ಏ 5: ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?
ನವದೆಹಲಿ, ಏಪ್ರಿಲ್ 5: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 493,155,276ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,180,527 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 428,766,283 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 19 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 5ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 795 ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 795 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 58 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,280 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,029,839ಕ್ಕೆ ಏರಿಕೆಯಾಗಿದೆ. ಈ ಪೈಕಿ 42,496,369 ಸೋಂಕಿತರು ಗುಣಮುಖರಾಗಿದ್ದರೆ, 521,446 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 12,024 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 493,155,276 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,180,527 ಮಂದಿ ಪ್ರಾಣ ಬಿಟ್ಟಿದ್ದಾರೆ. 428,766,283 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 58,208,466 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,18,67,963
ಭಾರತ: 4,30,29,839
ಬ್ರೆಜಿಲ್: 3,00,12,798
ಫ್ರಾನ್ಸ್: 2,60,25,500
ಜರ್ಮನಿ: 2,17,69,026
ಯುಕೆ: 2,13,59,681
ರಷ್ಯಾ: 1,79,26,104
ಟರ್ಕಿ: 1,49,07,378
ಇಟಲಿ: 1,48,77,144
ದಕ್ಷಿಣ ಕೊರಿಯಾ: 1,42,67,401

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,08,679
ಬ್ರೆಜಿಲ್: 6,60,381
ಭಾರತ: 5,21,446
ರಷ್ಯಾ: 3,70,311
ಮೆಕ್ಸಿಕೋ: 3,23,235
ಪೆರು: 2,12,354
ಯುಕೆ: 1,65,780
ಇಟಲಿ: 1,59,909
ಇಂಡೋನೇಷಿಯಾ: 1,55,349
ಫ್ರಾನ್ಸ್: 1,42,655

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 6,58,41,278
ಭಾರತ: 4,24,96,369
ಬ್ರೆಜಿಲ್: 2,88,34,486
ಫ್ರಾನ್ಸ್: 2,36,15,792
ಯುಕೆ: 1,92,62,871
ಜರ್ಮನಿ: 1,74,07,700
ರಷ್ಯಾ: 1,70,35,336
ಟರ್ಕಿ: 1,45,84,479
ಅರ್ಜೆಂಟೀನಾ: 88,70,542
ಇರಾನ್: 68,90,768
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications