ಲೋಕಸಭೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆಳಗಾವಿ ಲೋಕಸಭೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬಿಜೆಪಿ ಮತ್ತು ಕಾಂಗ್ರೆಸ್ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲು ಮಾರ್ಚ್ 30 ಕೊನೆಯ ದಿನವಾಗಿದೆ.

ಬೆಳಗಾವಿಯಲ್ಲಿ ದಿ. ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ. ಮಸ್ಕಿಯಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್‌ಗೆ ಟಿಕೆಟ್ ನೀಡಲಾಗಿದೆ.

ಬಸವಕಲ್ಯಾಣ; ಉಪ ಚುನಾವಣಾ ಕಣಕ್ಕಿಳಿದ ಸ್ವಾಮೀಜಿ ಬಳಿ 45 ಕೆಜಿ ಚಿನ್ನ! ಬಸವಕಲ್ಯಾಣ; ಉಪ ಚುನಾವಣಾ ಕಣಕ್ಕಿಳಿದ ಸ್ವಾಮೀಜಿ ಬಳಿ 45 ಕೆಜಿ ಚಿನ್ನ!

ಬಸವಕಲ್ಯಾಣ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ. ನಾರಾಯಣರಾವ್ ಗೆದ್ದಿದ್ದರು. ಕೋವಿಡ್‌ನಿಂದ ಅವರು ಮೃತಪಟ್ಟ ಕಾರಣಕ್ಕಾಗಿ ಉಪ ಚುನಾವಣೆ ಎದುರಾಗಿದೆ.

ಕಳೆದ ಚುನಾವಣೆಯಲ್ಲಿ ಬಸವಕಲ್ಯಾಣ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಬಿಜೆಪಿ ಅಭ್ಯರ್ಥಿಯಾಗಿದ್ದರು. 44,153 ಮತಗಳನ್ನು ಪಡೆದು ಸೋಲು ಕಂಡಿದ್ದರು. ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ.

ಏಪ್ರಿಲ್ 17ರಂದು ನಡೆಯುವ ಉಪ ಚುನಾವಣೆಯಲ್ಲಿ ಶರಣು ಸಲಗಾರ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಉಪ ಚುನಾವಣೆ ಗೆಲ್ಲುವ ಭರವಸೆಯಲ್ಲಿ ಹೊಸ ಮುಖಕ್ಕೆ ಪಕ್ಷ ಮಣೆ ಹಾಕಿದೆ.

 BJP Candidates For Belagavi Maski Basavakalyan By Election
English summary
BJP announced candidates for Belagavi loksabha seat and Maski, Basavakalyan assembly seat by election. Election will be held on April 17, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X