ಏ.1: ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?

ನವದೆಹಲಿ, ಏಪ್ರಿಲ್ 1: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 489,033,044ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,168,537 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 423,955,733 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 34 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

Covid 19 Info: Countries With Number of Infected, Deaths, recovered April 1

ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 1ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1335 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1335 ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1335 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 52 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,918 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,025,775ಕ್ಕೆ ಏರಿಕೆಯಾಗಿದೆ. ಈ ಪೈಕಿ 42,490,922 ಸೋಂಕಿತರು ಗುಣಮುಖರಾಗಿದ್ದರೆ, 521,211 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 13,642 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 489,033,044 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,168,537 ಮಂದಿ ಪ್ರಾಣ ಬಿಟ್ಟಿದ್ದಾರೆ. 423,955,733 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 58,908,774 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

 ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,17,80,503
ಭಾರತ: 4,30,25,775
ಬ್ರೆಜಿಲ್: 2,99,47,895
ಫ್ರಾನ್ಸ್: 2,56,14,483
ಜರ್ಮನಿ: 2,12,28,065
ಯುಕೆ: 2,11,47,425
ರಷ್ಯಾ: 1,78,42,925
ಟರ್ಕಿ: 1,48,60,560
ಇಟಲಿ: 1,46,42,354
ದಕ್ಷಿಣ ಕೊರಿಯಾ: 1,33,75,818

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,07,320
ಬ್ರೆಜಿಲ್: 6,59,860
ಭಾರತ: 5,21,211
ರಷ್ಯಾ: 3,68,722
ಮೆಕ್ಸಿಕೋ: 3,23,016
ಪೆರು: 2,12,222
ಯುಕೆ: 1,65,379
ಇಟಲಿ: 1,59,383
ಇಂಡೋನೇಷಿಯಾ: 1,55,089
ಫ್ರಾನ್ಸ್: 1,42,274

Recommended Video

    ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು,ಅರಾಜಕತೆ: ರೊಚ್ಚಿಗೆದ್ದ ಜನ ಏನ್ ಮಾಡಿದ್ರು ನೋಡಿ | Oneindia Kannada
    ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

    ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

    ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
    ಯುಎಸ್ಎ: 6,52,36,840
    ಭಾರತ: 4,24,90,922
    ಬ್ರೆಜಿಲ್: 2,87,18,580
    ಫ್ರಾನ್ಸ್: 2,32,39,006
    ಯುಕೆ: 1,90,37,114
    ಟರ್ಕಿ: 1,45,31,930
    ರಷ್ಯಾ: 1,68,38,787
    ಜರ್ಮನಿ: 1,67,54,000
    ಅರ್ಜೆಂಟೀನಾ: 88,60,078
    ಇರಾನ್: 68,73,642
    (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+