ಏಪ್ರಿಲ್ 21ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಏಪ್ರಿಲ್ 21: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 507,126,167ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,232,959 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 459,567,528 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲೇ ಜರ್ಮನಿಯಲ್ಲಿ 1.87 ಲಕ್ಷ, ಫ್ರ್ಯಾನ್ಸ್ 1.55 ಲಕ್ಷ ಹಾಗೂ ದಕ್ಷಿಣ ಕೊರಿಯಾದಲ್ಲಿ 1.11 ಲಕ್ಷ ಸೋಂಕಿತ ಪ್ರಕರಣಗಳನ್ನು ವರದಿ ಮಾಡಿವೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 21ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,067 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,067 ಮಂದಿಗೆ ಕೊವಿಡ್

ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,380 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 56 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,231 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,049,974ಕ್ಕೆ ಏರಿಕೆಯಾಗಿದೆ. ಈ ಪೈಕಿ 42,514,479 ಸೋಂಕಿತರು ಗುಣಮುಖರಾಗಿದ್ದರೆ, 522,062 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 13,433 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 507,126,167 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,232,959 ಮಂದಿ ಪ್ರಾಣ ಬಿಟ್ಟಿದ್ದಾರೆ. 459,567,528 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 41,325,680 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,24,88,517
ಭಾರತ: 4,30,49,974
ಬ್ರೆಜಿಲ್: 3,03,11,969
ಫ್ರಾನ್ಸ್: 2,79,70,010
ಜರ್ಮನಿ: 2,37,75,588
ಯುಕೆ: 2,18,90,037
ರಷ್ಯಾ: 1,81,10,861
ದಕ್ಷಿಣ ಕೊರಿಯಾ: 1,66,74,045
ಇಟಲಿ: 1,58,58,442
ಟರ್ಕಿ: 1,50,07,364

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,17,093
ಬ್ರೆಜಿಲ್: 6,62,470
ಭಾರತ: 5,22,062
ರಷ್ಯಾ: 3,74,368
ಮೆಕ್ಸಿಕೋ: 3,23,973
ಪೆರು: 2,12,704
ಯುಕೆ: 1,72,386
ಇಟಲಿ: 1,62,098
ಇಂಡೋನೇಷಿಯಾ: 1,55,974
ಫ್ರಾನ್ಸ್: 1,44,614

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,03,09,804
ಭಾರತ: 4,25,14,479
ಬ್ರೆಜಿಲ್: 2,93,40,802
ಫ್ರಾನ್ಸ್: 2,54,70,229
ಜರ್ಮನಿ: 2,08,53,100
ಯುಕೆ: 2,05,81,202
ರಷ್ಯಾ: 1,74,37,610
ಟರ್ಕಿ: 1,47,98,294
ಅರ್ಜೆಂಟೀನಾ: 88,95,999
ಇರಾನ್: 69,58,045
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+