ಏಪ್ರಿಲ್ 29ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ನವದೆಹಲಿ, ಏಪ್ರಿಲ್ 29: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 512,302,834ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,256,842 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 466,159,197 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 29ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3,687 ಮಂದಿಗೆ ಕೊವಿಡ್
ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಎರಡು ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 3,687 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 60 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 2,496 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,072,486ಕ್ಕೆ ಏರಿಕೆಯಾಗಿದೆ. ಈ ಪೈಕಿ 42,530,622 ಸೋಂಕಿತರು ಗುಣಮುಖರಾಗಿದ್ದರೆ, 523,753 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 18,111 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 512,302,834 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,256,842 ಮಂದಿ ಪ್ರಾಣ ಬಿಟ್ಟಿದ್ದಾರೆ. 466,159,197 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 39,886,795 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,29,54,768
ಭಾರತ: 4,30,72,486
ಬ್ರೆಜಿಲ್: 3,04,18,920
ಫ್ರಾನ್ಸ್: 2,85,42,884
ಜರ್ಮನಿ: 2,46,08,074
ಯುಕೆ: 2,20,25,925
ರಷ್ಯಾ: 1,81,74,991
ದಕ್ಷಿಣ ಕೊರಿಯಾ: 1,71,94,616
ಇಟಲಿ: 1,63,49,788
ಟರ್ಕಿ: 1,50,28,397

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,20,159
ಬ್ರೆಜಿಲ್: 6,63,289
ಭಾರತ: 5,23,753
ರಷ್ಯಾ: 3,75,727
ಮೆಕ್ಸಿಕೋ: 3,24,254
ಪೆರು: 2,12,798
ಯುಕೆ: 1,74,696
ಇಟಲಿ: 1,63,244
ಇಂಡೋನೇಷಿಯಾ: 1,56,217
ಫ್ರಾನ್ಸ್: 1,45,711

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,06,23,433
ಭಾರತ: 4,25,30,622
ಬ್ರೆಜಿಲ್: 2,94,99,422
ಫ್ರಾನ್ಸ್: 2,65,52,320
ಜರ್ಮನಿ: 2,22,27,600
ಯುಕೆ: 2,11,30,857
ರಷ್ಯಾ: 1,75,28,963
ಟರ್ಕಿ: 1,49,27,975
ಅರ್ಜೆಂಟೀನಾ: 88,95,999
ಇರಾನ್: 69,77,760
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications