ಏಪ್ರಿಲ್ 22ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ನವದೆಹಲಿ, ಏಪ್ರಿಲ್ 22: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 508,121,901ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,237,512 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 460,502,882 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲೇ ಜರ್ಮನಿಯಲ್ಲಿ 1.39 ಲಕ್ಷ, ಫ್ರ್ಯಾನ್ಸ್ 1.04 ಲಕ್ಷ ಹಾಗೂ ದಕ್ಷಿಣ ಕೊರಿಯಾದಲ್ಲಿ 90 ಸಾವಿರ ಸೋಂಕಿತ ಪ್ರಕರಣಗಳನ್ನು ವರದಿ ಮಾಡಿವೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 22ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,451 ಮಂದಿಗೆ ಕೊವಿಡ್
ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,451 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 54 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,589 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,052,425ಕ್ಕೆ ಏರಿಕೆಯಾಗಿದೆ. ಈ ಪೈಕಿ 42,516,068 ಸೋಂಕಿತರು ಗುಣಮುಖರಾಗಿದ್ದರೆ, 522,116 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 14,241 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 508,121,901 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,237,512 ಮಂದಿ ಪ್ರಾಣ ಬಿಟ್ಟಿದ್ದಾರೆ. 460,502,882 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 41,381,507 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,25,53,058
ಭಾರತ: 4,30,52,425
ಬ್ರೆಜಿಲ್: 3,03,30,629
ಫ್ರಾನ್ಸ್: 2,80,76,017
ಜರ್ಮನಿ: 2,39,15,437
ಯುಕೆ: 2,19,09,509
ರಷ್ಯಾ: 1,81,10,861
ದಕ್ಷಿಣ ಕೊರಿಯಾ: 1,67,55,055
ಇಟಲಿ: 1,59,34,437
ಟರ್ಕಿ: 1,50,10,718

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,17,609
ಬ್ರೆಜಿಲ್: 6,62,556
ಭಾರತ: 5,22,116
ರಷ್ಯಾ: 3,74,368
ಮೆಕ್ಸಿಕೋ: 3,24,033
ಪೆರು: 2,12,715
ಯುಕೆ: 1,73,032
ಇಟಲಿ: 1,62,264
ಇಂಡೋನೇಷಿಯಾ: 1,56,015
ಫ್ರಾನ್ಸ್: 1,44,799
Recommended Video

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,03,55,389
ಭಾರತ: 4,25,16,068
ಬ್ರೆಜಿಲ್: 2,93,53,398
ಫ್ರಾನ್ಸ್: 2,56,18,673
ಜರ್ಮನಿ: 2,10,58,000
ಯುಕೆ: 2,06,52,937
ರಷ್ಯಾ: 1,74,37,610
ಟರ್ಕಿ: 1,48,17,258
ಅರ್ಜೆಂಟೀನಾ: 88,95,999
ಇರಾನ್: 69,58,045
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications