• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಿಮ್ಮ ಜಿಲ್ಲೆಯಲ್ಲಿನ ಕೊರೊನಾ ಪಾಸಿಟಿವಿಟಿ ರೇಟ್ ಗಮನಿಸಿ

|
Google Oneindia Kannada News

ಬೆಂಗಳೂರು, ಜೂನ್ 14: ಕೊರೊನಾ ವೈರಸ್ ಎರಡನೇ ಅಲೆಯ ಆರ್ಭಟಕ್ಕೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಲಾಕ್​ಡೌನ್​ ವಿಧಿಸಿತ್ತು. ಆದರೆ ಸದ್ಯ ಕೊರೊನಾ ಪಾಸಿಟಿವಿಟಿ ರೇಟ್ ಕೆಲ ಜಿಲ್ಲೆಗಳಲ್ಲಿ ಕಡಿಮೆಯಾಗುತ್ತಿದೆ.

ಹಾಗಾಗಿ ಇಂದಿನಿಂದ (ಸೋಮವಾರ) ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ 19 ಜಿಲ್ಲೆಗಳಲ್ಲಿ ಅನ್​ಲಾಕ್ ಘೋಷಣೆಯಾಗಿದ್ದು, ಇನ್ನುಳಿದ ಸುಮಾರು 11 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕಠಿಣ ನಿಯಮಗಳು ಮುಂದುವರೆಯುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇಂದಿನಿಂದ ಹಂತ ಹಂತವಾಗಿ ಕರ್ನಾಟಕ ಅನ್‌ಲಾಕ್: 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಯಥಾಸ್ಥಿತಿಇಂದಿನಿಂದ ಹಂತ ಹಂತವಾಗಿ ಕರ್ನಾಟಕ ಅನ್‌ಲಾಕ್: 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಯಥಾಸ್ಥಿತಿ

ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಿರುವ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೊದಲ ಹಂತದಲ್ಲಿ ಅನ್‌ಲಾಕ್ ಮಾಡಲಾಗಿದೆ.

ಸದ್ಯ ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಎಷ್ಟಿದೆ ಎಂಬುದನ್ನು ಈ ಕೆಳಗಿನಂತೆ ಗಮನಿಸಿ..

ಧಾರವಾಡದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5.8, ತುಮಕೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.8, ಗದಗದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.1.48, ಶಿವಮೊಗ್ಗದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.8, ಚಿತ್ರದುರ್ಗದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.6.64, ಕೊಪ್ಪಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ. 4.55, ಮಡಿಕೇರಿಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.6.06 ರಷ್ಟಿರುವುದು ತಿಳಿದುಬಂದಿದೆ.

ಅದೇ ರೀತಿ ರಾಯಚೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.2, ಯಾದಗಿರಿಯಲ್ಲಿ ಪಾಸಿಟಿವಿಟಿ ರೇಟ್ ಶೇ.1.76, ಕೋಲಾರದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ. 4.09, ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5, ಉಡುಪಿಯಲ್ಲಿ ಕೊರೊನಾ\ ಪಾಸಿಟಿವಿಟಿ ರೇಟ್ ಶೇ.3.68, ಬೆಳಗಾವಿಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.7.7 ರಷ್ಟಿದೆ.

ಇದೇ ವೇಳೆ ಜೊತೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಇಲ್ಲಿನ ಪಾಸಿಟಿವಿಟಿ ರೇಟ್ ಶೇ.20 ರಷ್ಟಿದೆ. ಬೆಂಗಳೂರಿನಲ್ಲಿ ಶೇ.3.11, ದಾವಣಗೆರೆಯಲ್ಲಿ ಶೇ.10.38, ಹಾವೇರಿ ಜಿಲ್ಲೆಯಲ್ಲಿ ಶೇ.2.6, ಬೀದರ್‌ನಲ್ಲಿ ಶೇ.0.54, ಕಲಬುರಗಿಯಲ್ಲಿ ಶೇ.2, ಹುಬ್ಬಳ್ಳಿಯಲ್ಲಿ ಶೇ.5, ಬಳ್ಳಾರಿಯಲ್ಲಿ ಶೇ.6 ಹಾಗೂ ಮಂಡ್ಯದಲ್ಲಿ ಶೇ.5.36 ರಷ್ಟು ಕೊರೊನಾ ಪಾಸಿಟಿವಿಟಿ ರೇಟ್ ಇದೆ ಎಂದು ಆರೋಗ್ಯ ಇಲಾಖೆಯ ಅಂಕಿ- ಅಂಶದಿಂದ ತಿಳಿದುಬಂದಿದೆ.

   ಗುಜರಾತ್ ಬದಲಾಗುತ್ತೆ ಅಂತ ಟ್ವೀಟ್ ಮಾಡಿದಾರೆ ಕೇಜ್ರಿವಾಲ್!! | Oneindia Kannada

   English summary
   Unlocked in the 19 districts in Karnataka where the coronavirus positivity rate is low.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X