ಏಪ್ರಿಲ್ 18ರಂದು ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?
ನವದೆಹಲಿ, ಏಪ್ರಿಲ್ 18: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಹಲವು ರಾಷ್ಟ್ರಗಳಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಲಕ್ಷದ ಆಸುಪಾಸಿಗೆ ಬಂದು ನಿಲ್ಲುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 504,834,476ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,223,645 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 456,066,789 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲೇ ದಕ್ಷಿಣ ಕೊರಿಯಾದಲ್ಲಿ 93 ಸಾವಿರ, ಫ್ರಾನ್ಸ್ 86 ಸೋಂಕಿತ ಪ್ರಕರಣಗಳನ್ನು ವರದಿ ಮಾಡಿವೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 18ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,183 ಮಂದಿಗೆ ಕೊವಿಡ್
ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,183 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 31 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,985 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,044,280ಕ್ಕೆ ಏರಿಕೆಯಾಗಿದೆ. ಈ ಪೈಕಿ 42,510,773 ಸೋಂಕಿತರು ಗುಣಮುಖರಾಗಿದ್ದರೆ, 521,965 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 11,542 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 504,834,476 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,223,645 ಮಂದಿ ಪ್ರಾಣ ಬಿಟ್ಟಿದ್ದಾರೆ. 456,066,789 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 42,544,042 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,23,16,348
ಭಾರತ: 4,30,44,280
ಬ್ರೆಜಿಲ್: 3,02,52,618
ಫ್ರಾನ್ಸ್: 2,77,70,024
ಜರ್ಮನಿ: 2,34,38,293
ಯುಕೆ: 2,17,47,638
ರಷ್ಯಾ: 1,80,74,717
ದಕ್ಷಿಣ ಕೊರಿಯಾ: 1,63,53,495
ಇಟಲಿ: 1,57,12,088
ಟರ್ಕಿ: 1,49,94,937

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,15,451
ಬ್ರೆಜಿಲ್: 6,62,011
ಭಾರತ: 5,21,965
ರಷ್ಯಾ: 3,73,500
ಮೆಕ್ಸಿಕೋ: 3,23,944
ಪೆರು: 2,12,630
ಯುಕೆ: 1,71,396
ಇಟಲಿ: 1,61,687
ಇಂಡೋನೇಷಿಯಾ: 1,55,866
ಫ್ರಾನ್ಸ್: 1,44,157

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,02,02,314
ಭಾರತ: 4,25,10,773
ಬ್ರೆಜಿಲ್: 2,92,27,051
ಫ್ರಾನ್ಸ್: 2,49,14,871
ಯುಕೆ: 2,03,06,336
ಜರ್ಮನಿ: 2,00,85,800
ರಷ್ಯಾ: 1,73,76,141
ಟರ್ಕಿ: 1,47,48,252
ಅರ್ಜೆಂಟೀನಾ: 88,95,999
ಇರಾನ್: 69,45,844
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications