ನಿಮ್ಮ ಜಿಲ್ಲೆಯಲ್ಲಿನ ಕೊರೊನಾ ಪಾಸಿಟಿವಿಟಿ ರೇಟ್ ಗಮನಿಸಿ
ಬೆಂಗಳೂರು, ಜೂನ್ 14: ಕೊರೊನಾ ವೈರಸ್ ಎರಡನೇ ಅಲೆಯ ಆರ್ಭಟಕ್ಕೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಲಾಕ್ಡೌನ್ ವಿಧಿಸಿತ್ತು. ಆದರೆ ಸದ್ಯ ಕೊರೊನಾ ಪಾಸಿಟಿವಿಟಿ ರೇಟ್ ಕೆಲ ಜಿಲ್ಲೆಗಳಲ್ಲಿ ಕಡಿಮೆಯಾಗುತ್ತಿದೆ.
ಹಾಗಾಗಿ ಇಂದಿನಿಂದ (ಸೋಮವಾರ) ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ 19 ಜಿಲ್ಲೆಗಳಲ್ಲಿ ಅನ್ಲಾಕ್ ಘೋಷಣೆಯಾಗಿದ್ದು, ಇನ್ನುಳಿದ ಸುಮಾರು 11 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕಠಿಣ ನಿಯಮಗಳು ಮುಂದುವರೆಯುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಿರುವ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೊದಲ ಹಂತದಲ್ಲಿ ಅನ್ಲಾಕ್ ಮಾಡಲಾಗಿದೆ.
ಸದ್ಯ ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಎಷ್ಟಿದೆ ಎಂಬುದನ್ನು ಈ ಕೆಳಗಿನಂತೆ ಗಮನಿಸಿ..
ಧಾರವಾಡದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5.8, ತುಮಕೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.8, ಗದಗದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.1.48, ಶಿವಮೊಗ್ಗದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.8, ಚಿತ್ರದುರ್ಗದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.6.64, ಕೊಪ್ಪಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ. 4.55, ಮಡಿಕೇರಿಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.6.06 ರಷ್ಟಿರುವುದು ತಿಳಿದುಬಂದಿದೆ.
ಅದೇ ರೀತಿ ರಾಯಚೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.2, ಯಾದಗಿರಿಯಲ್ಲಿ ಪಾಸಿಟಿವಿಟಿ ರೇಟ್ ಶೇ.1.76, ಕೋಲಾರದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ. 4.09, ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5, ಉಡುಪಿಯಲ್ಲಿ ಕೊರೊನಾ\ ಪಾಸಿಟಿವಿಟಿ ರೇಟ್ ಶೇ.3.68, ಬೆಳಗಾವಿಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.7.7 ರಷ್ಟಿದೆ.
ಇದೇ ವೇಳೆ ಜೊತೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಇಲ್ಲಿನ ಪಾಸಿಟಿವಿಟಿ ರೇಟ್ ಶೇ.20 ರಷ್ಟಿದೆ. ಬೆಂಗಳೂರಿನಲ್ಲಿ ಶೇ.3.11, ದಾವಣಗೆರೆಯಲ್ಲಿ ಶೇ.10.38, ಹಾವೇರಿ ಜಿಲ್ಲೆಯಲ್ಲಿ ಶೇ.2.6, ಬೀದರ್ನಲ್ಲಿ ಶೇ.0.54, ಕಲಬುರಗಿಯಲ್ಲಿ ಶೇ.2, ಹುಬ್ಬಳ್ಳಿಯಲ್ಲಿ ಶೇ.5, ಬಳ್ಳಾರಿಯಲ್ಲಿ ಶೇ.6 ಹಾಗೂ ಮಂಡ್ಯದಲ್ಲಿ ಶೇ.5.36 ರಷ್ಟು ಕೊರೊನಾ ಪಾಸಿಟಿವಿಟಿ ರೇಟ್ ಇದೆ ಎಂದು ಆರೋಗ್ಯ ಇಲಾಖೆಯ ಅಂಕಿ- ಅಂಶದಿಂದ ತಿಳಿದುಬಂದಿದೆ.

-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ












Click it and Unblock the Notifications