ಏಪ್ರಿಲ್ 30ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ನವದೆಹಲಿ, ಏಪ್ರಿಲ್ 30: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 512,986,938ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,259,692 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 466,862,330 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 30ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3,378 ಮಂದಿಗೆ ಕೊವಿಡ್
ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಎರಡು ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 3,378 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 50 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 2,755 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,072,486ಕ್ಕೆ ಏರಿಕೆಯಾಗಿದೆ. ಈ ಪೈಕಿ 42,533,377 ಸೋಂಕಿತರು ಗುಣಮುಖರಾಗಿದ್ದರೆ, 523,803 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 18,684 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 512,986,938 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,259,692 ಮಂದಿ ಪ್ರಾಣ ಬಿಟ್ಟಿದ್ದಾರೆ. 466,862,330 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 39,864,916 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,30,37,059
ಭಾರತ: 4,30,75,864
ಬ್ರೆಜಿಲ್: 3,04,33,042
ಫ್ರಾನ್ಸ್: 2,85,95,803
ಜರ್ಮನಿ: 2,47,04,597
ಯುಕೆ: 2,20,38,340
ರಷ್ಯಾ: 1,81,82,354
ದಕ್ಷಿಣ ಕೊರಿಯಾ: 1,72,37,878
ಇಟಲಿ: 1,64,09,183
ಟರ್ಕಿ: 1,50,30,321

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,20,660
ಬ್ರೆಜಿಲ್: 6,63,484
ಭಾರತ: 5,23,803
ರಷ್ಯಾ: 3,75,884
ಮೆಕ್ಸಿಕೋ: 3,24,294
ಪೆರು: 2,12,810
ಯುಕೆ: 1,74,912
ಇಟಲಿ: 1,63,377
ಇಂಡೋನೇಷಿಯಾ: 1,56,240
ಫ್ರಾನ್ಸ್: 1,45,869

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,06,55,685
ಭಾರತ: 4,25,33,377
ಬ್ರೆಜಿಲ್: 2,95,07,557
ಫ್ರಾನ್ಸ್: 2,66,93,852
ಜರ್ಮನಿ: 2,23,07,900
ಯುಕೆ: 2,11,68,267
ರಷ್ಯಾ: 1,75,39,985
ಟರ್ಕಿ: 1,49,36,277
ಅರ್ಜೆಂಟೀನಾ: 88,95,999
ಇರಾನ್: 69,80,483
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications