ಏಪ್ರಿಲ್ 14ರಂದು ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?

ನವದೆಹಲಿ, ಏಪ್ರಿಲ್ 14: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಮುಂದುವರಿದ ರಾಷ್ಟ್ರಗಳಲ್ಲೇ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 502,213,040ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,214,678 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 452,467,959 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲೇ ದಕ್ಷಿಣ ಕೊರಿಯಾದಲ್ಲಿ 1.95 ಲಕ್ಷ, ಜರ್ಮನಿ 1.79 ಲಕ್ಷ ಹಾಗೂ ಫ್ರಾನ್ಸ್ 1.46 ಸೋಂಕಿತ ಪ್ರಕರಣಗಳನ್ನು ವರದಿ ಮಾಡಿವೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 14ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,007 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1,007 ಮಂದಿಗೆ ಕೊವಿಡ್

ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆಯೂ ಒಂದು ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1,007 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 21 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 818 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,039,023ಕ್ಕೆ ಏರಿಕೆಯಾಗಿದೆ. ಈ ಪೈಕಿ 42,506,228 ಸೋಂಕಿತರು ಗುಣಮುಖರಾಗಿದ್ದರೆ, 521,767 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 11,028 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 502,213,040 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,214,678 ಮಂದಿ ಪ್ರಾಣ ಬಿಟ್ಟಿದ್ದಾರೆ. 452,467,959 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 43,530,403 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,21,92,880

ಭಾರತ: 4,30,39,023

ಬ್ರೆಜಿಲ್: 3,02,10,853

ಫ್ರಾನ್ಸ್: 2,73,10,055

ಜರ್ಮನಿ: 2,31,16,402

ಯುಕೆ: 2,17,15,116

ರಷ್ಯಾ: 1,80,41,927

ದಕ್ಷಿಣ ಕೊರಿಯಾ: 1,59,79,061

ಇಟಲಿ: 1,54,67,395

ಟರ್ಕಿ: 1,49,78,031

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,14,114

ಬ್ರೆಜಿಲ್: 6,61,552

ಭಾರತ: 5,61,710

ರಷ್ಯಾ: 3,72,766

ಮೆಕ್ಸಿಕೋ: 3,23,848

ಪೆರು: 2,12,547

ಯುಕೆ: 1,71,045

ಇಟಲಿ: 1,61,187

ಇಂಡೋನೇಷಿಯಾ: 1,55,746

ಫ್ರಾನ್ಸ್: 1,43,777

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,00,52,061

ಭಾರತ: 4,25,06,228

ಬ್ರೆಜಿಲ್: 2,91,67,518

ಫ್ರಾನ್ಸ್: 2,44,92,534

ಯುಕೆ: 1,99,73,929

ಜರ್ಮನಿ: 1,94,44,600

ರಷ್ಯಾ: 1,73,21,116

ಟರ್ಕಿ: 1,46,88,473

ಅರ್ಜೆಂಟೀನಾ: 88,89,899

ಇರಾನ್: 69,30,509

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+