ಏಪ್ರಿಲ್ 20ರಂದು ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?

ನವದೆಹಲಿ, ಏಪ್ರಿಲ್ 20: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 506,159,309ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,228,838 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 458,388,009 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲೇ ಜರ್ಮನಿಯಲ್ಲಿ 1.30 ಲಕ್ಷ, ದಕ್ಷಿಣ ಕೊರಿಯಾದಲ್ಲಿ 1.13 ಲಕ್ಷ ಸೋಂಕಿತ ಪ್ರಕರಣಗಳನ್ನು ವರದಿ ಮಾಡಿವೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 20ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,067 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,067 ಮಂದಿಗೆ ಕೊವಿಡ್

ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ XE ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,067 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1547 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,047,594ಕ್ಕೆ ಏರಿಕೆಯಾಗಿದೆ. ಈ ಪೈಕಿ 42,513,248 ಸೋಂಕಿತರು ಗುಣಮುಖರಾಗಿದ್ದರೆ, 522,006 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 12,340 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 506,159,309 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,228,838 ಮಂದಿ ಪ್ರಾಣ ಬಿಟ್ಟಿದ್ದಾರೆ. 458,388,009 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 41,542,462 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,24,16,687

ಭಾರತ: 4,30,47,594

ಬ್ರೆಜಿಲ್: 3,02,79,270

ಫ್ರಾನ್ಸ್: 2,78,16,299

ಜರ್ಮನಿ: 2,35,88,355

ಯುಕೆ: 2,18,63,944

ರಷ್ಯಾ: 1,80,92,791

ದಕ್ಷಿಣ ಕೊರಿಯಾ: 1,65,83,220

ಇಟಲಿ: 1,57,58,002

ಟರ್ಕಿ: 1,50,03,696

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,16,159

ಬ್ರೆಜಿಲ್: 6,62,266

ಭಾರತ: 5,22,006

ರಷ್ಯಾ: 3,73,948

ಮೆಕ್ಸಿಕೋ: 3,23,973

ಪೆರು: 2,12,676

ಯುಕೆ: 1,71,878

ಇಟಲಿ: 1,61,893

ಇಂಡೋನೇಷಿಯಾ: 1,55,937

ಫ್ರಾನ್ಸ್: 1,44,387

Recommended Video

    Golden Duck Out ಆದ Virat Kohli ಹಿಂಗ್ಯಾಕೆ ಮಾಡಿದ್ರು? ನೆಟ್ಟಿಗರಿಂದ ಫುಲ್ ತರಾಟೆ | Oneindia Kannada
    ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

    ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

    ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

    ಯುಎಸ್ಎ: 8,02,76,197

    ಭಾರತ: 4,25,13,248

    ಬ್ರೆಜಿಲ್: 2,92,98,848

    ಫ್ರಾನ್ಸ್: 2,53,01,145

    ಜರ್ಮನಿ: 2,06,09,400

    ಯುಕೆ: 2,04,05,317

    ರಷ್ಯಾ: 2,04,98,917

    ಟರ್ಕಿ: 1,47,80,437

    ಅರ್ಜೆಂಟೀನಾ: 88,95,999

    ಇರಾನ್: 69,52,007

    (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+