ಏ.2: ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?
ನವದೆಹಲಿ, ಏಪ್ರಿಲ್ 2: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 490,188,113ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,172,074 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 424,910,093 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 30 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 2ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1260 ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1260 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 82 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1404 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,027,035ಕ್ಕೆ ಏರಿಕೆಯಾಗಿದೆ. ಈ ಪೈಕಿ 42,492,326 ಸೋಂಕಿತರು ಗುಣಮುಖರಾಗಿದ್ದರೆ, 521,293 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 13,416 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 490,188,113 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,172,074 ಮಂದಿ ಪ್ರಾಣ ಬಿಟ್ಟಿದ್ದಾರೆ. 424,910,093 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 59,105,946 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,18,13,515
ಭಾರತ: 4,30,27,035
ಬ್ರೆಜಿಲ್: 2,99,75,165
ಫ್ರಾನ್ಸ್: 2,57,63,472
ಜರ್ಮನಿ: 2,14,59,975
ಯುಕೆ: 2,12,16,874
ರಷ್ಯಾ: 1,78,62,089
ಟರ್ಕಿ: 1,48,73,927
ಇಟಲಿ: 1,47,19,394
ದಕ್ಷಿಣ ಕೊರಿಯಾ: 1,36,39,915

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,07,989
ಬ್ರೆಜಿಲ್: 6,60,065
ಭಾರತ: 5,21,293
ರಷ್ಯಾ: 3,69,064
ಮೆಕ್ಸಿಕೋ: 3,23,127
ಪೆರು: 2,12,256
ಯುಕೆ: 1,65,570
ಇಟಲಿ: 1,59,537
ಇಂಡೋನೇಷಿಯಾ: 1,55,164
ಫ್ರಾನ್ಸ್: 1,42,407
Recommended Video

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 6,53,82,991
ಭಾರತ: 4,24,92,326
ಬ್ರೆಜಿಲ್: 2,87,39,687
ಫ್ರಾನ್ಸ್: 2,33,11,315
ಯುಕೆ: 1,90,75,703
ಜರ್ಮನಿ: 1,68,86,200
ರಷ್ಯಾ: 1,68,84,785
ಟರ್ಕಿ: 1,45,46,788
ಅರ್ಜೆಂಟೀನಾ: 88,63,774
ಇರಾನ್: 68,77,834
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications