ಏಪ್ರಿಲ್ 19ರಂದು ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಹೆಚ್ಚು?

ನವದೆಹಲಿ, ಏಪ್ರಿಲ್ 19: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 505,410,728ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,225,554 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 457,298,745 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲೇ ದಕ್ಷಿಣ ಕೊರಿಯಾದಲ್ಲಿ 47 ಸಾವಿರ, ಜಪಾನ್ 39 ಸೋಂಕಿತ ಪ್ರಕರಣಗಳನ್ನು ವರದಿ ಮಾಡಿವೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 19ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,247 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1,247 ಮಂದಿಗೆ ಕೊವಿಡ್

ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 1,247 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಬಲಿಯಾಗಿದ್ದು, 928 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,045,527ಕ್ಕೆ ಏರಿಕೆಯಾಗಿದೆ. ಈ ಪೈಕಿ 42,511,701 ಸೋಂಕಿತರು ಗುಣಮುಖರಾಗಿದ್ದರೆ, 521,996 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 11,830 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 505,410,728 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,225,554 ಮಂದಿ ಪ್ರಾಣ ಬಿಟ್ಟಿದ್ದಾರೆ. 457,298,745 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 41,886,429 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,23,77,156

ಭಾರತ: 4,30,45,527

ಬ್ರೆಜಿಲ್: 3,02,61,088

ಫ್ರಾನ್ಸ್: 2,77,70,024

ಜರ್ಮನಿ: 2,34,57,596

ಯುಕೆ: 2,17,47,638

ರಷ್ಯಾ: 1,80,84,151

ದಕ್ಷಿಣ ಕೊರಿಯಾ: 1,64,71,940

ಇಟಲಿ: 1,57,30,676

ಟರ್ಕಿ: 1,49,99,479

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,15,790

ಬ್ರೆಜಿಲ್: 6,62,076

ಭಾರತ: 5,21,996

ರಷ್ಯಾ: 3,73,713

ಮೆಕ್ಸಿಕೋ: 3,23,949

ಪೆರು: 2,12,654

ಯುಕೆ: 1,71,396

ಇಟಲಿ: 1,61,766

ಇಂಡೋನೇಷಿಯಾ: 1,55,903

ಫ್ರಾನ್ಸ್: 1,44,205

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,02,44,093

ಭಾರತ: 4,25,11,701

ಬ್ರೆಜಿಲ್: 2,92,62,483

ಫ್ರಾನ್ಸ್: 2,51,32,303

ಜರ್ಮನಿ: 2,03,47,900

ಯುಕೆ: 2,04,05,317

ರಷ್ಯಾ: 1,73,90,465

ಟರ್ಕಿ: 1,47,63,876

ಅರ್ಜೆಂಟೀನಾ: 88,95,999

ಇರಾನ್: 69,48,946

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+