ಏಪ್ರಿಲ್ 23ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಏಪ್ರಿಲ್ 23: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 508,726,887ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,240,856 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 461,147,867 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲೇ ಜರ್ಮನಿಯಲ್ಲಿ 1.04 ಲಕ್ಷ, ಫ್ರ್ಯಾನ್ಸ್ 88 ಸಾವಿರ ಹಾಗೂ ದಕ್ಷಿಣ ಕೊರಿಯಾದಲ್ಲಿ 84 ಸಾವಿರ ಸೋಂಕಿತ ಪ್ರಕರಣಗಳನ್ನು ವರದಿ ಮಾಡಿವೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 23ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,451 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,451 ಮಂದಿಗೆ ಕೊವಿಡ್

ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2527 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 33 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1656 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,054,952ಕ್ಕೆ ಏರಿಕೆಯಾಗಿದೆ. ಈ ಪೈಕಿ 42,517,724 ಸೋಂಕಿತರು ಗುಣಮುಖರಾಗಿದ್ದರೆ, 522,149 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 15,079 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 508,726,887 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,240,856 ಮಂದಿ ಪ್ರಾಣ ಬಿಟ್ಟಿದ್ದಾರೆ. 461,147,867 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 41,338,164 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,26,28,089

ಭಾರತ: 4,30,54,952

ಬ್ರೆಜಿಲ್: 3,03,38,697

ಫ್ರಾನ್ಸ್: 2,81,64,406

ಜರ್ಮನಿ: 2,40,19,768

ಯುಕೆ: 2,19,33,206

ರಷ್ಯಾ: 1,81,28,691

ದಕ್ಷಿಣ ಕೊರಿಯಾ: 1,68,30,469

ಇಟಲಿ: 1,60,08,181

ಟರ್ಕಿ: 1,50,13,616

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,18,154

ಬ್ರೆಜಿಲ್: 6,62,618

ಭಾರತ: 5,22,149

ರಷ್ಯಾ: 3,74,734

ಮೆಕ್ಸಿಕೋ: 3,24,060

ಪೆರು: 2,12,724

ಯುಕೆ: 1,73,352

ಇಟಲಿ: 1,62,466

ಇಂಡೋನೇಷಿಯಾ: 1,56,040

ಫ್ರಾನ್ಸ್: 1,44,945

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,04,02,401

ಭಾರತ: 4,25,17,724

ಬ್ರೆಜಿಲ್: 2,93,53,398

ಫ್ರಾನ್ಸ್: 2,57,50,641

ಜರ್ಮನಿ: 2,11,79,400

ಯುಕೆ: 2,07,14,072

ರಷ್ಯಾ: 1,74,64,120

ಟರ್ಕಿ: 1,48,36,951

ಅರ್ಜೆಂಟೀನಾ: 88,95,999

ಇರಾನ್: 69,60,970

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+